Site icon Vistara News

Ganga Kalyana Scheme : ಉಚಿತ ಬೋರ್‌ವೆಲ್‌ಗೆ ಇನ್ನೂ ಅರ್ಜಿ ಹಾಕಿಲ್ವಾ? ನಾಳೆಯೇ ಕೊನೇ ದಿನ!

Ganga Kalyana Scheme and pumpset

ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೆ ಕಂಗೆಟ್ಟಿದ್ದ ರೈತರಿಗೆ ಸರ್ಕಾರದಿಂದ ಶುಭ ಸುದ್ದಿಯೊಂದು ಹೊರಬಿದ್ದಿದೆ. ಗಂಗಾ ಕಲ್ಯಾಣ ಯೋಜನೆಯ (Ganga Kalyana Scheme) ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್‌ (Free borewell) ಕೊರೆಸಲು ಸಹಾಯಧನ (subsidy) ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಮೊದಲೇ ಮಳೆ ಇಲ್ಲದೆ ನೀರಾವರಿ ಸಮಸ್ಯೆಯನ್ನು ಎದುರಿಸುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಈ ಯೋಜನೆಯ ಫಲ ದೊರೆಯಲಿದೆ. ಆದರೆ, ಇದಕ್ಕೆ ಅರ್ಜಿ ಸಲ್ಲಿಸಲು ಇನ್ನು ಎರಡು ದಿನ ಮಾತ್ರವೇ ಬಾಕಿ ಇದೆ.

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಸಹಾಯಧನವನ್ನು ನೀಡುತ್ತಲಿದೆ. ಒಟ್ಟು 1.5 ಲಕ್ಷ ರೂಪಾಯಿಯಿಂದ 3.50 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ.

Ganga kalyana scheme

ಇದನ್ನೂ ಓದಿ: Ration Card : ರೇಷನ್‌ ಕಾರ್ಡ್‌ಗೆ ಇ-ಕೆವೈಸಿ ಇಕ್ಕಟ್ಟು; ನಿಮ್ಮಿಂದ ಈ ಎಡವಟ್ಟಾದರೂ ಅನ್ನಭಾಗ್ಯ ಸಿಗಲ್ಲ!

ಸಣ್ಣ – ಅತಿ ಸಣ್ಣ ರೈತರಿಗೆ ಅನುಕೂಲ

ಗಂಗಾ ಕಲ್ಯಾಣ ಯೋಜನೆಯಡಿ ಈಗ ಅರ್ಹ ಸಣ್ಣ ಹಾಗೂ ಅತಿ ಸಣ್ಣ ರೈತರು (ಅಂದರೆ 1.20 ಎಕರೆಯಿಂದ 5 ಎಕರೆ ವರೆಗೆ ಜಮೀನು ಹೊಂದಿರುವವರು) ಬೋರ್‌ವೆಲ್‌ ಕೊರೆಸಿಕೊಂಡಲ್ಲಿ ಮುಂದಿನ ದಿನಗಳಲ್ಲಿ ನೀರಾವರಿ ಸಮಸ್ಯೆ ಅಷ್ಟಾಗಿ ಭಾದಿಸದು. ಇದರಿಂದ ಉತ್ತಮ ಬೆಳೆ ಪಡೆಯಬಹುದಾಗಿದ್ದು, ಆರ್ಥಿಕವಾಗಿಯೂ ಸ್ವಾವಲಂಬನೆ ಸಾಧಿಸಬಹುದು ಎಂಬ ನಿಟ್ಟಿನಲ್ಲಿ ಈ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಯಾರು? ದಾಖಲೆ ಏನು ಬೇಕು?

ನ. 29 ಕೊನೇ ದಿನ

ಅರ್ಹ ಫಲಾನುಭವಿಗಳು ಈ ಯೋಜನೆ ಅಡಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ನವೆಂಬರ್ 29 ಕೊನೇ ದಿನವಾಗಿದೆ. ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರ ಇಲ್ಲವೇ ಸೇವಾಸಿಂಧು ಪೋರ್ಟಲ್‌ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಇನ್ನೂ ಹಾಕಿಸಿಲ್ವಾ, ಟೆನ್ಶನ್‌ ಬೇಡ! ಯಾಕಂದ್ರೆ..?

ಮಾಹಿತಿ ಬೇಕಿದ್ದರೆ ಸಹಾಯವಾಣಿಗೆ ಕರೆ ಮಾಡಿ

ಈ ಯೋಜನೆ ಬಗ್ಗೆ ಗೊಂದಲಗಳಿದ್ದರೆ, ಇನ್ನೂ ಹೆಚ್ಚಿನ ಮಾಹಿತಿ ಬೇಕಿದ್ದರೆ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ ಸೋಷಿಯಲ್‌ ಮೀಡಿಯಾ X ಖಾತೆ @SWDGok ಗೆ ಸಂಪರ್ಕ ಮಾಡಬಹುದು.

Exit mobile version