Site icon Vistara News

Street dog attack: ಬಾಲಕನ ಮೇಲೆ ಬೀದಿ ನಾಯಿಗಳ ಬರ್ಬರ ದಾಳಿ

Street dog attack

ಗದಗ: ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನ ಮೇಲೆ ಎರಗಿದ ರಕ್ಕಸ ಬೀದಿ ನಾಯಿಗಳು (Street dog attack) ಎಲ್ಲೆಂದರಲ್ಲಿ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಹಿರೇ ಬಜಾರದಲ್ಲಿ ಬೀದಿಯಲ್ಲಿ ಬಾಲಕ ಒಬ್ಬಂಟಿಯಾಗಿ ತೆರಳುತ್ತಿದ್ದಾಗ ಘಟನೆ ನಡೆದಿದೆ. ಈ ಬರ್ಬರ ದೃಶ್ಯ ಸಿಸಿಟಿವಿಯಲ್ಲಿಯೂ ಸೆರೆಯಾಗಿದೆ. ವಾಣಿಪೇಟೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಆದಿತ್ಯ ಹನಮಂತಪ್ಪ ಪವಾರ(9) ದಾಳಿಗೊಳಗಾದ ಬಾಲಕ.

ಮಧ್ಯಾಹ್ನ ಮನೆಗೆ ಊಟಕ್ಕೆ ಹೋಗಿ ವಾಪಸ್ಸು ಬರುವ ಸಂದರ್ಭದಲ್ಲಿ ಬಾಲಕನ ಮೇಲೆ ನಾಯಿಗಳು ಏಕಾಏಕಿ ದಾಳಿ ನಡೆಸಿವೆ. ತಕ್ಷಣವೇ ಪಾಲಕರು ಹಾಗೂ ಸಾರ್ವಜನಿಕರ ಸಹಾಯದಿಂದ ಬಾಲಕನ ರಕ್ಷಣೆ ಮಾಡಲಾಗಿದೆ. ಬಾಲಕನಿಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, 17 ಚುಚ್ಚುಮದ್ದು ನೀಡಿ ಬಾಲಕನ ಆರೈಕೆ ಮಾಡಲಾಗುತ್ತಿದೆ.

ಹೆಚ್ಚಾಗಿರುವ ಬೀದಿ ನಾಯಿಗಳ ಹಾವಳಿ ತಡೆಯದ ಪುರಸಭೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಗಳಲ್ಲಿ ಒಬ್ಬಂಟಿಯಾಗಿ ಓಡಾಡುವವರೇ ಈ ನಾಯಿಗಳ ಟಾರ್ಗೆಟ್ ಆಗಿದ್ದಾರೆ. ಮಕ್ಕಳು ಮಾತ್ರವಲ್ಲ ದೊಡ್ಡವರನ್ನೂ ಈ ನಾಯಿಗಳು ಅಟ್ಟಾಡಿಸಿಕೊಂಡು ಹೋಗುತ್ತಿವೆ. ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ನಾಗರಿಕರಿಗೆ ಪ್ರಾಣಾಂತಿಕವಾಗುತ್ತಿವೆ. ಹಲವು ಬಾರಿ ದ್ವಿಚಕ್ರ ವಾಹನ ಸವಾರರ ಮೇಲೆಯೂ ಬೀದಿನಾಯಿಗಳು ದಾಳಿ ನಡೆಸಿವೆ.

ಇದನ್ನೂ ಓದಿ: Street dog attack: ಶಾಲಾ ವಿದ್ಯಾರ್ಥಿಗಳ ಮೇಲೆ ಬೀದಿ ನಾಯಿ ದಾಳಿ, ನಾಲ್ವರಿಗೆ ಗಾಯ

Exit mobile version