ಗದಗ: ಮುದ್ರಣ ಕಾಶಿ ಗದಗಕ್ಕೂ ಮಠದ ಉತ್ತರಾಧಿಕಾರಿ ವಿವಾದ ಕಾಲಿಟ್ಟಿದೆ. ಉತ್ತರ ಕರ್ನಾಟಕದ ಪ್ರಸಿದ್ಧ ಜಗದ್ಗುರು ಶಿವಾನಂದ ಮಠದ ಉತ್ತರಾಧಿಕಾರಿಯನ್ನು ಪದಚ್ಯುತಿಗೊಳಿಸಿದ ಹಿನ್ನೆಲೆಯಲ್ಲಿ ಶ್ರೀಮಠದ ಮೊದಲ ಹಿರಿಯ ಪೀಠಾಧಿಪತಿ ಶ್ರೀ ಅಭಿನವ ಶಿವಾನಂದ ಮಹಾಸ್ವಾಮೀಜಿ ವಿರುದ್ಧ ಪದಚ್ಯುತಗೊಂಡ ಉತ್ತರಾಧಿಕಾರಿ ಸದಾಶಿವಾನಂದ ಭಾರತಿ ಸ್ವಾಮೀಜಿ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2018ರ ಮೇ 25ರಂದು ಮಠದ ಉತ್ತರಾಧಿಕಾರಿಯಾಗಿ ಸದಾಶಿವಾನಂದ ಭಾರತಿ ಸ್ವಾಮೀಜಿ(30) (ಮೂಲ ಹೆಸರು ಘೋಡಗೇರಿಯ ಕೈವಲ್ಯಾನಂದ ಗುರು ಮಲ್ಲಯ್ಯಸ್ವಾಮಿ) ಅವರನ್ನು ನೇಮಿಸಲಾಗಿತ್ತು. ಆದರೆ ಮಠದ ಹಿರಿಯ ಪೀಠಾಧಿಪತಿ ಅಭಿನವ ಶಿವಾನಂದ ಮಹಾಸ್ವಾಮೀಜಿ ಅವರು, ಸದಾಶಿವಾನಂದ ಭಾರತಿ ಸ್ವಾಮೀಜಿ ಅವರನ್ನು ಉತ್ತರಾಧಿಕಾರಿ ಸ್ಥಾನದಿಂದ ಪದಚ್ಯುತಗೊಳಿಸಿದ್ದಾರೆ. ನವೆಂಬರ್ 28ರಂದು ಗದಗ ಉಪ ನೋಂದಣಾಧಿಕಾರಿ ಕಚೇರಿಯಿಂದ ರದ್ದು ಮಾಡಿ ಆದೇಶ ನೀಡಲಾಗಿದೆ. ಸದಾಶಿವಾನಂದ ಭಾರತಿ ಸ್ವಾಮೀಜಿ ಅವರನ್ನು ಉತ್ತರಾಧಿಕಾರಿ ಸ್ಥಾನದಿಂದ ಪದಚ್ಯುತಿಗೊಳಿಸಿದ್ದಕ್ಕೆ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ | Bhagavad Gita Abhiyan | ಭಗವದ್ಗೀತೆ ಜ್ಞಾನದ ಗಂಗೆ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್