Site icon Vistara News

ಗಣೇಶ ವಿಸರ್ಜನೆ ವೇಳೆ ಗುಂಪು ಗಲಭೆ; 15ಕ್ಕೂ ಹೆಚ್ಚು ಮಂದಿಗೆ ಗಾಯ

ಗಣೇಶ ವಿಸರ್ಜನೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕು ವ್ಯಾಪ್ತಿಯ ದಡೆಸಗೂರು ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ‌ಗುಂಪುಗಳ ನಡುವೆ ಮಾರಾಮಾರಿ ನಡೆದು, 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ಗಣೇಶನ ಮೂರ್ತಿ ಭಗ್ನಗೊಳಿಸಿದ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ದೊಣ್ಣೆ, ಕೊಡಲಿ ಹಿಡಿದು ಗಲಾಟೆ ನಡೆಸಿದ್ದರಿಂದ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಏರ್ಪಟ್ಟಿದ್ದರಿಂದ ಸಿಂಧನೂರು ‌ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿದ್ದಾರೆ.

ಇದನ್ನೂ ಓದಿ | ಪುಡಿ ರೌಡಿಯ ಹವಾ ಮೆಂಟೇನ್‌ ಗೀಳಿಗೆ ಅಮಾಯಕ ವೃದ್ಧ ಬಲಿ, ಭಯದಲ್ಲಿ ಕುಟುಂಬ

Exit mobile version