ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಭರ್ಜರಿ ಬಹುಮತ ಪಡೆದ ಕಾಂಗ್ರೆಸ್‌ನ ಸರ್ಕಾರ ಶನಿವಾರದಿಂದ ಅಸ್ತಿತ್ವಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, (CM Siddaramaiah), ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ (DK Shivakumar) ಮತ್ತು ಎಂಟು ಮಂದಿ ಸಚಿವರು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮುಖ್ಯಮಂತ್ರಿಗಳು ಮತ್ತು ಸಚಿವರು ಪ್ರಮಾಣವನ್ನು ಯಾರ ಹೆಸರಿನಲ್ಲಿ ಸ್ವೀಕರಿಸಿದರು ಎಂಬುದು ತುಂಬಾ ಕುತೂಹಲಕಾರಿ ಸಂಗತಿ. ಯಾರ ಹೆಸರಿನಲ್ಲಿ ಎಂಬುದು ಆಯಾ ವ್ಯಕ್ತಿಗಳ ನಂಬಿಕೆ, ಸಿದ್ಧಾಂತ, ಯಾರ ಮೇಲೆ ಅತಿಯಾದ ವಿಶ್ವಾಸ ಮತ್ತು ಪ್ರೀತಿ ಎನ್ನುವುದನ್ನು ಆಧರಿಸಿರುತ್ತದೆ.
ಇಲ್ಲಿ ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಾವು ಬಹುವಾಗಿ ನಂಬುವ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಹಾಗಿದ್ದರೆ ಯಾರು ಯಾರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು? ಅವರ ಪ್ರಮಾಣ ವಚನ ಸ್ವೀಕಾರ ಸಂಭ್ರಮ ಹೇಗಿತ್ತು? ಎನ್ನುವುದನ್ನು ಈ ವಿಡಿಯೊಗಳಲ್ಲಿ ನೋಡಿ…
ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣವಚನ
ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಅವರು ಪ್ರಮಾಣವಚನ ಸ್ವೀಕರಿಸುವ ವೇಳೆ ಜನರ ಕೇಕೆ ಮುಗಿಲುಮುಟ್ಟಿತು.
ಅಜ್ಜಯ್ಯನನ್ನು ನೆನಪಿಸಿಕೊಂಡ ಡಿ.ಕೆ. ಶಿವಕುಮಾರ್
ಡಿ.ಕೆ ಶಿವಕುಮಾರ್ ಅವರು ರಾಜ್ಯದ ಉಪಮುಖ್ಯಮಮಂತ್ರಿಯಾಗಿ ತುಮಕೂರಿನ ನೊಣವಿನಕೆರೆ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಡಿ.ಕೆ. ಶಿವಕುಮಾರ್ ಅವರು ಯಾವುದೇ ಕೆಲಸ ಮಾಡುವ ಮೊದಲು ನೊಣವಿನಕೆರೆಯ ಅಜ್ಜಯ್ಯ ಅವರನ್ನು ನೆನಪಿಸಿಕೊಳ್ಳುತ್ತಾರೆ.
ಡಾ.ಜಿ ಪರಮೇಶ್ವರ್ ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು
ಕೆ.ಎಚ್ ಮುನಿಯಪ್ಪ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು
ಕೆ.ಜೆ ಜಾರ್ಜ್ ಕ್ಯಾಬಿನೆಟ್ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು
ಎಂ.ಬಿ. ಪಾಟೀಲ್ ದೇವರ ಹೆಸರಿನಲ್ಲಿಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು
ಸತೀಶ್ ಜಾರಕಿಹೊಳಿ ಬುದ್ಧ, ಬಸವ, ಅಂಬೇಡ್ಕರ್ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ
ಪ್ರಿಯಾಂಕ್ ಖರ್ಗೆ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು
ರಾಮಲಿಂಗಾ ರೆಡ್ಡಿ ಅವರು ಯಾವುದೇ ಹೆಸರು ಹೇಳಲಿಲ್ಲ. ಅವರು ಶ್ರದ್ಧಾಪೂರ್ವಕವಾಗಿ ಪ್ರಮಾಣವಚನ ಸ್ವೀಕರಿಸುವುದಾಗಿ ಹೇಳಿದರು.
ಜಮೀರ್ ಅಹ್ಮದ್ ಖಾನ್ ಅವರು ಅಲ್ಲಾಹು ಮತ್ತು ತಾಯಿಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಅವರು ಇಂಗ್ಲಿಷ್‌ನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಕ್ಕೆ ಕೆಲವರ ಆಕ್ಷೇಪವೂ ಎದುರಾಯಿತು.
ಇದನ್ನೂ ಓದಿ: Zameer Ahmed Khan : ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜಮೀರ್; ಕನ್ನಡ ಹೋರಾಟಗಾರರ ಆಕ್ರೋಶ