ಚಿಕ್ಕೋಡಿ: ಮನೆಯೊಂದರಲ್ಲಿ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನವಾಗಿರುವ ಘಟನೆ ಕುಡಚಿ ಹೊರವಲಯದ ಗೌತಮ ಬುದ್ಧನಗರದಲ್ಲಿ ನಡೆದಿದೆ. ಇಮ್ತಾಬೇ ಅಲಂ ಗೌಸಮೊದ್ದಿನ್ ರೊಹಿಲೆ ಎಂಬುವವರ ಮನೆಯಲ್ಲಿ ಕಳ್ಳತನ (Theft Case) ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಕೈಚಳಕ ತೋರಿದ್ದಾರೆ.
ಮನೆಯಲ್ಲಿದ್ದ 13.20 ಲಕ್ಷ ಮೌಲ್ಯದ 33 ತೊಲ ಬಂಗಾರ, 2.90 ಲಕ್ಷ ರೂಪಾಯಿ ಸೇರಿ ಒಟ್ಟು 16 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ. ಶನಿವಾರ ತಡರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಕುಡಚಿ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಇದನ್ನೂ ಓದಿ | Krishna river : ಪುಣ್ಯ ಸ್ನಾನ ಮಾಡಲು ಹೋದ ಯುವಕ ನೀರುಪಾಲು
ನಿದ್ದೆ ಮಂಪರಿನಲ್ಲಿ ಡಿವೈಡರ್‌ಗೆ ಗುದ್ದಿದ ಕಾರು; ಇಬ್ಬರು ವಿದ್ಯಾರ್ಥಿಗಳ ದುರ್ಮರಣ
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದ್ದರಿಂದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ (Car Accident) ಯಲಹಂಕ ಸಮೀಪದ ಹುಣಸಮಾರನಹಳ್ಳಿಯಲ್ಲಿ ನಡೆದಿದೆ. ನಿದ್ದೆ ಮಂಪರಿನಲ್ಲಿ ವಾಹನ ಚಾಲನೆ ಮಾಡಿರುವುದು ದುರಂತಕ್ಕೆ ಕಾರಣವಾಗಿದೆ.
ಕಾರ್ತಿಕ್ ಜೈನ್, ಆದರ್ಶ್ ಕುಮಾರ್ ಮೃತ ವಿದ್ಯಾರ್ಥಿಗಳು. ಕಾರಿನಲ್ಲಿ ಐವರು ವಿದ್ಯಾರ್ಥಿಗಳು ಶನಿವಾರ ತಡರಾತ್ರಿ ನಂದಿ ಬೆಟ್ಟಕ್ಕೆ ಟ್ರಿಪ್ ಹೊರಟಿದ್ದರು. ಆದರೆ, ಅಷ್ಟು ಹೊತ್ತಿನಲ್ಲಿ ಹೋಗುವುದು ಬೇಡ ಎಂದು ವಿದ್ಯಾರ್ಥಿಗಳು ವಾಪಸ್ ಬರುತ್ತಿದ್ದರು. ಈ ವೇಳೆ ಹುಣಸಮಾರನಹಳ್ಳಿ ಬಳಿ ಚಾಲಕ ನಿದ್ದೆ ಮಂಪರಿನಲ್ಲಿ ಡಿವೈಡರ್ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕಾರ್ತಿಕ್ ಜೈನ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆದರ್ಶ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.