Site icon Vistara News

Gokak Election Results: ಗೋಕಾಕದಲ್ಲಿ ಮುಂದುವರಿದ ರಮೇಶ್ ಜಾರಕಿಹೊಳಿ ಗೆಲುವಿನ ಆರ್ಭಟ, ಕೈಗೆ ಮತ್ತೆ ಸೋಲು

ramesh jarkiholi own the gokak assembly constituency

ಬೆಂಗಳೂರು: ದೇಶದ ಗಮನ ಸೆಳೆದಿದ್ದ ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿಯ ಪ್ರಭಾವಿ ನಾಯಕ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿದ್ದಾರೆ. ಕೈ ಅಭ್ಯರ್ಥಿ ಮಹಾಂತೇಶ್ ಕಡಾಡಿ ಅವರು ಟಫ್ ಫೈಟ್ ಕೊಟ್ಟಿದ್ದರು. ಕೊನೆಗೆ ರಮೇಶ್ ಜಾರಕಿಹೊಳಿ ಅವರು ಕೊನೆಗೆ 2541 ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಮಹಾಂತೇಶ್ ಕಡಾಡಿ ಅವರು 79901 ಮತಗಳನ್ನು ಪಡೆದುಕೊಂಡರು. ಗೋಕಾಕ್ ಕ್ಷೇತ್ರದಲ್ಲಿ ಜಾರಕಿಹೊಳಿ ಕುಟುಂಬವು ಹಿಡಿತವನ್ನು ಸಾಧಿಸಿದೆ(Gokak Election Results).

2023ರ ಚುನಾವಣಾ ಅಭ್ಯರ್ಥಿಗಳು

ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಅವರು ಮತ್ತೆ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಕಾಂಗ್ರೆಸ್ ಈ ಬಾರಿ ಹೊಸ ಮುಖ ಮಹಾಂತೇಶ್ ಕಡಾಡಿ ಅವರನ್ನು ಕಣಕ್ಕಿಳಿಸಿತ್ತು.

ಇದನ್ನೂ ಓದಿ: Karnataka Election Results Live Updates: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ; ಡಬಲ್​ ಎಂಜಿನ್​​ನ ಕೊಂಡಿ ಕಳಚಿದ ‘ಕೈ’

2018ರ ಚುನಾವಣೆಯ ಫಲಿತಾಂಶ ಏನಾಗಿತ್ತು?

ಗೋಕಾಕ್ ವಿಧಾನಸಭಾ ಕ್ಷೇತ್ರವು ಬೆಳಗಾವಿ ಜಿಲ್ಲೆಯ ಪ್ರತಿಷ್ಠೆಯ ಕಣವಾಗಿದೆ. ಈ ಕ್ಷೇತ್ರದಲ್ಲೂ ಜಾರಕಿಹೊಳಿ ಕುಟುಂಬದ ಪ್ರಭಾವವಿದೆ. ಇತ್ತೀಚಿನ ವರ್ಷಗಳಲ್ಲಿ ರಮೇಶ್ ಜಾರಕಿಹೊಳಿ ಅವರು ಸತತವಾಗಿ ಈ ಕೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದಾರೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದ ಅವರು 2019ರ ಬೈ ಎಲೆಕ್ಷನ್‌ನಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. 2018ರಲ್ಲಿ ರಮೇಶ್ ಜಾರಕಿಹೊಳಿ ಅವರು 90249 ಮತಗಳನ್ನು ಪಡೆದುಕೊಂಡು ವಿಜಯಶಾಲಿಯಾಗಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಅಶೋಕ್ ಪೂಜಾರಿ ಅವರು 75969 ಮತಗಳನ್ನು ಪಡೆದುಕೊಂಡಿದ್ದರು. ಆದರೆ, ಆಪರೇಷನ್ ಕಮಲದ ಭಾಗವಾಗಿ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು. ಆಗ ನಡೆದ 2019ರ ಉಪ ಚುನಾವಣೆಯಲ್ಲಿ ಅವರು ಬಿಜೆಪಿಯಿಂದ ಸ್ಪರ್ಧಿಸಿ, 87450 ಮತಗಳನ್ನು ಪಡೆದುಕೊಂಡಿದ್ದರು. ಇವರ ವಿರುದ್ಧ ಸಹೋದರ ಲಕ್ಷ್ಮಣ್ ಜಾರಕಿಹೊಳಿ ಅವರು 58 444 ಮತಗಳನ್ನುಪಡೆದುಕೊಂಡಿದ್ದರು. ಸಹೋದರ ಸವಾಲಿನಲ್ಲಿ ಕೊನೆಗೆ ರಮೇಶ್ ಜಾರಕಿಹೊಳಿ ಅವರೇ ವಿಜಯದ ನಗೆ ಬೀರಿದ್ದರು.

Exit mobile version