Site icon Vistara News

Gold Rate Today: ಬೆಂಗಳೂರಿನಲ್ಲಿ ಸತತ 2ನೇ ದಿನ ಚಿನ್ನದ ಬೆಲೆ ಏರಿಕೆ; ಇಷ್ಟಿದೆ ದರ

Mithila Palker

Gold Rate In Bengaluru Today: 10 Rupees Increased In The City, Here Is The Price

ಬೆಂಗಳೂರು: ದಸರಾ ಹಬ್ಬ ಮುಗಿದರೂ ಬೆಂಗಳೂರಿನಲ್ಲಿ ಸತತ ಎರಡನೇ ದಿನವೂ ಚಿನ್ನದ ಬೆಲೆ ಏರಿಕೆಯಾಗಿದೆ. ಕೆಲವೇ ದಿನಗಳಲ್ಲಿ ದೀಪಾವಳಿ ಬರುವುದರಿಂದ ಹಾಗೂ ಚಿನ್ನದ ಖರೀದಿಗೆ ಹೆಚ್ಚಿನ ಜನ ಆಸಕ್ತಿ ತೋರುತ್ತಿರುವುದರಿಂದ ನಗರದಲ್ಲಿ ಚಿನ್ನದ ಬೆಲೆ (Gold Rate Today) ಏರಿಕೆಯಾಗುತ್ತಿದೆ. ಸಿಲಿಕಾನ್‌ ಸಿಟಿಯಲ್ಲಿ ಬುಧವಾರ (ಅಕ್ಟೋಬರ್‌ 25) 22 ಕ್ಯಾರಟ್‌ ಮತ್ತು 24 ಕ್ಯಾರಟ್ ಚಿನ್ನದ ಬೆಲೆಗಳು ಕ್ರಮವಾಗಿ 10 ರೂ. ಹಾಗೂ 11 ರೂ. ಹೆಚ್ಚಳ ಕಂಡಿದೆ.

ಇದರೊಂದಿಗೆ ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 5,665 ರೂ. ಆಗಿದೆ. ಇದು ಮಂಗಳವಾರ 5,655 ರೂ. ಇತ್ತು. ಇನ್ನು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 6,180 ರೂ. ಆಗಿದೆ. ಇದು ಮಂಗಳವಾರ 6,168 ರೂ. ಇತ್ತು. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಇನ್ನೂ ಕೆಲವು ದಿನಗಳವರೆಗೆ ಚಿನ್ನದ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Anushka Sharma In Gold

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್‌ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.

ಇದನ್ನೂ ಓದಿ: Money Guide: ಹಬ್ಬಕ್ಕೆ ಚಿನ್ನ ಖರೀದಿಸುತ್ತಿದ್ದೀರಾ? ಈ ಸಂಗತಿಗಳು ಗೊತ್ತಿರಲಿ

ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ 12.4 ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.

Exit mobile version