Site icon Vistara News

Gold Rate Today: ಸತತ ನಾಲ್ಕನೇ ದಿನವೂ ಚಿನ್ನದ ಬೆಲೆ ಏರಿಕೆ; ಇಷ್ಟಿದೆ ಇಂದಿನ ಬೆಲೆ

Rinku Rajguru

Gold Rate Increased 17 Rupees Per Gram In Bengaluru Today

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ (Bengaluru) ಶುಕ್ರವಾರ (ಮಾರ್ಚ್‌ 8) ಚಿನ್ನದ ಬೆಲೆ ಏರಿಕೆಯಾಗಿದೆ. ಸತತ ನಾಲ್ಕನೇ ದಿನವೂ ಬಂಗಾರದ ಬೆಲೆಯಲ್ಲಿ (Gold Rate Today) ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಹೊರೆಯಾಗಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂಪಾಯಿ ಏರಿಕೆಯಾದರೆ, 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 17 ರೂಪಾಯಿ ಏರಿಕೆಯಾಗಿದೆ.

ಮಾರ್ಚ್‌ 7ರಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆಯು ಕ್ರಮವಾಗಿ 40 ರೂ. ಹಾಗೂ 43 ರೂಪಾಯಿ ಹೆಚ್ಚಳವಾಗಿತ್ತು. ಮಾರ್ಚ್‌ 6 ಹಾಗೂ 5ರಂದು ಕೂಡ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿತ್ತು. ಈಗ ಶಿವರಾತ್ರಿ ದಿನವೂ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ವೀಕೆಂಡ್‌ನಲ್ಲಾದರೂ ಚಿನ್ನದ ಬೆಲೆ ಇಳಿಕೆ ಕಾಣಲಿ ಎಂಬುದು ಗ್ರಾಹಕರ ಆಶಯವಾಗಿದೆ.

golden wear

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಇದನ್ನೂ ಓದಿ: Ram Mandir: 25 ಕೆಜಿ ಬೆಳ್ಳಿ, 10 ಕೆಜಿ ಚಿನ್ನ; 1 ತಿಂಗಳಿನಲ್ಲಿ ರಾಮ ಮಂದಿರದಲ್ಲಿ ಸಂಗ್ರಹವಾಗಿದ್ದು ಎಷ್ಟು ಕೋಟಿ ರೂ.?

ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ ಎಂದು ತಜ್ಞರು ಹೇಳುತ್ತಾರೆ. ಬೆಲೆ ತಿಳಿದುಕೊಂಡರೆ ನಿಮ್ಮ ಬಜೆಟ್‌ಗೆ ಅನುಗುಣವಾದ ವಿನ್ಯಾಸ, ಪ್ರಮಾಣವನ್ನು ಲೆಕ್ಕ ಹಾಕಲು ಸುಲಭವಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version