Site icon Vistara News

Ganesh Chaturthi | ಸರ್ಕಾರಿ ಉರ್ದು ಶಾಲೆಯಲ್ಲಿ ಸೌಹಾರ್ದತೆಯ ಗಣೇಶ ಉತ್ಸವ

Ganesh Chaturthi

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ತಂಬ್ರಹಳ್ಳಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂದು-ಮುಸ್ಲಿಮರು ಸೌಹಾರ್ದತೆಯಿಂದ ಗಣೇಶ ಹಬ್ಬ (Ganesh Chaturthi) ಆಚರಿಸಿದ್ದಾರೆ.

ಉರ್ದು ಶಾಲೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಹಿಂದು-ಮುಸ್ಲಿಂ ವಿದ್ಯಾರ್ಥಿಗಳು ಗಣೇಶನಿಗೆ ಪೂಜೆ ಸಲ್ಲಿಸಿದ್ದಾರೆ. 1 ರಿಂದ 5 ತರಗತಿವರೆಗಿನ ಉರ್ದು ಶಾಲೆಯಲ್ಲಿನ 95 ಮಕ್ಕಳ ಪೈಕಿ 84 ಮುಸ್ಲಿಂ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಲ್ಲರೂ ಸೇರಿ ಸಂಭ್ರಮದಿಂದ ಗಣೇಶ ಹಬ್ಬ ಆಚರಣೆ ಮಾಡುವ ಮೂಲಕ ಹಿಂದು-ಮುಸ್ಲಿಂ ಭಾವೈಕ್ಯತೆ ಸಂದೇಶವನ್ನು ಸಾರಲಾಗಿದೆ.

ಈ ಹಿಂದೆ ಶಾಲೆಯಲ್ಲಿ ಕೃಷ್ಣಾಷ್ಟಮಿಯನ್ನೂ ಅದ್ಧೂರಿಯಾಗಿ ಆಚರಿಸಲಾಗಿತ್ತು. ಆ ಸಂದರ್ಭದಲ್ಲಿ ಮಕ್ಕಳು ರಾಧೆ, ಕೃಷ್ಣರ ವೇಷ ಭೂಷಣ ಧರಿಸಿ ಗಮನ ಸೆಳೆದಿದ್ದರು. ಈಗ ಗಣೇಶ ಚತುರ್ಥಿಯನ್ನು ಆಚರಿಸಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ | Ganesh Chaturthi 2022 | ಅರಮನೆಯಲ್ಲಿ ತ್ರಿಷಿಕಾ ಕುಮಾರಿ ಒಡೆಯರ್‌ ಗೌರಿ ಪೂಜೆ ಸಂಭ್ರಮ

Exit mobile version