ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿನ್ನ ಖರೀದಿಸುವವರಿಗೆ ಶುಕ್ರವಾರ (ಜನವರಿ 5) ಶುಭ ಶುಕ್ರವಾರ ಎನಿಸಿದೆ. ರಾಜ್ಯ ರಾಜಧಾನಿಯಲ್ಲಿ ಸತತ ಎರಡನೇ ದಿನವೂ ಚಿನ್ನದ ಬೆಲೆ (Gold Rate Today) ಇಳಿಕೆಯಾಗಿದೆ. ಶುಕ್ರವಾರ ನಗರದಲ್ಲಿ 22 ಕ್ಯಾರಟ್‌ನ ಒಂದು ಗ್ರಾಂಗೆ 10 ರೂ. ಇಳಿಕೆಯಾಗಿದೆ. ಹಾಗೆಯೇ, 24 ಕ್ಯಾರಟ್‌ನ ಒಂದು ಗ್ರಾಂಗೆ 11 ರೂ. ಇಳಿಕೆಯಾಗಿದೆ. ಇದರೊಂದಿಗೆ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನಕ್ಕೆ 5,800 ರೂ. ಆದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನಕ್ಕೆ 6,327 ರೂ. ಆಗಿದೆ.
ಕೆಲ ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿದೆ. ಕಳೆದ 10 ದಿನಗಳಲ್ಲಿ ಚಿನ್ನದ ಬೆಲೆಯು ಮೂರು ಬಾರಿ ಏರಿಕೆಯಾಗಿದೆ. ಮೂರು ಬಾರಿ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಇನ್ನು ನಾಲ್ಕು ಬಾರಿ ಚಿನ್ನದ ಬೆಲೆ ಇಳಿಕೆಯಾಗಿದೆ. ಜನವರಿ 4ರಂದು 10 ದಿನಗಳಲ್ಲೇ ಗರಿಷ್ಠ ಅಂದರೆ ಪ್ರತಿ ಗ್ರಾಂಗೆ 40 ರೂ. ಇಳಿಕೆಯಾಗಿತ್ತು. ಕೆಲವೇ ದಿನಗಳಲ್ಲಿ ಸಂಕ್ರಾಂತಿ ಇರುವ ಕಾರಣ ಚಿನ್ನದ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?
ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.
1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್ಸೈಟ್ ಅನ್ನು ಅವಲಂಬಿಸುವುದು ಉತ್ತಮ.
2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.
3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.
ಇದನ್ನೂ ಓದಿ: Gold Price: ಚಿನ್ನದ ಮೇಲೆ ಹೂಡಿಕೆಗೆ ಇದು ‘ಬಂಗಾರ’ದ ಸಮಯ; 10 ಗ್ರಾಂಗೆ 70 ಸಾವಿರ ರೂ.!?
4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ