Site icon Vistara News

Karnataka Election: ಮುಸ್ಲಿಂ ಸಮುದಾಯಕ್ಕೆ 1 ಡಿಸಿಎಂ, 5 ಸಚಿವ ಸ್ಥಾನ ನೀಡಿ; ವಕ್ಫ್‌ ಬೋರ್ಡ್‌ ಒತ್ತಾಯ

Wakf Board meeting

Wakf Board meeting

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ (Karnataka Election) ನಿರೀಕ್ಷೆಗೂ ಮೀರಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೆ ರೇಸ್‌ ಶುರುವಾಗಿದ್ದು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಸೇರಿ ಹಲವರು ಪ್ರಬಲ ಆಕಾಂಕ್ಷಿಗಳಿದ್ದಾರೆ. ಒಂದೆಡೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂಬ ಕೂಗು ಎದ್ದಿರುವ ಬೆನ್ನಲ್ಲೇ, ಮತ್ತೊಂದೆಡೆ ಒಂದು ಡಿಸಿಎಂ ಹಾಗೂ 5 ಸಚಿವ ಸ್ಥಾನಗಳನ್ನು ಮುಸ್ಲಿಮರಿಗೆ ನೀಡಬೇಕು ಎಂದು ವಕ್ಫ್‌ ಬೋರ್ಡ್‌ ಆಗ್ರಹಿಸಿದೆ.

ನಗರದಲ್ಲಿ ಭಾನುವಾರ ಮುಸ್ಲಿಂ ಧರ್ಮಗುರುಗಳು ಹಾಗೂ ಮುಖಂಡರ ಸಭೆ ನಡೆಸಿದ್ದು, ಸಮುದಾಯಕ್ಕೆ ಡಿಸಿಎಂ ಸ್ಥಾನ ಹಾಗೂ 5 ಸಚಿವ ಸ್ಥಾನ ನೀಡಬೇಕು ವಕ್ಫ್‌ ಬೋರ್ಡ್‌ ಅಧ್ಯಕ್ಷ ಶಾಫಿ ಸಅದಿ ಆಗ್ರಹಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಶೇ.88ರಷ್ಟು ಮುಸ್ಲಿಮರು ಕಾಂಗ್ರೆಸ್‌ಗೆ ಮತ ನೀಡಿದ್ದಾರೆ. ಹೀಗಾಗಿ ಕಾಂಗ್ರೆಸ್‌ಗೆ ಬಹುಮತ ಬಂದಿದ್ದು, ನಮ್ಮ ಸಮುದಾಯದ ಒಬ್ಬರನ್ನು ಡಿಸಿಎಂ, ಐವರನ್ನು ಮಂತ್ರಿ ಮಾಡಬೇಕು ಹೇಳಿದ್ದಾರೆ.

ಇದನ್ನೂ ಓದಿ | Karnataka Election Results: ಗೆಲ್ಲಲು ಘಟಾನುಘಟಿಗಳಿಗೆ ನೀರು ಕುಡಿಸಿದ ಕ್ಷೇತ್ರಗಳಿವು!

ರಾಜ್ಯದ 224 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಮುಸ್ಲಿಮರು ಸ್ಪರ್ಧಿಸಿದ್ದರು. ಅವರಲ್ಲಿ 9 ಅಭ್ಯರ್ಥಿಗಳು ಗೆದ್ದಿದ್ದಾರೆ. ಈ ಹಿಂದೆ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದಾಗ ಸರ್ಕಾರದಲ್ಲಿ ಮುಸ್ಲಿಂ ಸಮುದಾಯದಿಂದ ಆಯ್ಕೆಯಾದ ಐವರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಹೀಗಾಗಿ ಈ ಬಾರಿಯ ಸರ್ಕಾರದಲ್ಲೂ ಐವರಿಗೆ ಸಚಿವ ಸ್ಥಾನ ಮತ್ತು ಒಂದು ಡಿಸಿಎಂ ಹುದ್ದೆ ನೀಡಬೇಕು ಎಂದು ತಿಳಿಸಿದ್ದಾರೆ.

Exit mobile version