Site icon Vistara News

Gold Rate Today: ಬೆಂಗಳೂರಿನಲ್ಲಿ ಸತತ 6ನೇ ದಿನವೂ ಚಿನ್ನದ ಬೆಲೆ ಇಳಿಕೆ; ಇಷ್ಟಿದೆ ಇಂದಿರ ದರ

Milana Nagaraj

Gold Rate Today

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸತತ ಆರನೇ ದಿನವೂ ಬಂಗಾರದ ಬೆಲೆ ಇಳಿಕೆಯಾಗಿದೆ. ನಗರದಲ್ಲಿ ಭಾನುವಾರ (ಅಕ್ಟೋಬರ್‌ 1) 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 30 ರೂ. ಇಳಿಕೆಯಾಗಿದೆ. ಹಾಗೆಯೇ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 33 ರೂ. ಇಳಿಕೆಯಾಗಿದೆ.

ಇದರೊಂದಿಗೆ ನಗರದಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 5,335 ರೂ. ಇದೆ. ಇದು ಶನಿವಾರ 5,365 ರೂ. ಇತ್ತು. ಮತ್ತೊಂದೆಡೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ಭಾನುವಾರ 5,820 ರೂ. ಇದೆ. ಇದು ಶನಿವಾರ 5,853 ರೂ. ಇತ್ತು. ಇದರೊಂದಿಗೆ ಸತತ ಆರನೇ ದಿನವೂ ಬಂಗಾರದ ಬೆಲೆ ಇಳಿಕೆಯಾದಂತಾಗಿದೆ.

ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ಬಂಗಾರದ ಬೆಲೆಯು ಜಾಸ್ತಿಯಾಗಿತ್ತು. 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 5,500 ರೂ. ದಾಟಿದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 6 ಸಾವಿರ ರೂ. ದಾಟಿತ್ತು. ಆದರೆ, ಕಳೆದ ಆರು ದಿನದಿಂದ ಇಳಿಕೆಯಾಗುತ್ತಿರುವ ಕಾರಣ ಗ್ರಾಹಕರು ತುಸು ನಿರಾಳರಾಗಿದ್ದಾರೆ ಎಂದು ತಿಳಿದುಬಂದಿದೆ.

ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ( Gold rate ) ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್‌ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.

ಇದನ್ನೂ ಓದಿ: Gold Fruad : Hallmark ಚಿನ್ನಾಭರಣ ನೀಡಿ ಲೋನ್‌ ಪಡೆಯಲು ಯತ್ನ: SBI ಮ್ಯಾನೇಜರ್‌ ಜಾಣ್ಮೆ ಮುಂದೆ ನಡೆಯದ ಆಟ!

ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ 12.4 ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.

Exit mobile version