Site icon Vistara News

Gadinada Chetana Award: ಕೇರಳದ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ ಸೇರಿ ಮೂವರಿಗೆ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ

Gadinada Chetana State Award announced

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರತಿ ವರ್ಷ ನೀಡುವ ‘ಗಡಿನಾಡ ಚೇತನ ರಾಜ್ಯ ಪ್ರಶಸ್ತಿ’ಗೆ ಕೇರಳದ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ ಸೇರಿ ಮೂವರು ಆಯ್ಕೆಯಾಗಿದ್ದಾರೆ. ನಾಡು, ನುಡಿ, ಸಾಹಿತ್ಯ ಹಾಗೂ ಕನ್ನಡ ಭಾಷೆಗಾಗಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಹಾಗೂ ಹೊರ ರಾಜ್ಯದ ಗಡಿ ಕನ್ನಡ ಪ್ರದೇಶಗಳಲ್ಲಿನ ಸಂಘ- ಸಂಸ್ಥೆಗಳು, ಮಹನೀಯರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.

ಮಾರ್ಚ್‌ 1ರಂದು ನಡೆದ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ನೇತೃತ್ವದ ಆಯ್ಕೆ ಸಮಿತಿ ಸಭೆಯಲ್ಲಿ 2023-24ನೇ ಸಾಲಿನ “ಗಡಿನಾಡ ಚೇತನ” ರಾಜ್ಯ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಭಾಲ್ಕಿ ಹಿರೇಮಠದ ಪೂಜ್ಯ ಶ್ರೀ ಡಾ.ಚನ್ನಬಸವ ಪಟ್ಟದ್ದೇವರು, ಕನ್ನಡದ ಏಕೀಕರಣ ಹೋರಾಟದ ವೀರಾಗ್ರಣಿ ಡಾ.ಜಯದೇವಿತಾಯಿ ಲಿಗಾಡೆ ಹಾಗೂ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಮೂರು ಪ್ರತ್ಯೇಕ ಗಡಿನಾಡ ಚೇತನ ರಾಜ್ಯ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪುರಸ್ಕೃತರು

ಶ್ರೀ ಡಾ.ಚನ್ನಬಸವ ಪಟ್ಟದ್ದೇವರು ಪ್ರಶಸ್ತಿ- ರಾಧಾಕೃಷ್ಣ ಉಳಿಯತ್ತಡ್ಕ, ಹಿರಿಯ ಸಾಹಿತಿ, ಕಾಸರಗೋಡು, ಕೇರಳ
ಡಾ.ಜಯದೇವಿತಾಯಿ ಲಿಗಾಡೆ ಪ್ರಶಸ್ತಿ- ಪಂಚಾಕ್ಷರಿ ಪುಣ್ಯಶೆಟ್ಟಿ, ಹಿರಿಯ ಹೋರಾಟಗಾರ, ಬೀದ‌ರ್
ಕಯ್ಯಾರ ಕಿಞ್ಞಣ್ಣ ರೈ ಪ್ರಶಸ್ತಿ-ಪ್ರೊ.ಬಿ.ಎಸ್.ಗವಿಮಠ, ಚಿಂತಕರು, ಬೆಳಗಾವಿ

ಇದನ್ನೂ ಓದಿ | ದಶಮುಖ ಅಂಕಣ: ಮಸಣದಲ್ಲಿ ಕೆಲವು ಕ್ಷಣ

ಈ ಪ್ರಶಸ್ತಿಗಳಿಗೆ ಆಯ್ಕೆ ಮಾಡಲು 2023- 24ನೇ ಸಾಲಿನಲ್ಲಿ ಸರ್ಕಾರವು ಹಿರಿಯ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯಲ್ಲಿ‌ ಆಯ್ಕೆ ಸಮಿತಿ ರಚಿಸಿತ್ತು. ಸಮಿತಿಯಲ್ಲಿ ಹಿರಿಯ ಸಾಹಿತಿ ಡಾ.ಸರಜೂ ಕಾಟ್ಕರ್, ಆಂಧ್ರಪ್ರದೇಶದ ಕನ್ನಡ ಪ್ರಾಧ್ಯಾಪಕರಾದ ಡಾ.ಎಂ.ಎಸ್.ದುರ್ಗಾ ಪ್ರವೀಣ್, ದಕ್ಷಿಣ ಕನ್ನಡ ಜಿಲ್ಲೆಯ ಕನ್ನಡ ಪ್ರಾಧ್ಯಾಪಕ ಡಾ.ಆರ್.ನಾಗಪ್ಪಗೌಡ ಮತ್ತು ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ಇದ್ದರು.

Exit mobile version