ಶಿವಮೊಗ್ಗ: ತಾಲೂಕಿನ ಹೊಳೆಬೆಳಗಲು ಗ್ರಾಮದಲ್ಲಿ ನಾಯಿ ದಾಳಿಯಿಂದ ಬಾಲಕಿಗೆ ಗಂಭೀರ ಗಾಯಗಳಾಗಿರುವ ಘಟನೆ (Shivamogga News) ಶನಿವಾರ ನಡೆದಿದೆ. ಬೀರನಹಳ್ಳಿ ಗ್ರಾಪಂ ಸದಸ್ಯ ನಂಜುಂಡಪ್ಪ ಮಗಳು ಬೇಬಿ ಗಾಯಾಳು. ಶಾಲೆಯಿಂದ ಬಂದ ಬಾಲಕಿ ಬಸ್‌ನಿಂದ ಇಳಿಯುತ್ತಿದ್ದಾಗ ನಾಯಿ ದಾಳಿ ಮಾಡಿದೆ. ಇದರಿಂದ ಬಾಲಕಿ ಮುಖದ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು, ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ | Children death : ಹೆಂಡತಿ ಬಿಟ್ಟು ಹೋದ ಬೇಸರ; 3 ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ ಯತ್ನ; ಇಬ್ಬರು ಮಕ್ಕಳು ಸಾವು
ಶಿವಮೊಗ್ಗದಲ್ಲಿ ದಸರಾ ಉತ್ಸವ ಆಚರಣೆಗೆ ಹಣ ಮಂಜೂರು ಮಾಡುವಂತೆ ಸಿಎಂಗೆ ಮನವಿ
ಶಿವಮೊಗ್ಗ: ಶಿವಮೊಗ್ಗದಲ್ಲಿ (Shivamogga) ದಸರಾ ಉತ್ಸವ (Dasara festival) ಆಚರಣೆಗೆ ಹಣ ಮಂಜೂರು ಮಾಡಲು ಮಹಾನಗರ ಪಾಲಿಕೆ ಸರ್ವಪಕ್ಷಗಳ ನಿಯೋಗ ಸಿಎಂ ಸಿದ್ದರಾಮಯ್ಯ (CM Siddaramaiah) ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಈ ಬಾರಿ ನಾಡಹಬ್ಬ ದಸರಾ ಹಬ್ಬವನ್ನು ಶಿವಮೊಗ್ಗ ನಗರದಲ್ಲಿ ಅದ್ದೂರಿಯಾಗಿ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ, ಇದಕ್ಕಾಗಿ ರಾಜ್ಯ ಸರ್ಕಾರದಿಂದ 1.5 ಕೋಟಿ ಹಣ ಮಂಜೂರು ಮಾಡುವಂತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರ ಸರ್ವ ಪಕ್ಷಗಳ ನಿಯೋಗ, ಶಾಸಕ ಚನ್ನಬಸಪ್ಪ ಅವರ ನೇತೃತ್ವದಲ್ಲಿ ಶುಕ್ರವಾರ ಬೆಂಗಳೂರಿನ ಗೃಹ ಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಯಿತು.
ಇದನ್ನೂ ಓದಿ | Lok Sabha Election 2024 : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರನಿಗೆ ಟಿಕೆಟ್ ಬೇಡಿಕೆ ಇಟ್ಟ ಸತೀಶ್ ಜಾರಕಿಹೊಳಿ!
ನಿಯೋಗದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಶಿವಕುಮಾರ್, ಉಪ ಮೇಯರ್ ಲಕ್ಷ್ಮೀ ಶಂಕರ ನಾಯ್ಕ, ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಆಡಳಿತ ಪಕ್ಷದ ನಾಯಕ ಜ್ಞಾನೇಶ್ವರ್, ಪಾಲಿಕೆ ಸದಸ್ಯರಾದ ಎಚ್.ಸಿ. ಯೋಗೀಶ್, ನಾಗರಾಜ ಕಂಕಾರಿ, ಧೀರರಾಜ್ ಹೊನ್ನವಿಲೆ, ವಿಶ್ವಾಸ್ , ಎಸ್ ಜಿ ರಾಜು, ಆರ್.ಸಿ. ನಾಯ್ಕ್, ಸುವರ್ಣ ಶಂಕರ್, ಭಾನುಮತಿ ವಿನೋದ್ ಹಾಗೂ ಯುವ ಮುಖಂಡರಾದ ಶಂಕರ ನಾಯ್ಕ, ಕೆ ರಂಗನಾಥ್ ಇನ್ನಿತರರು ಪಾಲ್ಗೊಂಡಿದ್ದರು.