Site icon Vistara News

ಸ್ನಾನಕ್ಕೆ ಹೋದಾಗ ಗ್ಯಾಸ್‌ ಗೀಸರ್‌ ಲೀಕ್‌; ಗರ್ಭಿಣಿ ಸಾವು, ಮಗು ಗಂಭೀರ

gas geyser leak

ಬೆಂಗಳೂರು: ಮಗು ಜತೆಗೆ ಸ್ನಾನಕ್ಕೆ ಹೋದಾಗ ಗೀಸರ್‌ ಲೀಕ್‌ ಆಗಿ (gas geyser leaks) ಪ್ರಜ್ಞೆ ತಪ್ಪಿ ಬಾತ್‌ರೂಮ್‌ನಲ್ಲೇ ಗರ್ಭಿಣಿಯೊಬ್ಬರು (Bangalore News) ಮೃತಪಟ್ಟಿದ್ದಾರೆ. ರಮ್ಯ (23) ಮೃತ ದುರ್ದೈವಿ.

ಬೆಂಗಳೂರಿನ ಅಶ್ವತ್ ನಗರದಲ್ಲಿ ಈ ದುರ್ಘಟನೆ ನಡೆದಿದೆ. ರಮ್ಯ ತಮ್ಮ ನಾಲ್ಕು ವರ್ಷದ ಮಗುವಿನೊಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಆದರೆ ಈ ವೇಳೆ ಗ್ಯಾಸ್ ಗೀಸರ್‌ನಿಂದ ವಿಷ ಅನಿಲ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿದೆ. ಆದರೆ ಇದು ತಿಳಿಯದೆ ಸ್ನಾನ ಮಾಡಲು ಬಾತ್‌ ರೂಮ್‌ಗೆ ಹೋಗಿದ್ದಾರೆ. ಗೀಸರ್‌ ಸೋರಿಕೆಯಾದ ಕಾರಣ ಸ್ನಾನ ಮಾಡುತ್ತಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ.

ಮೃತ ರಮ್ಯ, ಗಂಭೀರವಾಗಿರುವ ರಮ್ಯರ ಮಗ

ಕೂಡಲೇ ಕುಟುಂಬಸ್ಥರು ರಮ್ಯಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗರ್ಭಿಣಿಯಾಗಿದ್ದ ರಮ್ಯರ ಮಗುವೂ ಪ್ರಪಂಚ ನೋಡುವ ಮುನ್ನವೇ ಗರ್ಭದಲ್ಲೇ ಮೃತಪಟ್ಟಿದೆ. ಇತ್ತ ರಮ್ಯರ ನಾಲ್ಕು ವರ್ಷದ ಮಗುವಿಗೂ ಚಿಕಿತ್ಸೆ ಮುಂದುವರಿದಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದೆ.

ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Child Death : ಆಟವಾಡುತ್ತಾ ನೀರಿನ ತೊಟ್ಟಿಗೆ ಬಿದ್ದ 3 ವರ್ಷದ ಮಗು ಸಾವು

ಸ್ನಾನಕ್ಕೆ ಜೋಡಿಯಾಗಿ ಹೋಗಿದ್ದ ಯುವಕ- ಯುವತಿ ಬಾತ್‌ರೂಮ್‌ನಲ್ಲಿ ಸಾವು

ಕಳೆದ ಜೂನ್‌ನಲ್ಲೂ ಇದೇ ರೀತಿ ಗ್ಯಾಸ್‌ ಗೀಸರ್‌ ಲೀಕ್‌ ಇಬ್ಬರು ಮೃತಪಟ್ಟಿದ್ದರು. ಹಸೆಮಣೆ ಏರಬೇಕಿದ್ದ ಜೋಡಿಯೊಂದು ದಾರುಣ ಅಂತ್ಯ ಕಂಡಿತ್ತು. ಸ್ನಾನಕ್ಕೆ ಜೋಡಿಯಾಗಿ ಹೋದಾಗ ಗೀಸರ್‌ ಲೀಕ್‌ ಆಗಿ (gas geyser leaks) ಪ್ರಜ್ಞೆ ತಪ್ಪಿ ಬಾತ್‌ರೂಮ್‌ನಲ್ಲಿ ಮೃತ್ಯು (Bangalore News) ಆಗಿದ್ದರು. ಗುಂಡ್ಲುಪೇಟೆ ತಾಲೂಕಿನ ಚಂದ್ರಶೇಖರ್, ಗೋಕಾಕ್ ತಾಲೂಕಿನ ಸುಧಾರಾಣಿ ಮೃತ ದುರ್ದೈವಿಗಳು.

ಬೆಂಗಳೂರು: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿಯೊಂದು ದಾರುಣ ಅಂತ್ಯ ಕಂಡಿದೆ. ಸ್ನಾನಕ್ಕೆ ಜೋಡಿಯಾಗಿ ಹೋಗಿದ್ದಾಗ ಗೀಸರ್‌ ಲೀಕ್‌ ಆಗಿ (gas geyser leaks) ಪ್ರಜ್ಞೆ ತಪ್ಪಿ ಬಾತ್‌ರೂಮ್‌ನಲ್ಲಿ ಮೃತ್ಯು (Bangalore News) ಆಗಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಚಂದ್ರಶೇಖರ್, ಗೋಕಾಕ್ ತಾಲೂಕಿನ ಸುಧಾರಾಣಿ ಮೃತ ದುರ್ದೈವಿಗಳು.

ಗ್ಯಾಸ್‌ ಗೀಸರ್‌ ಸೋರಿಕೆ

ಕಳೆದ ಜೂನ್‌ 10ರಂದು ಚಿಕ್ಕಜಾಲದ ತರಬನಹಳ್ಳಿ ಬಳಿ ಈ ದುರ್ಘಟನೆ ನಡೆದಿತ್ತು. ಈ ಜೋಡಿ ರಾತ್ರಿ 9 ಗಂಟೆ ಸುಮಾರಿಗೆ ಸ್ನಾನಕ್ಕೆಂದು ಗ್ಯಾಸ್ ಗೀಸರ್‌ ಆನ್ ಮಾಡಿತ್ತು. ಈ ವೇಳೆ ಗ್ಯಾಸ್ ಗೀಸರ್‌ನಿಂದ ವಿಷ ಅನಿಲ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿತ್ತು. ಆದರೆ ಇದ್ಯಾವುದರ ಅರಿವು ಇವರೇ ಒಟ್ಟಿಗೆ ಸ್ನಾನ ಮಾಡಲು ಬಾತ್‌ ರೂಮ್‌ಗೆ ಹೋಗಿದ್ದರು. ಗೀಸರ್‌ ಸೋರಿಕೆಯಾದ ಕಾರಣ ಸ್ನಾನ ಮಾಡುತ್ತಲೇ ಇಬ್ಬರು ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದರು.

ಮನೆಯಿಂದ ಹೊರಗೆ ಬಾರದೆ ಇದ್ದಾಗ ಬೆಳಗ್ಗೆ ಮನೆ ಮಾಲೀಕರು ಅನುಮಾನಗೊಂಡು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿತ್ತು. ಬಳಿಕ ಪೊಲೀಸರಿಗೆ ವಿಷಯ ತಿಳಿಸಿದ್ದು, ಬಾಗಿಲು ಮುರಿದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version