Site icon Vistara News

Gold Rate Today: ಬೆಂಗಳೂರಿನಲ್ಲಿ ಬಂಗಾರದ ಬೆಲೆ 15 ರೂ. ಏರಿಕೆ; ಇಂದಿನ ಬೆಲೆ ಇಷ್ಟಿದೆ ನೋಡಿ

Mrunal Thakur

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ (ಸೆಪ್ಟೆಂಬರ್‌ 3) ಬಂಗಾರದ ದರ (Gold Rate Today) 15 ರೂಪಾಯಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂಗೆ 5,520 ರೂ. ಇದೆ. ಇದು ಶನಿವಾರ 5,505 ರೂ. ಇತ್ತು. ಇನ್ನು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 6,022 ರೂ. ಇದೆ. ಇದು ಶನಿವಾರ 6,005 ರೂ. ಇತ್ತು. ಆ ಮೂಲಕ 24 ಕ್ಯಾರೆಟ್‌ ಚಿನ್ನದ ಬೆಲೆ 17 ರೂ. ಏರಿಕೆಯಾದಂತಾಗಿದೆ.

ಇದರೊಂದಿಗೆ ನಗರದಲ್ಲಿ 24 ಕ್ಯಾರಟ್‌ 10 ಗ್ರಾಂ ಚಿನ್ನದ ದರ 60,220 ರೂ. ಆಗಿದೆ. ಇನ್ನು 22 ಕ್ಯಾರಟ್‌ 10 ಗ್ರಾಂ ಚಿನ್ನದ ಬೆಲೆ 55,200 ರೂ. ಆಗಿದೆ. ಶನಿವಾರವೂ ಬಂಗಾರದ ಬೆಲೆ ಏರಿಕೆಯಾಗಿತ್ತು. ಸೆಪ್ಟೆಂಬರ್‌ 1ರಂದು ಮಾತ್ರ ತುಸು ಇಳಿಕೆಯಾಗಿದ್ದು ಗ್ರಾಹಕರಿಗೆ ಸಂತಸ ತಂದಿತ್ತು.

Gold

ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ( Gold rate ) ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್‌ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.

ಇದನ್ನೂ ಓದಿ: ಭಗವಂತ ಕೃಷ್ಣನ ಆಭರಣಗಳನ್ನು ಕದ್ದ ಕಳ್ಳ 9 ವರ್ಷದ ನಂತರ ವಾಪಸ್ ತಂದಿಟ್ಟು ಹೋದ; ಜತೆಗೊಂದು ಪತ್ರವನ್ನಿಟ್ಟ!

ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ 12.4 ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.

Exit mobile version