Site icon Vistara News

Snake Bite: ಮಲಗಿದ್ದಾಗ ಹಾವು ಕಚ್ಚಿ ಬಾಲಕಿ ಸಾವು

Girl dies after being bitten by snake Shivamogga

Girl dies after being bitten by snake Shivamogga

ಶಿವಮೊಗ್ಗ: ಮನೆಯಲ್ಲಿ ಮಲಗಿದ್ದಾಗ ಹಾವು ಕಚ್ಚಿ (Snake Bite) ಬಾಲಕಿ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ತಲ್ಲೂರು ಗ್ರಾಮದಲ್ಲಿ ನಡೆದಿದೆ. ಅಕ್ಷತಾ (17) ಮೃತ ಬಾಲಕಿ.

ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮಲಗಿದ್ದಾಗ ಬಾಲಕಿಗೆ ಹಾವು ಕಚ್ಚಿದೆ. ಈ ವೇಳೆ ದಿಢೀರನೇ ಬಾಲಕಿ ಎದ್ದು ಹಾವು ಕಚ್ಚಿದೆ ಎಂದು ಕಿರುಚಿದ್ದಾಳೆ. ಲೈಟ್‌ ಹಾಕಿ ನೋಡಿದಾಗ ಹಾವು ಕಂಡಿರಲಿಲ್ಲ. ಹೀಗಾಗಿ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯದೇ ಮನೆಯವರು ಬೈದು ಮಲಗಿಸಿದ್ದಾರೆ. ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ.

ಮೊದಲಿಗೆ ಆನವಟ್ಟಿ ಖಾಸಗಿ ಕ್ಲಿನಿಕ್‌ನಲ್ಲಿ ಬಾಲಕಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಶಿಕಾರಿಪುರದ ಆಸ್ಪತ್ರೆಗೆ ರವಾನೆ ಮಾಡಲಾಯಿತು. ನಂತರ ಅಲ್ಲಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದೇಹದ ತುಂಬ ವಿಷ ಹರಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದ ಬಾಲಕಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ | Lokayukta Raid: ಪ್ರತ್ಯೇಕ ಪ್ರಕರಣಗಳಲ್ಲಿ ಪಶುವೈದ್ಯಾಧಿಕಾರಿ, ಕಾನ್‌ಸ್ಟೆಬಲ್‌ ಲೋಕಾಯುಕ್ತ ಬಲೆಗೆ

ಹಾನಗಲ್‌ನಲ್ಲಿ ಸಿಡಿಲು ಬಡಿದು ಕುರಿಗಾಹಿ ಸಾವು

ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ಮಹಾರಾಜಪೇಟೆ ಗ್ರಾಮದಲ್ಲಿ ಸಿಡಿಲು ಬಡಿದು ಕುರಿಗಾಹಿ ಮೃತಪಟ್ಟಿರುವ ಘಟನೆ ನಡೆದಿದೆ. ನಾಗರಾಜ ಮುತ್ನಾಳ (22) ಮೃತ ಕುರಿಗಾಹಿ. ಹೊಲದಲ್ಲಿ ಕುರಿಗಳನ್ನು ಮೇಯಿಸುತ್ತಿದ್ದಾಗ ಸಿಡಿಲು ಬಡಿದಿದ್ದರಿಂದ ಯುವಕ ಕೊನೆಯುಸಿರೆಳೆದಿದ್ದಾನೆ.

ಆಟವಾಡುವಾಗ ಹೈಟೆನ್ಶನ್ ವೈರ್‌ ತಾಗಿ ಬಾಲಕಿ ಸಾವು

High tension wire

ಬೆಳಗಾವಿ: ಇಲ್ಲಿನ ಮಚ್ಛೆ ಗ್ರಾಮದ ಬಳಿಯ ಆಟವಾಡುವಾಗ ಹೈಟೆನ್ಶನ್ ವೈರ್‌ (High tension wire) ಸ್ಪರ್ಶಿಸಿ (Electric Shock) ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ನಡೆದಿದೆ. ಗ್ರಾಮದ ಮಧುರಾ ಮೋರೆ (13) ಮೃತ ದುರ್ದೈವಿ.

ಮಧುರಾ ಆಟವಾಡುತ್ತಾ ನಿಂತಿದ್ದಾಗ ಮನೆ ಮುಂದಿನ ಹೈಟೆನ್ಷನ್ ವೈಯರ್ ತಾಗಿದ್ದು ಶಾಕ್‌ ಹೊಡೆದಿದೆ. ಮನೆಯ ಮುಂಭಾಗವೇ ವಿದ್ಯುತ್ ತಂತಿ ಹಾದುಹೋಗಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: Accident News: ರಿಪೇರಿ ಮಾಡುತ್ತಿದ್ದಾಗ ಏಕಾಏಕಿ ಕುಸಿದ ಟಿಪ್ಪರ್ ಲಾರಿ; ಸ್ಥಳದಲ್ಲೇ ಪ್ರಾಣ ಬಿಟ್ಟ ಚಾಲಕ

ಮನೆ ಕಟ್ಟದಂತೆ ನೋಟಿಸ್‌

ಹೈಟೆನ್ಶನ್ ವೈರ್ ಹಾದುಹೋಗಿದ್ದರಿಂದ, ಮನೆ ಕಟ್ಟದಂತೆ ಹೆಸ್ಕಾಂ ಅಧಿಕಾರಿಗಳು ಈ ಹಿಂದೆಯೇ ನೋಟಿಸ್ ಜಾರಿ ಮಾಡಿದ್ದರು. ಆದರೂ ನಿರ್ಲಕ್ಷ್ಯ ವಹಿಸಿ ಬಾಲಕಿ ಕುಟುಂಬಸ್ಥರು ಮನೆಯನ್ನು ನಿರ್ಮಿಸಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೆಳಗಾವಿ ಗ್ರಾಮೀಣ ‌ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version