Site icon Vistara News

Gold Rate Today: ಹಬ್ಬದ ದಿನವೇ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆ; ಇಂದಿನ ಬೆಲೆ ಇಷ್ಟು

Ashika Ranganath

Gold Rate Increases 40 Rupees Per Gram In Bengaluru Today

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಹಬ್ಬದ ಹಿನ್ನೆಲೆಯಲ್ಲಿ ದಿನೇದಿನೆ ಬಂಗಾರದ ಬೆಲೆ ಜಾಸ್ತಿಯಾಗುತ್ತಿದೆ. ಗೌರಿ ಗಣೇಶ ಹಬ್ಬವಾದ ಸೋಮವಾರ (ಸೆಪ್ಟೆಂಬರ್‌ 18) ಕೂಡ (Gold Rate Today) ನಗರದಲ್ಲಿ ಚಿನ್ನದ ಬೆಲೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 5,505 ರೂ. ಆಗಿದ್ದು, ಒಂದು ಗ್ರಾಂಗೆ 14 ರೂ. ಜಾಸ್ತಿಯಾದಂತಾಗಿದೆ. ಹಾಗೆಯೇ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 6,008 ರೂ. ಆಗಿದ್ದು, ಒಂದೇ ದಿನದಲ್ಲಿ 18 ರೂ. ಏರಿಕೆಯಾಗಿದೆ.

ಇದರೊಂದಿಗೆ ನಗರದಲ್ಲಿ ಸತತ ನಾಲ್ಕು ದಿನಗಳಿಂದ ಚಿನ್ನದ ಬೆಲೆ ಜಾಸ್ತಿಯಾದಂತಾಗಿದೆ. ಭಾನುವಾರ 22 ಕ್ಯಾರಟ್‌ನ ಒಂದು ಗ್ರಾಂಗೆ 20 ರೂ. ಹಾಗೂ 24 ಕ್ಯಾರಟ್‌ನ ಒಂದು ಗ್ರಾಂಗೆ 22 ರೂ. ಏರಿಕೆಯಾಗಿತ್ತು. 24 ಕ್ಯಾರಟ್‌ 10 ಗ್ರಾಂ ಚಿನ್ನದ ದರ ಈಗ 60,080 ರೂ. ಆಗಿದೆ. ಇನ್ನು 22 ಕ್ಯಾರಟ್‌ 10 ಗ್ರಾಂ ಚಿನ್ನದ ಬೆಲೆ 55,050 ರೂ. ಆಗಿದೆ.

gold rate today

ಇದನ್ನೂ ಓದಿ: Chaitra Kundapura : ವಂಚಿಸಿದ ಐದು ಕೋಟಿಯಲ್ಲಿ ಆಗಲೇ 3.8 ಕೋಟಿ ಮೌಲ್ಯದ ಚಿನ್ನಾಭರಣ, ಹಣ ರಿಕವರಿ!

ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ( Gold rate ) ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್‌ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.

ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ 12.4 ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.

Exit mobile version