Girls Harrassed : ಕಾಲೇಜು ಗೋಡೆ ಮೇಲೆ ವಿದ್ಯಾರ್ಥಿನಿಯರ ಬಗ್ಗೆ ಅಶ್ಲೀಲ ಬರಹ; ಪುಂಡರ ಮೇಲೆ ಕಣ್ಣು - Vistara News

ಕರ್ನಾಟಕ

Girls Harrassed : ಕಾಲೇಜು ಗೋಡೆ ಮೇಲೆ ವಿದ್ಯಾರ್ಥಿನಿಯರ ಬಗ್ಗೆ ಅಶ್ಲೀಲ ಬರಹ; ಪುಂಡರ ಮೇಲೆ ಕಣ್ಣು

Girls Harrassed: ಕಾಲೇಜೊಂದರ ಗೋಡೆಯ ಮೇಲೆ ವಿದ್ಯಾರ್ಥಿನಿಯರ ಹೆಸರಿನಲ್ಲಿ ಅಶ್ಲೀಲ ಬರಹಗಳನ್ನು ಬರೆಯಲಾಗಿದೆ. ಹೀಗೆ ಬರೆದಿದ್ದಾರೆ ಎನ್ನಲಾದ ಇಬ್ಬರು ಹುಡುಗರನ್ನು ಪೊಲೀಸರು ಗುರುತಿಸಿದ್ದಾರೆ.

VISTARANEWS.COM


on

Filthy writings in Kanakagiri College
ಅಶ್ಲೀಲ ಗೋಡೆ ಬರಹಗಳು ಕಂಡುಬಂದಿರುವ ಕನಕಗಿರಿ ಕಾಲೇಜಿನ ಹೊರಭಾಗ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಪುಂಡರ ಹಾವಳಿ (Miscreants Menace) ವಿಪರೀತವಾಗಿದೆ. ಇಲ್ಲಿ ಶಾಲೆ, ಕಾಲೇಜುಗಳ ಗೋಡೆಗಳ (Obscene letters on school walls) ಮೇಲೆ ಈ ಪುಂಡರು ಅಶ್ಲೀಲ ಬರಹಗಳನ್ನು (Filthy writings) ಬರೆದಿದ್ದಾರೆ. ಇದರಿಂದ ವಿದ್ಯಾರ್ಥಿನಿಯರು (Girls Harrassed) ತಲೆ ಎತ್ತಿ ನಡೆಯಲಾಗದ ಸ್ಥಿತಿ ನಿರ್ಮಾಣವಾಗಿದೆ. ಈ ಪುಂಡರನ್ನು ಮಟ್ಟ ಹಾಕಬೇಕು ಎಂಬ ಕೂಗು ಜೋರಾಗಿದೆ.

ವಿದ್ಯಾರ್ಥಿನಿಯರನ್ನು ಅಶ್ಲೀಲವಾಗಿ ನಿಂದಿಸುವುದು, ಅವರನ್ನು ಅವಹೇಳನ ಮಾಡುವುದೇ ಪ್ರಧಾನವಾಗಿರುವ ಬರಹಗಳನ್ನು ಗೋಡೆಯಲ್ಲಿ ಬರೆಯಲಾಗಿದೆ. ಅದರಲ್ಲೂ ಮುಸ್ಲಿಂ ಹುಡುಗಿಯರನ್ನೆ ಹೆಚ್ಚು ಟಾರ್ಗೆಟ್‌ ಮಾಡಿಕೊಂಡು ಬರಹಗಳನ್ನು ಬರೆಯಲಾಗಿದೆ.

ಕನಕಗಿರಿ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು (Kanakagiri PU College) ಆವರಣದ ಪ್ರಾಥಮಿಕ ಶಾಲಾ ಗೋಡೆ ಮೇಲೆ ಬರೆಹ ಕಾಣಿಸಿಕೊಂಡಿದೆ. ಪ್ರೌಢ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿನಿಯರ ಹೆಸರಿನಲ್ಲಿ ಅಶ್ಲೀಲ ಬರಹಗಳನ್ನು ಬರೆಯಲಾಗಿರುವುದು ಹೆಣ್ಮಕ್ಕಳಿಗೆ ಮುಜುಗರ ಉಂಟು ಮಾಡುತ್ತಿದೆ.

Filthy writings in Kanakagiri College embarasses Girl students

ಈ ಪುಂಡರು ಹೀಗೆ ಹೆಣ್ಮಕ್ಕಳ ವಿಚಾರದಲ್ಲಿ ಆಟವಾಡುತ್ತಿರುವುದು ಇದು ಮೊದಲೇನಲ್ಲ. ಈ ಹಿಂದೆಯೂ ಇದೇ ರೀತಿ ವಿದ್ಯಾರ್ಥಿನಿಯರ ಅವಹೇಳನ, ಅಪಹಾಸ್ಯ ಮಾಡಲಾಗಿತ್ತು. ಈ ಕುರಿತಂತೆ ಪೊಲೀಸ್‌ ಇಲಾಖೆಗೆ ದೂರು ನೀಡಲಾಗಿತ್ತು. ಆದರೆ, ಆಗ ಬರೆದವರು ಯಾರು ಎನ್ನುವುದನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ.

ಇದರಿಂದ ಉತ್ತೇಜಿತರಾದ ಪುಂಡರು ತಮ್ಮ ಕೃತ್ಯವನ್ನು ಮುಂದುವರಿಸಿದ್ದು, ಇದೀಗ ಇನ್ನಷ್ಟು ಹೆಣ್ಮಕ್ಕಳ ಹೆಸರಿನಲ್ಲಿ ಅಶ್ಲೀಲ ಬರಹ ಬರೆದು ತಮ್ಮ ಕೀಳುಮಟ್ಟವನ್ನು ಪ್ರದರ್ಶಿಸಿದ್ದಾರೆ.

ಇಬ್ಬರು ಹುಡುಗರ ಮೇಲೆ ಸಂಶಯ

ಶಾಲೆ ಗೋಡೆ ಮೇಲೆ ಅಶ್ಲೀಲ ಬರಹ ಬರೆದ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕೊಪ್ಪಳ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ (Yashodha Vantagodi) ಅವರು, ಇಂದು ಮತ್ತೆ ಶಾಲಾ ಗೋಡೆ ಮೇಲೆ ಅಶ್ಲೀಲ ಬರೆಹ ಬರೆದಿದ್ದಾರೆ ಎಂಬ ಮಾಹಿತಿ ಬಂದಿದೆ. ಸ್ಥಳಕ್ಕೆ ಗಂಗಾವತಿ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಬೆರಳಚ್ಚು ತಂಡ ಹಾಗೂ ಶ್ವಾನದಳವನ್ನು ಸ್ಥಳಕ್ಕೆ ಕಳಿಸಲಾಗುತ್ತಿದೆʼʼ ಎಂದು ಹೇಳಿದರು.

ʻʻಇಬ್ಬರು ಹುಡುಗರು ಆ ರೀತಿ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ. ಸುಮಾರು 15 ಯುವಕರನ್ನು ಪ್ರತ್ಯೇಕವಾಗಿ ಕರೆದು ವಿಚಾರಣೆ ನಡೆಲಾಗಿದೆ. ಈ ಹಿಂದೆ ಇದೇ ರೀತಿ ಬರೆದಿರುವ ಪ್ರಕರಣ ಗಮನಕ್ಕೆ ಬಂದಿದೆ. ಈ ಪ್ರಕರಣದ ಬಗ್ಗೆ ಸೂಕ್ಷ್ಮವಾಗಿ ತನಿಖೆ ಮಾಡಲಾಗುತ್ತಿದೆ. ಕೆಲ ಕಾರಣಾಂತರದಿಂದ ಅಲ್ಲಿ ನೈಟ್‌ ಬೀಟ್‌ ಹಾಕಲು ಆಗಿಲ್ಲ” ಎಂದು ಅವರು ವಿವರಿಸಿದರು.

ಇದನ್ನೂ ಓದಿ: ಶಾಲೆಗೆ ಬಿಂದಿ ಇಟ್ಟು ಹೋದ ಹಿಂದು ವಿದ್ಯಾರ್ಥಿನಿಗೆ ಥಳಿಸಿದ ಕ್ರಿಶ್ಚಿಯನ್​​​ ಶಾಲೆ ಶಿಕ್ಷಕಿ; ಬಾಲಕಿ ಆತ್ಮಹತ್ಯೆ

ʻʻಈಗ ಶಾಲೆಯ ಆವರಣದಲ್ಲಿ ಸಿಸಿ ಕೆಮೆರಾ ಅಳವಡಿಸುವಂತೆ ಸೂಚನೆ ನೀಡಲಾಗಿದೆ. ಈ ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದು ಎಲ್ಲ ದೃಷ್ಟಿಕೋನದಿಂದ ಪರಿಶೀಲನೆ ನಡೆಸುತ್ತಿದ್ದೇವೆʼʼ ಎಂದು ಕೊಪ್ಪಳ ಎಸ್ಪಿ ಯಶೋಧಾ ಹೇಳಿದ್ದಾರೆ.

ಮುಸ್ಲಿಂ ಹೆಣ್ಮಕ್ಕಳನ್ನೇ ಪ್ರಮುಖವಾಗಿ ಟಾರ್ಗೆಟ್‌ ಮಾಡಿದಂತಿರುವ ಈ ಬರಹಗಳ ಹಿಂದೆ ಯಾರಿದ್ದಾರೆ, ಎಳೆ ಮಕ್ಕಳ ಮೇಲೆ ಯಾಕೆ ದ್ವೇಷ ಸಾಧಿಸುತ್ತಿದ್ದಾರೆ ಎಂಬ ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಇದು ಶಾಲೆಯ ವಿದ್ಯಾರ್ಥಿಗಳದೇ ಕೃತ್ಯವೇ ಅಥವಾ ಹೊರಗಿನ ಶಕ್ತಿಗಳ ಕೈವಾಡವಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಯಬೇಕಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

R Ashok: ವಾಲ್ಮೀಕಿ ಹಗರಣ; ಮುಖ್ಯಮಂತ್ರಿ ಏನು ಕತ್ತೆ ಕಾಯುತ್ತಿದ್ದರೇ ಎಂದ ಆರ್‌. ಅಶೋಕ್‌

R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್‌ ಮಾಡಿದೆ. ಅದಕ್ಕೆ ಕ್ಲೀನ್‌ಚಿಟ್‌ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ.

VISTARANEWS.COM


on

Opposition Party leader R Ashok pressmeet about Valmiki Development Corporation scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಈಗ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆರೋಪಿಸಿದ್ದಾರೆ. ಎಲ್ಲ ತಪ್ಪುಗಳನ್ನು ಸಿದ್ದರಾಮಯ್ಯ ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ ಮುಖ್ಯಮಂತ್ರಿ ಏನು ಕತ್ತೆ ಕಾಯುತ್ತಿದ್ದರೇ ಎಂದು ಆರ್‌ ಅಶೋಕ್‌ ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್‌ ಮಾಡಿದೆ. ಅದಕ್ಕೆ ಕ್ಲೀನ್‌ಚಿಟ್‌ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ, ಮುಖ್ಯಮಂತ್ರಿಯೇನು ಕತ್ತೆ ಕಾಯುತ್ತಿದ್ದರೇ? ಆ ಅಧಿಕಾರಿ ಹಿಂದೆಯೇ ತಪ್ಪು ಮಾಡಿದ್ದರೆ ಅದೇ ಹುದ್ದೆಯಲ್ಲಿ ಉಳಿಸಿಕೊಂಡಿದ್ದು ಏಕೆ? ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ. ರಾಜ್ಯದ ಜನರ ಹಣವನ್ನು ಕಳ್ಳ ಖಾತೆಯಲ್ಲಿ ಇಟ್ಟಿದ್ದು ರಾಜ್ಯ ಸರ್ಕಾರ. ಇದರಲ್ಲಿ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಪಾತ್ರವೇ ಇಲ್ಲ. ಬ್ಯಾಂಕ್‌ ಅಧಿಕಾರಿಗಳು ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿದರು. ಆದರೆ ಸರ್ಕಾರ ವಿಶೇಷ ತನಿಖಾ ದಳಕ್ಕೆ ನೀಡಿ ಮುಚ್ಚಿ ಹಾಕಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: NEET UG 2024 Result: ಕ್ಷೇತ್ರವಾರು ನೀಟ್‌ ಪರೀಕ್ಷಾ ಫಲಿತಾಂಶ ಪ್ರಕಟ

ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಜಾಹೀರಾತು ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಜತೆಗೆ, ಜಾತಿ ಬಗ್ಗೆ ಹೇಳಿದ್ದಾರೆ. ನಿರ್ದಿಷ್ಟ ಜಾತಿಯ ವಿರುದ್ಧ ಯಾವುದೇ ಆಪಾದನೆ ಮಾಡಬಾರದು ಎಂದು ಸಂವಿಧಾನದಲ್ಲೇ ತಿದ್ದುಪಡಿ ಮಾಡಲಿ. ಸಿಎಂ ಸಿದ್ದರಾಮಯ್ಯ ಬೆಚ್ಚಿ ಬಿದ್ದಿರುವುದರಿಂದ ಹೀಗೆ ಮಾತಾಡುತ್ತಿದ್ದಾರೆ. 40 ಕ್ಕೂ ಅಧಿಕ ದಾಖಲೆಗಳನ್ನು ನಾನು ಕೊಟ್ಟಿದ್ದು, ಈ ಬಗ್ಗೆ ಸಿಎಂ ಸ್ಪಷ್ಟೀಕರಣ ಕೊಡದೆ ಎಲ್ಲಕ್ಕೂ ಪದ್ಮನಾಭ ಕಾರಣ ಎಂದು ಹೇಳಿದ್ದಾರೆ ಎಂದು ಆರೋಪಿಸಿದರು.

ಸಚಿವರ ತಪ್ಪಿಲ್ಲ ಎಂದ ಮೇಲೆ ಬಿ. ನಾಗೇಂದ್ರ ರಾಜೀನಾಮೆ ಯಾಕೆ ಕೊಟ್ಟರು? ಹಾಗಾದರೆ ಸಿಎಂ ಅವರನ್ನು ಅರ್ಧ ದಾರಿಯಲ್ಲೇ ಕೈ ಬಿಟ್ಟಿದ್ದಾರೆ ಎಂದರ್ಥ. ಲೋಕಸಭೆ ಚುನಾವಣೆಗಾಗಿ ನಾಗೇಂದ್ರ ಹಾಗೂ ಬಸವನಗೌಡ ದದ್ದಲ್‌ ಶ್ರಮ ವಹಿಸಿ, ಕಾಂಗ್ರೆಸ್‌ ಪಕ್ಷಕ್ಕಾಗಿ ಹಣ ಸಂಗ್ರಹ ಮಾಡಿ ತೆಲಂಗಾಣಕ್ಕೆ ಕಳುಹಿಸಿದ್ದಾರೆ ಎಂದು ದೂರಿದರು.

ತನಿಖೆ ಮಾಡಿ

ಬಿಜೆಪಿ ಸರ್ಕಾರದಲ್ಲಿ ಹಗರಣಗಳ ಸರಮಾಲೆ ಎಂದು ಆರೋಪ ಮಾಡಿ, ಅಧಿಕಾರಕ್ಕೆ ಬಂದು 15 ತಿಂಗಳಾದರೂ 40 ಪರ್ಸೆಂಟ್‌ ಆರೋಪದ ತನಿಖೆ ಇನ್ನೂ ಮುಗಿಸಿಲ್ಲ. ಹಿಂದಿನ ಸರ್ಕಾರ ಹಗರಣ ಮಾಡಿದ್ದರೆ, ಅದನ್ನು ತನಿಖೆ ಮಾಡಲು ಇಷ್ಟು ಸಮಯ ಬೇಕೆ ಎಂದು ಪ್ರಶ್ನೆ ಮಾಡಿದರು.

ಬಿಜೆಪಿಗೆ ಯಾವ ಒತ್ತಡವೂ ಇಲ್ಲ. ಆದರೆ ರಾಜ್ಯದ ಜನರ ಒತ್ತಡ ಮಾತ್ರ ಇದೆ. ಜನರಿಗಾಗಿ ಹಾಗೂ ದಲಿತರಿಗಾಗಿ ಈ ಮಟ್ಟಕ್ಕೆ ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು, ದಲಿತರ ಹಣ ವಾಪಸ್‌ ಸಿಗಬೇಕು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುವುದು ನಮ್ಮ ಪಕ್ಷದ ಉದ್ದೇಶ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪದ 21 ಹಗರಣಗಳನ್ನು ನಾವೇ ತನಿಖೆ ಮಾಡುತ್ತೇವೆ. ಅವರು ಅಧಿಕಾರದಿಂದ‌ ಕೆಳಕ್ಕಿಳಿದು ನಮಗೆ ಅಧಿಕಾರ ನೀಡಲಿ ಎಂದು ಆರ್‌.ಅಶೋಕ್‌ ಸವಾಲು ಹಾಕಿದರು.

ಇದನ್ನೂ ಓದಿ: Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಕನ್ನಡತಿ ಭಾವನಾ ಪ್ರದ್ಯುಮ್ನ

ಬ್ರ್ಯಾಂಡ್ ಬೆಂಗಳೂರು ಆಗಬೇಕೆಂದರೆ ಎಲ್ಲ ಕ್ಷೇತ್ರಗಳು ಅಭಿವೃದ್ಧಿಯಾಗಬೇಕು. ಬೆಂಗಳೂರಿನಲ್ಲಿ ಬಿಜೆಪಿ ಶಾಸಕರೇ ಹೆಚ್ಚಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಎಲ್ಲರ‌‌ ಬಳಿ ಚರ್ಚೆ ಮಾಡಿ ಅನುದಾನ ನೀಡಲಿ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಸರ್ಕಾರ ಅನುದಾನ ನೀಡಿತ್ತು. ಅದೇ ರೀತಿ ಕಾಂಗ್ರೆಸ್ ಕೂಡ ನಡೆದುಕೊಳ್ಳಲಿ. ಈಗಾಗಲೇ‌ ನಗರದಲ್ಲಿ ಕಸದ ರಾಶಿ ಹೆಚ್ಚಿದ್ದು, ವಿಲೇವಾರಿ ಮಾಡಲು ಕೂಡಲೇ ಕ್ರಮ ವಹಿಸಲಿ ಎಂದು ಆಗ್ರಹಿಸಿದರು.

Continue Reading

ಕ್ರೈಂ

Road Accident : ಫುಟ್‌ಪಾತ್ ಮೇಲೆ ನಿಂತಿದ್ದ ಕಾರ್ಮಿಕರ ಮೇಲೆ ಹರಿದ ಟಾಟಾ ಏಸ್; ನದಿಗೆ ಜಾರಿ ಬಿದ್ದ ವ್ಯಕ್ತಿ, ಗ್ರೇಟ್‌ ಎಸ್ಕೇಪ್‌

Road Accident : ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಹಲವರ ಸಾವು-ನೋವಿಗೆ ಕಾರಣವಾಗಿದೆ. ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಅಪರಿಚಿತ ವಾಹನ ಡಿಕ್ಕಿಗೆ ಕರಡಿಯೊಂದು ಮೃತಪಟ್ಟಿದೆ.

VISTARANEWS.COM


on

By

road accident
Koo

ಚಿಕ್ಕಬಳ್ಳಾಪುರ: ಫುಟ್‌ಪಾತ್‌ ಮೇಲೆ ನಿಂತಿದ್ದ ಕೂಲಿ ಕಾರ್ಮಿಕರ ಮೇಲೆ ಟಾಟಾ ಏಸ್‌ ವಾಹನವೊಂದು (Road Accident) ಹರಿದಿದೆ. ಅಪಘಾತದ ತೀವ್ರತೆಗೆ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟರೆ, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಚಿಕ್ಕಬಳ್ಳಾಪುರದ ಪೋಶೆಟ್ಟಿಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ.

ಚಿಂತಾಮಣಿ ತಾಲೂಕಿನ ನರಸಿಂಹ (50) ಮೃತ ದುರ್ದೈವಿ. ಬೆಳಗ್ಗೆ ಕೂಲಿಗೆ ಹೋಗಲು ಬಸ್‌ಗಾಗಿ ಫುಟ್ ಪಾತ್ ಮೇಲೆ ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಟಾಟಾಏಸ್‌ ವಾಹನವು ಏಕಾಏಕಿ ನಿಯಂತ್ರಣ ತಪ್ಪಿ ಕೂಲಿ ಕಾರ್ಮಿಕರಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ನರಸಿಂಹ ಸ್ಥಳದಲ್ಲೇ ಮೃತಪಟ್ಟರೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ನಾಲ್ವರು ಪಾರಾಗಿದ್ದಾರೆ. ಇತ್ತ ನರಸಿಂಹ ಮೃತದೇಹದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಅಪರಿಚಿತ ವಾಹನಕ್ಕೆ ಬೈಕ್‌ ಸವಾರ ಸೇರಿ ಕರಡಿ ಬಲಿ

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಬಳಿ ಘಟನೆ ನಡೆದಿದೆ. ದ್ಯಾಮಣ್ಣ ಶಂಕ್ರಪ್ಪ ಇಂಚಲ (40) ಸ್ಥಳದಲ್ಲೇ ಮೃತಪಟ್ಟವರು. ಧಾರವಾಡದಿಂದ ಅಮ್ಮಿನಬಾವಿ ಗ್ರಾಮಕ್ಕೆ ಆಗಮಿಸುತ್ತಿದ್ದಾಗ ಧಾರವಾಡ ಕಡೆಯಿಂದ ಬಂದ ವಾಹನವೊಂದು ಹರಿದಿದೆ. ಗಂಭೀರ ಗಾಯಗೊಂಡಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತ ಅಪರಿಚಿತ ವಾಹನ ಡಿಕ್ಕಿಯಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರಡಿಯೊಂದು ಮೃತಪಟ್ಟಿದೆ. ಚಿತ್ರದುರ್ಗದ ಹೊರವಲಯದ ತಮಟಕಲ್ಲು ಸಮೀಪ ಘಟನೆ ನಡೆದಿದೆ. ಜೋಗಿಮಟ್ಟಿ ಅರಣ್ಯ ಧಾಮದ ಬಳಿ ವನ್ಯ ಜೀವಿಗಳ ಓಡಾಟ ಹೆಚ್ಚು ಇರುತ್ತದೆ. ರಾತ್ರಿ ವೇಳೆ ರಸ್ತೆ ದಾಟುವಾಗ ವಾಹನವೊಂದು ಕರಡಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

ಬೆಳಗಾವಿಯಲ್ಲಿ ಬೈಕ್‌ ಮುಖಾಮುಖಿ ಡಿಕ್ಕಿ, ಸವಾರರಿಬ್ಬರು ಸಾವು

ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ‌ಇಬ್ಬರು ಸವಾರರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಬಳಿ ಘಟನೆ ನಡೆದಿದೆ. ಬಸವರಾಜ ಪ್ರಭುನವರ್(48), ಯಲ್ಲಪ್ಪ ಕೊರವಿನಕೊಪ್ಪ( 46) ಮೃತ ದುರ್ದೈವಿಗಳು. ಮತ್ತಿಬ್ಬರು ಬೈಕ್ ಸವಾರಿಗೆ ಗಂಭೀರ ‌ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಗಲಕೋಟೆಯಲ್ಲಿ ಟ್ರಕ್ – ಬೊಲೆರೊ ಮುಖಾಮುಖಿ ಡಿಕ್ಕಿ

ಟ್ರಕ್ ಹಾಗೂ ಬೊಲೆರೊ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬೊಲೆರೋ ವಾಹನದ ಮುಂಭಾಗ ನಜ್ಜು ಗುಜ್ಜಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ‌ ತಾಲೂಕಿನ ಬೆಳಗಲಿ ಪಟ್ಟಣದ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಬೊಲೆರೋ ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಗಾಯಾಳನ್ನು ಮುಧೋಳ ತಾಲ್ಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಮುಧೋಳ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದಲ್ಲದೇ ಕುಡುಕನೊಬ್ಬ ಮಹಿಳೆಯರಿಗೆ ಗುದ್ದಿದ್ದಾನೆ. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ನಗರದ ಟಿಪ್ಪು ನಗರದಲ್ಲಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಇಬ್ಬರು ಮಹಿಳೆಯರಿಗೆ ಗುದ್ದಿ ಮುಂದೆ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ.

ರಿಯಾಜ್ ದುಮ್ಮಾದ್ರಿ ಎಂಬಾತ ಕುಡಿದು ವಾಹನ ಚಲಾಯಿಸಿದವನು. ಕಾರು ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿನ್ನೆ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಐಶ್ವರ್ಯ ರಾಮಚಂದ್ರ ಗೊಲ್ಲರ್ (16), ಯಲ್ಲವ್ವ ಪರಶುರಾಮ ಗೊಲ್ಲರ್ (50) ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ವಿಜಯಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮೀರಜ್‌ಗೆ ಕರದೊಯ್ಯಲಾಗಿದೆ. ಸದ್ಯ ದೇವರ ಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಹಾಗೂ ಕಾರನ್ನು ದೇವರ ಹಿಪ್ಪರಗಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾಲು ತೊಳೆಯಲು ಹೋಗಿ ನದಿಗೆ ಜಾರಿ ಬಿದ್ದ ವ್ಯಕ್ತಿ

ರಭಸವಾಗಿ ಹರಿಯುತ್ತಿದ್ದ ಕೃಷ್ಣ ನದಿ ದಡಕ್ಕೆ ಕಾಲು ತೊಳೆಯಲು ಹೋಗಿದ್ದ ವ್ಯಕ್ತಿಯೊಬ್ಬ ಕೊಚ್ಚಿ ಹೋಗಿದ್ದ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಬಳಿ ಕೃಷ್ಣ ನದಿಯಲ್ಲಿ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ‌ ಸದ್ಯ ವಿಡಿಯೊ ವೈರಲ್ ಆಗುತ್ತಿದೆ.

ತಿಂಥಣಿ ಗ್ರಾಮದ ಕಾಸಿಂಸಾಬ್ ಎಂಬಾತ ಕಾಲು ಜಾರಿ ನದಿಗೆ ಬಿದ್ದವನು. ನೀರಿನ ಸೆಳೆತಕ್ಕೆ ಸಿಲುಕಿ ಕೊಂಚಿಕೊಂಡು ಹೋಗುತ್ತಿದ್ದವನನ್ನು ಕೂಡಲೇ ಕೂಡ್ಲೆ ಗ್ರಾಮದ ಅಂಬಿಗರು ತೆಪ್ಪದ ಮೂಲಕ ತೆರಳಿ ಕಾಸಿಂಸಾಬ್‌ನನ್ನು ರಕ್ಷಣೆ ಮಾಡಿದ್ದಾರೆ. ಅಂಬಿಗರ ಸಾಹಸಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

Vijayanagara News: ಹಗರಿಬೊಮ್ಮನಹಳ್ಳಿ; ಮಾಲವಿ ಜಲಾಶಯ ಪರಿಶೀಲಿಸಿದ ಡಿಸಿ ಎಂ.ಎಸ್.ದಿವಾಕರ್‌

Vijayanagara News: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಜಲಾಶಯಕ್ಕೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌, ಗುರುವಾರ ಭೇಟಿ ನೀಡಿ, ಕ್ರಸ್ಟ್ ಗೇಟ್ ದುರಸ್ತಿ ಕಾರ್ಯಗಳ ಬಗ್ಗೆ ಪರಿಶೀಲಿಸಿದರು.

VISTARANEWS.COM


on

DC MS Diwakar visit and inspected Maalavi Reservoir of Hagaribommanahalli Taluk
Koo

ವಿಜಯನಗರ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಜಲಾಶಯಕ್ಕೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಗುರುವಾರ ಭೇಟಿ ನೀಡಿ, ಕ್ರಸ್ಟ್ ಗೇಟ್ ದುರಸ್ತಿ ಕಾರ್ಯಗಳ ಬಗ್ಗೆ (Vijayanagara News) ಪರಿಶೀಲಿಸಿದರು.

ಇತ್ತೀಚೆಗೆ ನಡೆದ ಕಾಮಗಾರಿಗಳಿಂದಾಗಿ ಹಾಳಾಗಿರುವಂತಹ ಗೇಟ್ ದುರಸ್ತಿಯಾದಲ್ಲಿ ಅನುಕೂಲವಾಗಲಿದೆ ಎಂದು ಇದೆ ವೇಳೆ ರೈತ ಸಂಘಟನೆಗಳ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು. ಗೇಟ್ ದುರಸ್ತಿ ಕಾರ್ಯಕ್ಕೆ ಸಂಬಂಧಿಸಿದಂತೆ ಕೂಡಲೇ ಅಗತ್ಯ ಕ್ರಮವಹಿಸಬೇಕು ಎಂದು ನೀರಾವರಿ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: Reliance Industries: ರಿಲಯನ್ಸ್ ಇಂಡಸ್ಟ್ರೀಸ್‌ ಮೊದಲ ತ್ರೈಮಾಸಿಕ ಫಲಿತಾಂಶ ಪ್ರಕಟ; 17,448 ಕೋಟಿ ರೂ. ಲಾಭ

ಬಳಿಕ ಜಿಲ್ಲಾಧಿಕಾರಿಗಳು ಚಿತ್ರಪಳ್ಳಿ ಕೆರೆಗೆ ಭೇಟಿ ‌ನೀಡಿ, ಪರಿಶೀಲಿಸಿರು. ನಂತರ ಪಿಂಜಾರಹೆಗಡಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದರು. ಶಾಲೆಯ ತರಗತಿಗಳಿಗೆ ಭೇಟಿ ನೀಡಿ ಕಪ್ಪು ಹಲಗೆ ಮೇಲೆ ಬರೆಯುತ್ತ ಜೀವಶಾಸ್ತ್ರ ಪಾಠ ಮಾಡಿದರು. ಪಠ್ಯಕ್ಕೆ ಸಂಬಂದಿಸಿದಂತೆ ಮಕ್ಕಳಿಗೆ ಪ್ರಶ್ನೆಗಳನ್ನು ಕೇಳಿ ವಿದ್ಯಾಭ್ಯಾಸದ ಬಗ್ಗೆ ಪರೀಕ್ಷಿಸಿದರು.

ಅನಿರೀಕ್ಷಿತ ಭೇಟಿ

ಕಂದಾಯ ಅಧಿಕಾರಿಗಳು ಮಾಡುತ್ತಿದ್ದ ಸರ್ಕಾರಿ ಆಸ್ತಿಗಳ ಸರ್ವೇ ಕಾರ್ಯದ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಿದರು. ವಿಜಯನಗರ ಜಿಲ್ಲೆಯಲ್ಲಿ ಒಟ್ಟು 62,737 ಸರ್ಕಾರಿ ಆಸ್ತಿಗಳಿದ್ದು ಈ ಪೈಕಿ ಈಗಾಗಲೇ 56,806 ಸರ್ಕಾರಿ/ಅನಾದೀನ ಆಸ್ತಿಗಳನ್ನು ಹೊಸದಾಗಿ ಸಿದ್ಧಪಡಿಸಿರುವ ಲ್ಯಾಂಡ್ ಬೀಟ್ ಅಪ್ಲಿಕೇಶನ್‌ನಲ್ಲಿ ಕಂದಾಯ ಅಧಿಕಾರಿಗಳು ಸರ್ವೇ ಮಾಡಿ ಫೋಟೋ ಸಹಿತ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಅಧಿಕಾರಿಗಳಿಗೆ ಸೂಚನೆ

ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಸರ್ವೇ ಮಾಡಲು ಬಾಕಿ ಉಳಿದಂತಹ ಆಸ್ತಿಗಳನ್ನು ಕೂಡಲೇ ಮುಕ್ತಾಯಗೊಳಿಸುವಂತೆ ಇದೇ ವೇಳೆ ಜಿಲ್ಲಾಧಿಕಾರಿಗಳು, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: NEET UG 2024 Result: ಕ್ಷೇತ್ರವಾರು ನೀಟ್‌ ಪರೀಕ್ಷಾ ಫಲಿತಾಂಶ ಪ್ರಕಟ

ಸರ್ಕಾರಿ ಆಸ್ತಿಗಳಲ್ಲಿ ಅನಧಿಕೃತವಾಗಿ ಒತ್ತುವರಿಯಾಗದಂತೆ ಹಾಗೂ ಸರ್ಕಾರಿ ಆಸ್ತಿಗಳಲ್ಲಿ ಅನಧಿಕೃತ ಕಟ್ಟಡ, ಕಾಮಗಾರಿ ಹಾಗೂ ಇತರೆ ಅನಧಿಕೃತ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳುವಂತೆ ಸಹ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Continue Reading

ಕರ್ನಾಟಕ

LKG UKG in Anganwadis: ದೇಶದಲ್ಲೇ ಮೊದಲ ಬಾರಿ ಅಂಗನವಾಡಿಗಳಲ್ಲಿ ಎಲ್‌‌ಕೆಜಿ, ಯುಕೆಜಿ; ಜು.22ಕ್ಕೆ ಉದ್ಘಾಟನೆ

LKG UKG in Anganwadis: ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದಲ್ಲಿ ಜುಲೈ 22ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪೂರ್ವ ಪ್ರಾಥಮಿಕ ಶಾಲೆಗಳಿಗೆ ಚಾಲನೆ ನೀಡಲಿದ್ದಾರೆ.

VISTARANEWS.COM


on

LKG UKG in Anganwadis
Koo

ಬೆಂಗಳೂರು: ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್‌ಕೆಜಿ, ಯುಕೆಜಿ) ಗಳನ್ನು ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಆರಂಭಿಸುತ್ತಿದ್ದು, ಜುಲೈ 22ರಂದು ಸೋಮವಾರ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪೂರ್ವ ಪ್ರಾಥಮಿಕ ಶಾಲೆಗಳಿಗೆ (LKG UKG in Anganwadis) ಚಾಲನೆ ನೀಡಲಿದ್ದಾರೆ.

ಗೋವಿಂದರಾಜನಗರದ ಪಟ್ಟೆಗಾರಪಾಳ್ಯ ಮುಖ್ಯರಸ್ತೆಯ ಕಾವೇರಿಪುರ 4ನೇ ಕ್ರಾಸ್‌ನ ಬಾಲಯ್ಯ ಪಾರ್ಕ್ ಎದುರು ಜುಲೈ 22ರಂದು ಮಧ್ಯಾಹ್ನ 12ಗಂಟೆಗೆ ಪೂರ್ವ ಪ್ರಾಥಮಿಕ ತರಗತಿಗೆ ಚಾಲನೆ ಕಾರ್ಯಕ್ರಮ ನಡೆಯಲಿದ್ದು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಕೃಷ್ಣ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಸರ್ಕಾರದಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ಉಚಿತ

ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ (LKG UKG in Anganwadis) ಮೊದಲ ಭಾಗವಾಗಿ ಜುಲೈ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇತ್ತೀಚೆಗೆ ತಿಳಿಸಿದ್ದರು.

ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು. ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದರು.

30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು. ನನ್ನ ಅಧಿಕಾರ ಅವಧಿಯಲ್ಲಿ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸ ಮಾಡುವೆ. ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತೀಕರಣಕ್ಕೆ ಕಾರಣ ಎಂದು ಹೇಳಿದ್ದರು.

ಇದನ್ನೂ ಓದಿ | Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

ಈ ಮೊದಲು ಪ್ರಾಥಮಿಕ ಶಾಲೆಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಸರ್ಕಾರ ನಿರ್ಧರಿಸಿತ್ತು. ಆದರೆ, ಇದಕ್ಕೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ವಿರೋಧ ವ್ಯಕ್ತಪಡಿಸಿದ್ದರು. ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಿದರೆ ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ. ಹೀಗಾಗಿ ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು ಎಂದು ಒತ್ತಾಯ ಕೇಳಿಬಂದಿತ್ತು. ಹೀಗಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Continue Reading
Advertisement
Ravindra Jadeja
ಕ್ರಿಕೆಟ್17 mins ago

Ravindra Jadeja: ಟೀಮ್​ ಇಂಡಿಯಾ ಪರ ಜಡೇಜಾ ಇನ್ನು ಏಕದಿನ ಆಡುವುದು ಅನುಮಾನ; ಕಾರಣವೇನು?

Bangladesh protests
ವಿದೇಶ19 mins ago

Bangladesh Protests: ಬಾಂಗ್ಲಾದಲ್ಲಿ ನಿಲ್ಲದ ಹಿಂಸಾಚಾರ; 1000 ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್‌; ಸಾವಿನ ಸಂಖ್ಯೆ 115ಕ್ಕೆ ಏರಿಕೆ

Star suvarna Ravi Shankar entered television suvarna grahamanthri
ಕಿರುತೆರೆ29 mins ago

Star Suvarna: `ಸುವರ್ಣ ಗೃಹಮಂತ್ರಿ’ಯ ಸಾರಥಿಯಾಗಿ ಕಿರುತೆರೆಗೆ ಎಂಟ್ರಿ ಕೊಟ್ಟ ನಟ ರವಿಶಂಕರ್

Paris Olympics 2024
ಕ್ರೀಡೆ37 mins ago

Paris Olympics 2024 : ಒಲಿಂಪಿಕ್ಸ್​ಗೆ ತೆರಳಿರುವ ಭಾರತದ ಹಿರಿಯ ಮತ್ತು ಕಿರಿಯ ಸ್ಪರ್ಧಿಗಳು ಯಾರು ಗೊತ್ತೇ? ಇಲ್ಲಿದೆ ಅವರ ವಿವರ

Union Budget 2024
ದೇಶ51 mins ago

Union Budget 2024: ಸ್ಟಾಂಡರ್ಡ್‌ ಡಿಡಕ್ಷನ್‌, 80 ಸಿ ಮೊತ್ತ ಹೆಚ್ಚಳ; ಬಜೆಟ್‌ನಲ್ಲಿ ಏನೆಲ್ಲ ತರಿಗೆ ರಿಲೀಫ್?

Kanguva Movie Suriya to have 3 different looks in Siva
ಕಾಲಿವುಡ್58 mins ago

Kanguva Movie: ʻಕಂಗುವʼ ಚಿತ್ರದಲ್ಲಿ ಮೂರು ಅವತಾರಗಳಲ್ಲಿ ಮಿಂಚಲಿದ್ದಾರಂತೆ ಸೂರ್ಯ

Building Collapsed
ದೇಶ1 hour ago

Building Collapsed: ಭಾರೀ ಮಳೆಗೆ ನಾಲ್ಕು ಅಂತಸ್ತಿಗೆ ಕಟ್ಟಡ ಧರಾಶಾಹಿ; ಮಹಿಳೆ ಬಲಿ

Opposition Party leader R Ashok pressmeet about Valmiki Development Corporation scam
ಕರ್ನಾಟಕ1 hour ago

R Ashok: ವಾಲ್ಮೀಕಿ ಹಗರಣ; ಮುಖ್ಯಮಂತ್ರಿ ಏನು ಕತ್ತೆ ಕಾಯುತ್ತಿದ್ದರೇ ಎಂದ ಆರ್‌. ಅಶೋಕ್‌

King Cobra Rescue
ವೈರಲ್ ನ್ಯೂಸ್1 hour ago

King Cobra Rescue: 12 ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪವನ್ನು ಹಿಡಿದದ್ದು ಹೇಗೆ? ವಿಡಿಯೊ ನೋಡಿ

ಕ್ರೀಡೆ1 hour ago

Mohammed Shami: ಪಾಕ್​ ಮಾಜಿ ನಾಯಕ ಇಂಜಮಾಮ್ ಬೆಂಡೆತ್ತಿದ ಮೊಹಮ್ಮದ್​ ಶಮಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌