ಧಾರವಾಡ: ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ (Molestation Case) ಎಸಗಿದ ಪ್ರಕರಣ ನಡೆದಿದೆ.
ಮನೆ ಎದುರು ವಾಸವಿರುವ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸೆಗಲಾಗಿದೆ. ಮಾರುತಿ ಕರಿ (30) ಎಂಬಾತ ಈ ಕೃತ್ಯ ಎಸಗಿದ್ದಾನೆ. ವೆಂಕಟಾಪುರ ಗ್ರಾಮದ ಸುಡಗಾಡ ಸಿದ್ದರ ಕಾಲೋನಿ ನಿವಾಸಿಯಾಗಿರುವ ಈತ ಅತ್ಯಾಚಾರ ನಡೆಸಿದ್ದಾರೆ.
ಬಾಲಕಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಅತ್ಯಾಚಾರ ನಡೆಸಿದ್ದಾನೆ. ಸ್ಟೇಷನರಿ ವ್ಯಾಪಾರಿಯಾಗಿರುವ ಮಾರುತಿ ಈ ದೌರ್ಜನ್ಯ ಎಸಗಿದ್ದಾನೆ. ಬಾಲಕಿ ಪೋಷಕರು ಗರಗ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಪೋಕ್ಸೊ ಅಡಿ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ: Lokayukta Raid : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಏಪ್ರಿಲ್ 11ರವರೆಗೆ ಪರಪ್ಪನ ಅಗ್ರಹಾರ ಜೈಲಿಗೆ
ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದ ಕ್ಯಾಂಟರ್ ಮೇಲೆ ದಾಳಿ, ವಾಹನದಲ್ಲಿದ್ದ ವ್ಯಕ್ತಿ ಸಾವು
ರಾಮನಗರ: ಕಸಾಯಿ ಖಾನೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ಒಂದರ ಮೇಲೆ ಶುಕ್ರವಾರ ರಾತ್ರಿ ದಾಳಿ (Attack on canter) ನಡೆದಿದೆ. ಈ ವೇಳೆ 16 ಜಾನುವಾರುಗಳನ್ನು ರಕ್ಷಿಸಲಾಗಿದೆ. ಆದರೆ, ಕ್ಯಾಂಟರ್‌ನಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹಿಂದು ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಂಡ ಕ್ಯಾಂಟರ್ ಮೇಲೆ ದಾಳಿ ಮಾಡಿದೆ. ಈ ವಾಹನದಲ್ಲಿ ಜಾನುವಾರು ಸಾಗಾಟ ನಡೆಯುತ್ತಿರುವುದರ ಬಗ್ಗೆ ಮೊದಲೇ ಮಾಹಿತಿ ಪಡೆದಿದ್ದ ತಂಡ ತಡರಾತ್ರಿ ಕಾದು ಕುಳಿತು ಆಕ್ರಮಣ ನಡೆಸಿದೆ ಎನ್ನಲಾಗಿದೆ. ತಂಡವು ಕ್ಯಾಂಟರ್‌ನಲ್ಲಿ ಸಾಗಿಸುತ್ತಿದ್ದ 16 ಜಾನುವಾರುಗಳನ್ನು ವಶಕ್ಕೆ ಪಡೆದಿದೆ. ಈ ನಡುವೆ, ದಾಳಿ ವೇಳೆ ವಾಹನದಲ್ಲಿದ್ದ ಎನ್ನಲಾದ ಇರ್ಗೀಷ್ ಪಾಷಾ ಎಂಬಾತನ ಶವ ದಾಳಿ ನಡೆದ ಸ್ವಲ್ಪ ದೂರದಲ್ಲಿ ಪತ್ತೆಯಾಗಿದೆ.
ದಾಳಿ ಮಾಡಿದ ತಂಡದ ಪ್ರಕಾರ, ವಾಹನವನ್ನು ಅಡ್ಡಗಟ್ಟುವ ಕೆಲಸ ನಡೆಯುತ್ತಿದ್ದಂತೆಯೇ ಒಬ್ಬ ವ್ಯಕ್ತಿ ವಾಹನ ಬಿಟ್ಟು ಇಳಿದು ಪರಾರಿಯಾಗಿದ್ದಾನೆ. ಆದರೆ, ಮನೆಯವರು ಹೇಳುವ ಪ್ರಕಾರ, ಇರ್ಗಿಷ್ ಪಾಷಾನನ್ನು ದಾಳಿಕೋರರೇ ಹೊಡೆದು ಕೊಂದಿದ್ದಾರೆ. ಹಿಂದು ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ತಂಡವೇ ಕೊಲೆ ಮಾಡಿ ದೂರಕ್ಕೆ ಕೊಂಡುಹೋಗಿ ಎಸೆದಿದೆ ಎನ್ನುವುದು ಕುಟುಂಬಸ್ಥರು ಮಾಡುವ ಆರೋಪವಾಗಿದೆ. ಸಾತನೂರು ಪೊಲೀಸ್ ಠಾಣೆ ಬಳಿ ಇರ್ಗೀಷ್ ಪಾಷಾ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ
ನೆಲ್ಯಾಡಿ: ಯುವಕನೊಬ್ಬ ಮೊಬೈಲ್‌ನಲ್ಲಿ ಸ್ಟೇಟಸ್ (Whatsapp status)ಹಾಕಿ ಮನೆ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಚ್ಲಂಪಾಡಿ ಗ್ರಾಮದಲ್ಲಿ ಮಾರ್ಚ್ 30ರ ಮಧ್ಯರಾತ್ರಿ ನಡೆದಿದೆ. ಇಚ್ಲಂಪಾಡಿ ಗ್ರಾಮದ ಮೊಂಟೆತ್ತಡ್ಕ ನಿವಾಸಿ ರೆನೀಶ್ (27) ಮೃತ ಯುವಕ. ಈತನ ತಂದೆ ಕೆಲವು ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು ತಾಯಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈತನ ಸಹೋದರ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ಕೆಲಸಕ್ಕೆ ಹೋಗುತ್ತಿದ್ದ. ಮಾ.30ರಂದು ರಾತ್ರಿ ಪಕ್ಕದ ಉಣ್ಣಿಕೃಷ್ಣನ್ ನಾಯರ್ ಎಂಬುವವರ ಮನೆಯಲ್ಲಿ ಊಟ ಮಾಡಿ, ಕೇರಂ ಆಡಿ ಮನೆಗೆ ಹೋಗಿದ್ದ. ಮಧ್ಯರಾತ್ರಿ 12 ಗಂಟೆ ವೇಳೆಗೆ ಆತ್ಮಹತ್ಯೆ ಮಾಡಿಕೊಳ್ಳುವುದರ ಬಗ್ಗೆ ಮೊಬೈಲ್‌ನಲ್ಲಿ ಸ್ಟೇಟಸ್ ಬರೆದುಕೊಂಡು ಮೊಬೈಲ್ ಸ್ವಿಚ್ಡ್ ಆಫ್ ಮಾಡಿದ್ದ. ಈತನ ಸ್ಟೇಟಸ್ ನೋಡಿದ್ದ ಬೆಂಗಳೂರಿನಲ್ಲಿರುವ ಗೆಳೆಯರು ಉಣ್ಣಿಕೃಷ್ಣನ್‌ರವರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ಅವರು ರೆನೀಶ್ ಮನೆಗೆ ತಲುಪುವುದರೊಳಗೆ ಆತ ಮರಕ್ಕೆ ನೇಣುಬಿಗಿದುಕೊಂಡಿದ್ದ. ತಕ್ಷಣ ಹಗ್ಗ ಬಿಚ್ಚಿ ಪುತ್ತೂರಿನ ಆಸ್ಪತ್ರೆಗೆ ಕರೆ ತರಲಾಯಿತಾದರೂ ಆ ವೇಳೆಗೆ ಆತ ಮೃತಪಟ್ಟಿದ್ದ ಎಂದು ವರದಿಯಾಗಿದೆ.