ಬೆಂಗಳೂರು: ಗೌರಿ- ಗಣೇಶ ಹಬ್ಬಕ್ಕೆ (Ganesh chaturthi) ದಿನಗಣನೆ ಬಾಕಿ ಇದೆ. ಬೆಂಗಳೂರಲ್ಲಿ ಗಣೇಶೋತ್ಸವ ಆಚರಣೆ ನಿಮಿತ್ತ ಕಾರ್ಯಕ್ರಮದ ಆಯೋಜಕರಿಗೆ ನಗರ ಪೊಲೀಸರು ಮಾರ್ಗಸೂಚಿಯನ್ನು (Police Guild lines) ಬಿಡುಗಡೆ ಮಾಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಕಡ್ಡಾಯ ಮಾಡಲಾಗಿದೆ. ಜತೆಗೆ ಹಬ್ಬದ ನೆಪದಲ್ಲಿ ಹಣ ಸಂಗ್ರಹ ಮಾಡುವುದನ್ನು ನಿಷೇಧಿಸಲಾಗಿದೆ.
ಗಣೇಶ ಕೂರಿಸಲು ಮಾರ್ಗಸೂಚಿಗಳೇನು?
- ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಕಡ್ಡಾಯ ಮಾಡಲಾಗಿದೆ.
- ಗಣೇಶ ಕೂರಿಸಲು ಕಾನೂನು ಬಾಹಿರವಾಗಿ ಹಣ ಸಂಗ್ರಹ ಮಾಡುವಂತಿಲ್ಲ.
- ಚಪ್ಪರ, ಶಾಮಿಯಾನ, ಪೆಂಡಾಲ್ಗೆ ವಿಶೇಷ ಅನುಮತಿ ಪಡೆಯಬೇಕು.
- ಮುಖ್ಯವಾಗಿ ವಿವಾದಿತ ಜಾಗದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತಿಲ್ಲ.
- ಗಣೇಶ ಮೂರ್ತಿ ಮೆರವಣಿಗೆ ವೇಳೆ ಅಹಿಕತರ ಘಟನೆ ನಡೆದರೆ ಅದಕ್ಕೆ ಸಂಘಟಕರೇ ಹೊಣೆ.
- ಆಯೋಜಕರು ಕಾರ್ಯಕ್ರಮ ನಡೆಯುವ ಜಾಗದಲ್ಲಿ ಬೆಂಕಿ ನಂದಿಸುವ ಸಾಮಾಗ್ರಿಗಳು, ಸಿಸಿಟಿವಿ ಸೇರಿದಂತೆ ಅಗತ್ಯ ಕ್ರಮವಹಿಸಬೇಕು.
- ಗಣೇಶ ಕೂರಿಸುವ ಜಾಗದಲ್ಲಿ ಕಟ್ಟಿಗೆ, ಉರುವಲು, ಸೀಮೆ ಎಣ್ಣೆ ಒಟ್ಟಾರೆ ಬೆಂಕಿ ಸಂಬಂಧಿಸಿದ ಸಾಮಾಗ್ರಿಗಳನ್ನು ಇಡಬಾರದು.
- ವಿದ್ಯುತ್ ಸಂಪರ್ಕ ಬೇಕಾಗಿರುವ ಬಗ್ಗೆ ಬೆಸ್ಕಾಂ ಮತ್ತು ಅಗ್ನಿಶಾಮಕ ಇಲಾಖೆಯ NOC ಕಡ್ಡಾಯ.
- ಧ್ವನಿ ವರ್ಧಕ ಬಳಕೆಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಡೆಡ್ ಲೈನ್ ನೀಡಲಾಗಿದೆ.
- ಯಾವುದೇ ಕಾರಣಕ್ಕೂ ಡಿಜೆ (DJ) ಸೌಂಡ್ ಸಿಸ್ಟಮ್ ಅಳವಡಿಕೆಗೆ ಅವಕಾಶ ಇಲ್ಲ.
- ಮೆರವಣಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ಪ್ರಾರ್ಥನೆ ಸ್ಥಳಗಳ ಮುಂಭಾಗದಲ್ಲಿ ಪಟಾಕಿ, ಸಿಡಿ ಮದ್ದು ನಿಷೇಧಿಸಲಾಗಿದೆ.
- ಗಣಪತಿ ಮೂರ್ತಿ ವಿಸರ್ಜನೆ ಕಾರ್ಯಕ್ರಮ ರಾತ್ರಿ 10 ಗಂಟೆಯೊಳಗೆ ಮುಗಿಸಬೇಕು.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ