ಬೆಂಗಳೂರು: ದಸರಾ, ದೀಪಾವಳಿ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಚಿನ್ನದ ಖರೀದಿ ಭರಾಟೆ ಜೋರಾಗಿದೆ. ಚಿನ್ನದ ಖರೀದಿ ಜೋರಾಗುತ್ತಿದ್ದಂತೆಯೇ ಬೆಲೆಯೂ ಏರಿಕೆಯಾಗುತ್ತಿದೆ. ನಗರದಲ್ಲಿ ಸತತ ಐದನೇ ದಿನವೂ ಬಂಗಾರದ ಬೆಲೆ ಏರಿಕೆಯಾಗಿದೆ. ನಗರದಲ್ಲಿ 22 ಕ್ಯಾರಟ್ ಮತ್ತು 24 ಕ್ಯಾರಟ್‌ನ ಚಿನ್ನದ ಬೆಲೆಯು (Gold Rate Today) ಭಾನುವಾರ (ಅಕ್ಟೋಬರ್22) ಕ್ರಮವಾಗಿ 20 ರೂ. ಹಾಗೂ 22 ರೂ. ಏರಿಕೆಯಾಗಿದೆ.
ರಾಜ್ಯ ರಾಜಧಾನಿಯಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 5,660 ರೂ. ಆಗಿದೆ. ಇದು ಶನಿವಾರ 5,640 ರೂ. ಇತ್ತು. ಇನ್ನು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನಕ್ಕೆ 6,175 ರೂ. ಇದೆ. ಇದು ಶನಿವಾರ 6,153 ರೂ. ಇತ್ತು. ಸಾಲು ಸಾಲು ಹಬ್ಬಗಳಿರುವ ಕಾರಣ ಚಿನ್ನಕ್ಕೆ ಬೇಡಿಕೆ ಜಾಸ್ತಿಯಾಗಿರುವ ಕಾರಣ ದಿನೇದಿನೆ ಏರಿಕೆಯಾಗುತ್ತಿದೆ ಎಂದು ತಿಳಿದುಬಂದಿದೆ. ಇಷ್ಟಾದರೂ, ಚಿನ್ನದ ಖರೀದಿ ಪ್ರಮಾಣ ತಗ್ಗಿಲ್ಲ ಎಂದು ಮೂಲಗಳು ತಿಳಿಸಿವೆ.
ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್ ಗೋಲ್ಡ್ ಕೌನ್ಸಿಲ್ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.
ಇದನ್ನೂ ಓದಿ: Money Guide: ಹಬ್ಬಕ್ಕೆ ಚಿನ್ನ ಖರೀದಿಸುತ್ತಿದ್ದೀರಾ? ಈ ಸಂಗತಿಗಳು ಗೊತ್ತಿರಲಿ
ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-19 ಬರುವುದಕ್ಕೆ ಮುನ್ನ 12.4 ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.