ತುಮಕೂರು: ಅಂಗನವಾಡಿಗೆ ಹೋಗುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಗ್ರಂಥಾಲಯ ಸಹಾಯಕನನ್ನು ಇಲ್ಲಿನ ಮಹಿಳಾ ಠಾಣೆ ಪೊಲೀಸರು ಬಂಧಿಸಿ ಪೋಕ್ಸೋ ಅಡಿ ಪ್ರಕರಣ ದಾಖಲಿಸಿದ್ದಾರೆ.
ತುಮಕೂರು ತಾಲೂಕಿನ ಹಳ್ಳಿಯೊಂದರಲ್ಲಿರುವ ಗ್ರಾ.ಪಂ. ಕಚೇರಿಯೊಂದರ ಬಳಿ ಈತ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗಿದೆ. ಅಂಗನವಾಡಿಯ ಪಕ್ಕದಲ್ಲೇ ಇದ್ದ ಗ್ರಾ.ಪಂ. ಗ್ರಂಥಾಲಯದ ಸಹಾಯಕನಾಗಿ ಈತ ಕಾರ್ಯನಿರ್ವಹಣೆ ಮಾಡುತ್ತಿದ್ದ.
ಪ್ರಕರಣ ಬಯಲಾಗುತ್ತಿದ್ದಂತೆ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಅಧ್ಯಕ್ಷರಿಂದ ಪ್ರಕರಣವನ್ನು ಮುಚ್ಚಿಹಾಕಲು ಯತ್ನ ನಡೆದಿದೆ ಎಂದು ಹೇಳಲಾಗಿದ್ದು, ಪೋಷಕರ ಮೇಲೆ ಒತ್ತಡ ಹಾಕಲಾಗಿದೆ. ಆದರೆ, ಒತ್ತಡಕ್ಕೆ ಮಣಿಯದ ಪೊಲೀಸರು ದೂರು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮಹಿಳಾ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಅಲ್ಲದೆ, ಅತ್ಯಾಚಾರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ | ಪರಸ್ಪರ ಒಪ್ಪಿಗೆಯಿಂದ ಜತೆಗಿದ್ದು ಕೊನೆಗೆ ಅತ್ಯಾಚಾರ ಆಯ್ತು ಅಂತ ಆರೋಪ ಮಾಡುವಂತಿಲ್ಲ ಎಂದ ಸುಪ್ರೀಂ