ಬೀದರ್: ಆಂಧ್ರ ಪ್ರದೇಶದ ಜಹಿರಾಬಾದ್‌ನಿಂದ ಬೀದರ್ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂಪಾಯಿ ಮೌಲ್ಯದ 10 ಕೆಜಿ ಗಾಂಜಾವನ್ನು (Cannabis) ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಜಪ್ತಿ (Seized) ಮಾಡಿಕೊಂಡಿರುವ ಘಟನೆ ಗುರುವಾರ ಜರುಗಿದೆ.
ಮಹಾರಾಷ್ಟ್ರ ಮೂಲದ ಅಮರ ಕಾಂಬಳೆ, ಮದುಕರ್ ಚವ್ಹಾಣ್ ಬಂಧಿತ ಆರೋಪಿಗಳು. ಇವರು ಆಂಧ್ರದ ಜಹಿರಾಬಾದ್‌ನಿಂದ ಬೀದರ್ ಮಾರ್ಗವಾಗಿ ಮಹಾರಾಷ್ಟ್ರ ರಾಜ್ಯದ ಉಸ್ಮಾನಾಬಾದ್ ಜಿಲ್ಲೆಯ ಬೂಮ್ ತಾಲೂಕಿಗೆ ಮಹಾರಾಷ್ಟ್ರ ಸಾರಿಗೆ ಬಸ್‌ನಲ್ಲಿ ತೆರಳುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು, ಬೀದರ್‌ನ ರಾಷ್ಟ್ರೀಯ ಹೆದ್ದಾರಿ ಬಂಗೂರ ಕ್ರಾಸ್ ಬಳಿ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: Education News : ಮಗುವನ್ನು ಶಾಲೆಗೆ ಸೇರಿಸಲು ಹೊರಟಿರಾ? ವಯಸ್ಸಿನ ಲೆಕ್ಕಾಚಾರವನ್ನು ಸರಿಯಾಗಿ ತಿಳಿದುಕೊಳ್ಳಿ!
ಇಬ್ಬರು ಆರೋಪಿಗಳು ಯಾರಿಗೂ ಅನುಮಾನ ಬಾರದಂತೆ ಕಾಲೇಜು ಬ್ಯಾಗ್‌ನಲ್ಲಿ ಗಾಂಜಾ ತುಂಬಿಕೊಂಡು ತೆರಳುತ್ತಿದ್ದರು. ಈ ವೇಳೆ ಅಧಿಕಾರಿಗಳು ದಾಳಿ ನಡೆಸಿ, 10 ಲಕ್ಷ ರೂಪಾಯಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತು ಪ್ರಕರಣ ಅಬಕಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.