ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ (Gangster Ravi Pujari) ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಹರ್ನಿಯಾ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆ ಮಲ್ಟಿಸ್ಪೆಷಾಲಿಟಿ ಘಟಕಕ್ಕೆ ಆತನನ್ನು ಸೋಮವಾರ ದಾಖಲಿಸಲಾಗಿದೆ.
ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈತ ಉದ್ಯಮಿಗಳು, ಚಿತ್ರನಟರಿಗೆ ಜೀವ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ. 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು 2019ರ ಫೆಬ್ರವರಿಯಲ್ಲಿ ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ಇಂಟರ್‌ಪೋಲ್ ಪೊಲೀಸರು ಬಂಧಿಸಿದ್ದರು. ನಂತರ ಆತನನ್ನು ರಾಜ್ಯಕ್ಕೆ ಕರೆತರಲಾಗಿತ್ತು. ವಿಚಾರಣೆ ಬಳಿಕ ಆತ ಪರಪ್ಪನ ಅಗ್ರಹಾರ ಜೈಲು ಸೇರಿದ್ದ. ಇದೀಗ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ | Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ
ಬೆಂಗಳೂರು/ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ (Actor Darshan) ಸೇರಿ ಹಲವರು ಸೆರೆಯಾಗಿದ್ದು, ಇದೀಗ ಮತ್ತಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಚಿತ್ರದುರ್ಗದ ಅನುಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗು ಸರೆಂಡರ್ ಆಗಿದ್ದಾರೆ.
ಚಿತ್ರದುರ್ಗದ ಡಿವೈಎಸ್‌ಪಿ ಪಿ.ಕೆ ದಿನಾಕರ್ ಅವರಿಗೆ ಶರಣಾಗಿದ್ದಾರೆ. ಅನು ಚಿತ್ರದುರ್ಗದ ಸಿಹಿನೀರ ಹೊಂಡ ನಿವಾಸಿಯಾದರೆ, ಜಗದೀಶ್ ಚಿತ್ತದುರ್ಗದ ರೈಲ್ವೆ ಸ್ಟೇಶನ್ ಏರಿಯಾ ನಿವಾಸಿಯಾಗಿದ್ದಾನೆ. ಸದ್ಯ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರಿಗೆ ಒಪ್ಪಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಸೇರಿ ಒಟ್ಟು 16 ಮಂದಿ ಆರೋಪಿಗಳು ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿದ್ದಾರೆ.
ಪವಿತ್ರಗೌಡ ನೋಡಲು ಬಂದ ಸಂಬಂಧಿಕರು
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಗೌಡ ಭೇಟಿಗೆ ಆಕೆಯ ಸಹೋದರಿ ಹಾಗೂ ಸಂಬಂಧಿ ಬಂದಿದ್ದರು. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿರುವ ಕೊಲೆ ಆರೋಪಿ ಪವಿತ್ರಗೌಡ ಭೇಟಿಗೆ ಪೊಲೀಸರು ನಿರಾಕರಿಸಿದರು. ಫೋನ್ ಮಾಡಿಸಿ ಒಳಗಡೆ ಹೋಗಲು ಪ್ರಯತ್ನಿಸಿದರು. ಆದರೆ ಬಂದ ದಾರಿಗೆ ಸುಂಕ ಎಲ್ಲ ಎಂಬಂತೆ ಬರಿಗೈಯ್ಯಲ್ಲಿ ಹೋದರು. ಈ ಮೊದಲು ಸಾಂತ್ವನ ಕೇಂದ್ರಕ್ಕೆ ಹೋಗಿದ್ದಾಗ ಠಾಣೆಯಲ್ಲಿ ಭೇಟಿ ಮಾಡುವಂತೆ ಸೂಚಿಸಿ ಕಳಿಸಲಾಗಿತ್ತು. ಈಗ ಠಾಣೆಗೆ ಬಂದು ಮನವಿ ಮಾಡಿಕೊಂಡರು ಪವಿತ್ರಗೌಡ ಭೇಟಿಗೆ ಪೊಲೀಸರು ಅವಕಾಶ ಮಾಡಿಕೊಟ್ಟಿಲ್ಲ.
ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ಸೀಜ್