Site icon Vistara News

Gold Rate Today: ಸ್ವಾತಂತ್ರ್ಯ ದಿನ ಸಿಹಿ ಸುದ್ದಿ; ಬಂಗಾರದ ಬೆಲೆ 100 ರೂ. ಇಳಿಕೆ; ಇಂದಿನ ದರ ಎಷ್ಟಿದೆ ನೋಡಿ

A woman wearing gold jewelry

Gold Rate Today: Gold 100 Rupees Cheaper In Bengaluru, Check Rates Here

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ (ಆಗಸ್ಟ್‌ 15) ಬಂಗಾರದ ದರ (Gold Rate Today) 100 ರೂಪಾಯಿ ಇಳಿಕೆಯಾಗಿದೆ. 24 ಕ್ಯಾರಟ್‌ನ ಪ್ರತಿ 10 ಗ್ರಾಮ್‌ ಚಿನ್ನದ ದರ 59,510 ರೂ. ಇದೆ. ಸೋಮವಾರ (ಆಗಸ್ಟ್‌ 14) 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 59,620 ರೂ. ಇತ್ತು. ಇದರೊಂದಿಗೆ ಒಂದು ದಿನದಲ್ಲಿ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 110 ರೂಪಾಯಿ ಇಳಿಕೆಯಾದಂತಿದೆ.

ಹಾಗೆಯೇ, 22 ಕ್ಯಾರಟ್‌ನ 10 ಗ್ರಾಂ ಚಿನ್ನದ ದರದಲ್ಲೂ 100 ರೂ. ಇಳಿಕೆಯಾದಂತಾಗಿದೆ. ಸೋಮವಾರ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು 54,650 ರೂ. ಇತ್ತು. ಆದರಿದು ಮಂಗಳವಾರ 55,550 ರೂ. ಆಗಿದೆ. ಇದರೊಂದಿಗೆ ಮಂಗಳವಾರ ಬಂಗಾರದ ಬೆಲೆ 100 ಇಳಿಕೆಯಾದಂತಾಗಿದೆ. ಭಾನುವಾರಕ್ಕೆ ಹೋಲಿಸಿದರೆ ಸೋಮವಾರ ಬಂಗಾರದ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿರಲಿಲ್ಲ.

ಇದನ್ನೂ ಓದಿ: ರಾಜ ಮಾರ್ಗ ಅಂಕಣ : ಕೊರಳಲ್ಲಿ ಚಿನ್ನದ ಪದಕ ಇದ್ದರೂ ಆಕೆಯ ಕಣ್ಣು ಯಾರನ್ನೋ ಹುಡುಕುತ್ತಿತ್ತು!

‌ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ( Gold rate ) ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್‌ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.

ಜ್ಯುವೆಲ್ಲರಿ ರಫ್ತು

ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ ೧೨.೪ ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.

Exit mobile version