ಬೆಂಗಳೂರು: 2020-21ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ 176 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪ್ರತಿ ಗ್ರಾಮ ಪಂಚಾಯಿತಿಗೆ 5 ಲಕ್ಷ ರೂ.ಗಳಂತೆ ಒಟ್ಟು 8.80 ಕೋಟಿ ರೂಪಾಯಿ ಪ್ರೋತ್ಸಾಹ ಧನ ಬಿಡುಗಡೆ ಮಾಡಲಾಗಿದೆ.
2020-21ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯಿತಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಅದರಂತೆ ರಾಜ್ಯದ ಗ್ರಾಮ ಪಂಚಾಯತಿಗಳು ಅರ್ಜಿ ಸಲ್ಲಿಸಿದ್ದವು. ಇವುಗಳಲ್ಲಿ ಉತ್ತಮ ಆಡಳಿತ ನಿರ್ವಹಣೆ ತೋರಿರುವ ಗ್ರಾಮ ಪಂಚಾಯಿತಿಗಳನ್ನು ತಾಲೂಕಿಗೆ ಒಂದರಂತೆ ಆಯ್ಕೆ ಮಾಡಿ ಒಟ್ಟು 176 ಗ್ರಾಮ ಪಂಚಾಯತಿಗಳನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಆಯ್ಕೆ ಮಾಡಿ ಜಿಲ್ಲಾ ಪಂಚಾಯತಿ ಸಿಇಒಗಳ ನೇತೃತ್ವದ ಆಯ್ಕೆ ಸಮಿತಿಯ ಶಿಫಾರಸ್ಸು ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಕೆ.ಬಿ.ಆಂಜನಪ್ಪ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿಗಳು ಸ್ಥಳೀಯ ಮಟ್ಟದಲ್ಲಿ ಸ್ವಯಂ ಆಡಳಿತ ಸಂಸ್ಥೆಗಳಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂಬ ಸದುದ್ದೇಶದಿಂದ ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯಿತಿಗಳನ್ನು ಪ್ರೋತ್ಸಾಹಿಸಲು 2013-14ನೇ ಸಾಲಿನಿಂದ ಪ್ರತಿ ತಾಲೂಕಿಗೆ ಒಂದರಂತೆ ಗ್ರಾಮ ಪಂಚಾಯತಿಯನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿ ರೂ.5.00 ಲಕ್ಷಗಳ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಈ ಕೆಳಕಂಡ 176 ಗ್ರಾಮ ಪಂಚಾಯಿತಿಗಳನ್ನು ೨೦೨೦-೨೧ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ | Mysore Dasara | ದಸರಾ ಉತ್ಸವದ ಮೂರನೇ ದಿನ ಯೋಗ ದಸರಾ, ಕವಿಗೋಷ್ಠಿ ಸೇರಿ ಹಲವು ಕಾರ್ಯಕ್ರಮ