Gold Rate Today: ಯಥಾಸ್ಥಿತಿ ಕಾಪಾಡಿಕೊಂಡ ಬಂಗಾರದ ಬೆಲೆ, ಬೆಳ್ಳಿಯ ಬೆಲೆಯೂ ಸ್ಥಿರ Vistara News

ಕರ್ನಾಟಕ

Gold Rate Today: ಯಥಾಸ್ಥಿತಿ ಕಾಪಾಡಿಕೊಂಡ ಬಂಗಾರದ ಬೆಲೆ, ಬೆಳ್ಳಿಯ ಬೆಲೆಯೂ ಸ್ಥಿರ

22 ಕ್ಯಾರಟ್‌ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಸೋಮವಾರ ಬೆಂಗಳೂರಿನಲ್ಲಿ ನಿನ್ನೆಯ ದರವನ್ನೇ ಕಾಪಾಡಿಕೊಂಡಿದೆ.

VISTARANEWS.COM


on

women wearing gold
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 22 ಕ್ಯಾರಟ್‌ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಸೋಮವಾರ ಬೆಂಗಳೂರಿನಲ್ಲಿ ನಿನ್ನೆಯ ದರವನ್ನೇ ಕಾಪಾಡಿಕೊಂಡಿದೆ.

ಬೆಂಗಳೂರಿನಲ್ಲಿ ನೀವಿಂದು ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹5,495ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹43,960 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 54,950 ಮತ್ತು ₹ 5,49,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹5,995 ಆಗಿದ್ದರೆ, ಎಂಟು ಗ್ರಾಂ ಬೆಲೆ ₹47,960 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರೆಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 59,950 ಮತ್ತು ₹ 5,99,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ ₹ 75, ಎಂಟು ಗ್ರಾಂ ₹ 600 ಮತ್ತು 10 ಗ್ರಾಂ ₹ 750ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹ 7,500 ಮತ್ತು 1 ಕಿಲೋಗ್ರಾಂಗೆ ₹ 75,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ
22 ಕ್ಯಾರಟ್ 24 ಕ್ಯಾರಟ್
ದಿಲ್ಲಿ
55,100 60,100
ಬೆಂಗಳೂರು
54,95059,950
ಮುಂಬಯಿ
54,95059,950
ಚೆನ್ನೈ 55,200 60,220

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಕೆಲವು ಅಂಶಗಳು ಇಲ್ಲಿವೆ:

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Elephant Arjuna: ಮೈಸೂರು, ಹಾಸನದಲ್ಲಿ ಅರ್ಜುನ ಆನೆಯ ಸ್ಮಾರಕ ನಿರ್ಮಾಣ: ಈಶ್ವರ ಖಂಡ್ರೆ

Elephant Arjuna: ಅರ್ಜುನನ ಸೇವೆಯನ್ನು ನಾಡಿನ ಜನರು ಸದಾ ಸ್ಮರಿಸುವಂತೆ ಹಾಸನ ಮತ್ತು ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

VISTARANEWS.COM


on

Elephant Arjuna
Koo

ಬೆಳಗಾವಿ: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಆನೆ ಕಾರ್ಯಾಚರಣೆ ವೇಳೆ ಪುಂಡಾನೆಯ ಜೊತೆ ಕಾದಾಡಿ ಮಡಿದ ಕ್ಯಾಪ್ಟನ್, ಸೀನಿಯರ್, ಬಲಭೀಮ ಎಂದೇ ಖ್ಯಾತವಾಗಿದ್ದ ಹಾಗೂ ಮೈಸೂರಿನ ಜಗದ್ವಿಖ್ಯಾತ ದಸರಾ ಜಂಬೂಸವಾರಿಯಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಸ್ಮಾರಕವನ್ನು (Elephant Arjuna) ಹಾಸನ ಮತ್ತು ಮೈಸೂರು ಜಿಲ್ಲೆಯಲ್ಲಿ ನಿರ್ಮಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅರ್ಜುನನ ಸಾವಿನ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಸಚಿವರು, ನಾಡಿನ ಜನರ ಪ್ರೀತಿಗೆ ಪಾತ್ರವಾಗಿದ್ದ ಅರ್ಜನನ ಸಾವು ಅತ್ಯಂತ ದುಃಖದಾಯಕ. ಅರ್ಜನ ಮತ್ತು ನಾಡಿನ ಜನತೆಯ ನಡುವೆ ಭಾವನಾತ್ಮಕ ಸಂಬಂಧ ಇತ್ತು. ಈ ಆನೆ ಸಾವು ನಾಡಿನಾದ್ಯಂತ ಇರುವ ಪ್ರಾಣಿ ಪ್ರಿಯರಿಗೆ ಮತ್ತು ಸಾರ್ವಜನಿಕರಿಗೆ ನೋವು ತಂದಿದೆ.
ಹಲವು ಹುಲಿ, ಆನೆ ಕಾರ್ಯಾಚರಣೆಗಳಲ್ಲಿ ಯಶಸ್ವಿಯಾಗಿ ಪಾಲ್ಗೊಂಡಿದ್ದ ಎಂದು ಸ್ಮರಿಸಿದ್ದಾರೆ.

ಅರ್ಜುನನಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿದ್ದು, ಅರ್ಜುನ ಸೇವೆಯನ್ನು ನಾಡಿನ ಜನರು ಸದಾ ಸ್ಮರಿಸುವಂತೆ ಹಾಸನ ಮತ್ತು ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಆನೆ ಕಾರ್ಯಾಚರಣೆ ವಿಧಾನ ಮಾರ್ಪಾಡಿಗೆ ಸೂಚನೆ

ಆನೆ ಕಾರ್ಯಾಚರಣೆ ವೇಳೆ ಲೋಲಗಳು ಆಗುತ್ತಿರುವ ಹಿನ್ನೆಲೆಯಲ್ಲಿ ಆನೆ ಕಾರ್ಯಾಚರಣೆ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಒ.ಪಿ.)ದಲ್ಲಿ ಏನಾದರೂ ತಿದ್ದುಪಡಿ ಅಥವಾ ಮಾರ್ಪಾಡು ಮಾಡಬೇಕಾಗಿದೆಯೇ ಎಂಬ ಬಗ್ಗೆ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳು, ತಜ್ಞರೊಂದಿಗೆ ಸಮಾಲೋಚನೆ ನಡೆಸಿ 3 ದಿನಗಳ ಒಳಗಾಗಿ ಕಡತದಲ್ಲಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ಅರಣ್ಯ ಸಚಿವ ಸೂಚಿಸಿದ್ದಾರೆ.

ರಾಜ್ಯದ ಆನೆಗಳ ಸಂಖ್ಯೆಯಲ್ಲಿ ರಾಷ್ಟ್ರದಲ್ಲೇ ಮೊದಲ ಸ್ಥಾನದಲ್ಲಿರುವುದು ಸಂತೋಷದ ವಿಷಯವಾದರೂ, ಕೆಲವು ಪುಂಡಾನೆಗಳು ಪದೇ ಪದೇ ನಾಡಿಗೆ ಬರುತ್ತಿರುವುದು ಮತ್ತು ಜೀವಹಾನಿ, ಬೆಳೆ ಹಾನಿ ಆಗುತ್ತಿರುವುದಲ್ಲದೆ, ಆನೆ ಕಾರ್ಯಾಚರಣೆ ವೇಳೆ ಆನೆಗಳು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಸಾವಿಗೀಡಾಗುತ್ತಿರುವುದು ಅತ್ಯಂತ ಆತಂಕದ ಸಂಗತಿಯಾಗಿದೆ. ಹೀಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಒ.ಪಿ.)ದಲ್ಲಿ ತಿದ್ದುಪಡಿ ಅಥವಾ ಮಾರ್ಪಾಡು ಮಾಡಬೇಕಾಗಿದೆಯೇ ಎಂಬ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ | Elephant Arjuna : ಅಧಿಕಾರಿಗಳ ಗುಂಡಿನಿಂದಲೇ ಅರ್ಜುನನ ಮರಣ?; ಇಲ್ಲಿದೆ ವಿಡಿಯೊ ಸಾಕ್ಷಿ

ಕಾಡಾನೆ ಸೆರೆ ಕಾರ್ಯಾಚರಣೆಗೆ 64 ವರ್ಷದ ಅರ್ಜುನನನ್ನು ಬಳಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅರ್ಜುನನಿಗೆ ವಯಸ್ಸಾದ ಕಾರಣಕ್ಕೆ ಅರ್ಜುನನಿಗೆ ಅಂಬಾರಿ ಹೋರುವುದನ್ನೇ ನಿಲ್ಲಿಸಲಾಗಿದೆ. ಆದರೂ 64 ವರ್ಷದ ಅರ್ಜುನನ್ನು ಕಾಡಿನ ಪುಂಡಾನೆ ಸೆರೆ ಕಾರ್ಯಾಚರಣೆಗೆ ಬಳಿಸರುವುದು ಕಾನೂನು ಬಾಹಿರ ಎಂದು ಅರಣ್ಯಾಧಿಕಾರಿಗಳ ವಿರುದ್ಧ ವನ್ಯಜೀವಿ ತಜ್ಞರು ಅಸಮಾಧಾನ ಹೊರಹಾಕಿದ್ದಾರೆ. ಹೀಗಾಗಿ ಕಾರ್ಯಾಚರಣೆ ವಿಧಾನದಲ್ಲಿ ಬದಲಾವಣೆ ಮಾಡಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Belagavi Winter Session: ವೇತನ ಆಯೋಗದ ವರದಿ ಬಗ್ಗೆ ಅತೃಪ್ತಿ; ಸಭಾತ್ಯಾಗ ಮಾಡಿದ ಕಮಲ, ದಳ ಸದಸ್ಯರು

Belagavi Winter Session: 7ನೇ ವೇತನ ಆಯೋಗದ ವರದಿ ಜಾರಿ ವಿಚಾರಕ್ಕೆಸಭಾನಾಯಕ ಎನ್‌.ಎಸ್‌. ಭೋಸರಾಜು ನೀಡಿದ ಉತ್ತರ ತೃಪ್ತಿಕರವಾಗಿಲ್ಲ ಎಂದು ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ.

VISTARANEWS.COM


on

Belagavi Winter Session
Koo

ಬೆಳಗಾವಿ: ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಿರುವ 7ನೇ ವೇತನ ಆಯೋಗದ ವರದಿ ಜಾರಿ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿ ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರು, ಸಭಾತ್ಯಾಗ (Belagavi Winter Session) ಮಾಡಿದ ಘಟನೆ ಮಂಗಳವಾರ ನಡೆಯಿತು. ವರದಿ ಜಾರಿ ಸಂಬಂಧ ಸಭಾನಾಯಕ ಎನ್‌.ಎಸ್‌. ಭೋಸರಾಜು ನೀಡಿದ ಉತ್ತರ ತೃಪ್ತಿಕರವಾಗಿಲ್ಲ, ಸಿಎಂ ಸಿದ್ದರಾಮಯ್ಯನವರೇ ಬಂದು ಉತ್ತರಿಸಬೇಕು ಎಂದು ಪಟ್ಟು ಹಿಡಿದ ಸದಸ್ಯರು, ಬಳಿಕ ಸಭಾತ್ಯಾಗ ಮಾಡಿದರು.

ನಿಯಮ 330ರಡಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ವೈ.ಎ. ನಾರಾಯಣಸ್ವಾಮಿ, ‘ಆಯೋಗದ ವರದಿ ಸಿದ್ಧವಾಗಿದ್ದರೂ, ವಿನಾ ಕಾರಣ ಆಯೋಗದ ಅವಧಿ ವಿಸ್ತರಿಸಲಾಗಿದೆ. ಸರ್ಕಾರದಲ್ಲಿ ದುಡ್ಡಿಲ್ಲ. ವೇತನ ಪರಿಷ್ಕರಿಸಲು ಮನಸ್ಸಿಲ್ಲ’ ಎಂದು ಆರೋಪಿಸಿದರು. ಅವರ ಮಾತುಗಳಿಗೆ ಬಿಜೆಪಿ, ಜೆಡಿಎಸ್ ಸದಸ್ಯರು ದನಿಗೂಡಿಸಿದರು.

ಈ ವೇಳೆ ಉತ್ತರ ನೀಡಿದ ಎನ್.ಎಸ್. ಬೋಸರಾಜು ಅವರು, ‘ವೇತನ ಆಯೋಗದ ಅವಧಿಯನ್ನು 2024ರ ಮಾರ್ಚ್ 15ರವರೆಗೆ ವಿಸ್ತರಿಸಲಾಗಿದೆ. ಸರ್ಕಾರ ಆಯೋಗದ ಅಂತಿಮ ವರದಿಯ ನಿರೀಕ್ಷೆಯಲ್ಲಿದೆ. ಆದಷ್ಟು ಬೇಗ ವರದಿ ಪಡೆದು ಸಾಧಕ- ಬಾಧಕಗಳನ್ನು ನೋಡಿಕೊಂಡು ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದರು.

ಅದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ, ಜೆಡಿಎಸ್ ಸದಸ್ಯರು, ಸಭಾಪತಿ ಪೀಠದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ‘ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಮೋಸ ಮಾಡುತ್ತಿದೆ’ ಎಂದು ಘೋಷಣೆ ಕೂಗಿದರು. ಬಿಜೆಪಿಯ ಎಸ್.ವಿ. ಸಂಕನೂರ, ಚಿದಾನಂದಗೌಡ, ತೇಜಸ್ವಿನಿಗೌಡ, ಶಶಿಲ್ ಜಿ. ನಮೋಶಿ, ಜೆಡಿಎಸ್‌ನ ಎಸ್.ಎಲ್. ಬೋಜೇಗೌಡ ದನಿಗೂಡಿಸಿದರು. ನಂತರ ಅವರು ಸಭಾತ್ಯಾಗ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಚ್. ವಿಶ್ವನಾಥ್ ಅವರು, ‘ವೇತನ ಪರಿಷ್ಕರಣೆ ಬಗ್ಗೆ ಒಂದು ವಾರಗಳ ಕಾಲ ಸುದೀರ್ಘ ಚರ್ಚೆ ಆಗಬೇಕು’ ಎಂದು ಸಲಹೆ ನೀಡಿದರು.

ಇದನ್ನೂ ಓದಿ | HD Kumaraswamy: ವೈಯಕ್ತಿಕವಾಗಿ ಕೆಣಕಿದರೆ ನಾನು ಸುಮ್ಮನಿರಲ್ಲ ಎಂದ ಎಚ್‌ಡಿಕೆ

ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

ಬೆಳಗಾವಿ: ರಾಜ್ಯದಲ್ಲಿ ಭೀಕರ ಬರಗಾಲ (Karnataka Drought) ಇದೆ. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರನ್ನೂ ಸೇರಿಸಿ ಯಾವೊಬ್ಬ ಸಚಿವರೂ ಸಹ ರೈತರನ್ನು ಭೇಟಿ ಮಾಡುವ ಕೆಲಸ ಮಾಡಲಿಲ್ಲ. ಸಿಎಂ ಮತ್ತು ಸಚಿವರು ಎಲ್ಲ ಕಡೆ ಹೋಗಲು ಸಾಧ್ಯವಿಲ್ಲ ಎಂಬುದು ನಮಗೂ ಗೊತ್ತು. ಆದರೆ, ಕೆಲವು ಕಡೆಯಾದರೂ ಹೋಗಬೇಕಲ್ಲವೇ? ನೋಡಲ್ ಅಧಿಕಾರಿ ವಿಮಾನದಲ್ಲಿ ಹೋಗಿ ಮೀಟಿಂಗ್ ಮಾಡಿ ವಾಪಸ್ ಬರುತ್ತಾರೆ. ಕೊನೆಗೆ ಅಧಿಕಾರಿಗಳು ಯಾವುದೇ ಸಮಸ್ಯೆ ಇಲ್ಲ ಎಂದು ವರದಿ ಕೊಡುತ್ತಾರೆ. ಸಿದ್ದರಾಮಯ್ಯ ಸಿದ್ದರಾಮಣ್ಣ ಮತ್ತು ನಮ್ಮ ಊರಲ್ಲೂ ಅದೇ ಕುರುಕ್ಷೇತ್ರ. ಇನ್ನು ರೈತರಿಗೆ ಸಮರ್ಪಕವಾಗಿ ವಿದ್ಯುತ್‌ ಕೊಡುತ್ತಿಲ್ಲ. ಟಿಸಿ ಹಾಳಾದರೆ ಅದನ್ನು ಬದಲಾವಣೆ ಮಾಡಲು, ರಿಪೇರಿ ಮಾಡಲು ಹಣ ಕೇಳುತ್ತಾರೆ. ಇದೆಂಥ ಪರಿಸ್ಥಿತಿ ಬಂದಿದೆ ಎಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ (Belagavi Winter Session) ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ (Opposition leader R Ashok) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಬರದ ಮೇಲಿನ ಚರ್ಚೆಯನ್ನು ಕೈಗೆತ್ತಿಕೊಂಡು ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌, ಬರ ಪರಿಸ್ಥಿತಿ ನಿರ್ವಹಣೆ ವಿಷಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅಧಿಕಾರಿಗಳು ಕುಳಿತಲ್ಲೇ ವರದಿ ತಯಾರಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Teachers Recruitment: ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರ ನೇಮಕ; ಒಟ್ಟು ಎಷ್ಟು ಹುದ್ದೆ ನಿರೀಕ್ಷೆ?

ಯಾವುದಾದರೂ ತಹಸೀಲ್ದಾರ್ ಎಷ್ಟು ಊರಿಗೆ ಹೋಗಿರುವುದಾಗಿ ಹೇಳಿದ್ದಾರೆ ಎಂಬುದನ್ನು ಯಾರಾದರೂ ಹೇಳಿ ನೋಡೋಣ? ಗ್ರಾಮ ಪಂಚಾಯಿತಿಯಲ್ಲಿ ಕುಳಿತುಕೊಂಡು ಅಧಿಕಾರಿಗಳಿಗೆ ಏನು ಕೆಲಸ? ಬೆಳೆ ಎಷ್ಟು ನಷ್ಟ ಆಗಿದೆ ಅಂತ ನೋಡಿ ಹೇಳಬೇಕಲ್ಲವೇ? ಎಂದು ಆರ್.‌ ಅಶೋಕ್‌ ಪ್ರಶ್ನೆ ಮಾಡಿದರು.

ಇದನ್ನೂ ಓದಿ | Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

ಸಿದ್ದರಾಮಯ್ಯ ಸಿಎಂ ಆಗಿ ಮುಂದೆ ಇರ್ತಾರೋ ಇಲ್ಲವೋ ಗೊತ್ತಿಲ್ಲ!

ಸಿದ್ದರಾಮಯ್ಯ 15 ಬಾರಿ ಬಜೆಟ್ ಮಂಡಿಸಿದ್ದಾರೆ. 2 ಬಾರಿ ಸಿಎಂ ಆಗಿದ್ದಾರೆ. 14 ಬಾರಿ ಅಲ್ವಾ ಒಂದು ಹೆಚ್ಚಾಗಿ ಹೇಳಿದ್ದೇನೆ. ಮುಂದೆಯೂ ನೀವೇ ಇರುತ್ತೀರಿ ಎಂದು ಹೇಳಿದ್ದೇನೆ. ನನಗೆ ಈ ಬಗ್ಗೆ ಗೊತ್ತಿಲ್ಲ. ಮಂಡ್ಯ ಎಂಎಲ್‌ಎ ರವಿ ಗಣಿಗ ಅವರು ಮಂಡ್ಯದಲ್ಲಿ 2 ವರ್ಷ, 3 ವರ್ಷ ಆದ ಮೇಲೆ ಯಾರನ್ನೋ ತರುತ್ತೇವೆ ಎಂದು ಹೇಳಿದ್ದರು ಎಂಬುದಾಗಿ ಆರ್.‌ ಅಶೋಕ್‌ ಸಿಎಂ ಸಿದ್ದರಾಮಯ್ಯ ಅವರ ಕಾಲೆಳೆಯುತ್ತಿದ್ದಂತೆ ಎದ್ದುನಿಂತ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ, ನಿಮ್ಮ ಪಕ್ಷದ ಶಾಸಕರೊಬ್ಬರು ಮುಂದಿನ 10 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಅಂತ ಹೇಳಿದ್ದಾರೆ ಎಂದು ನೆನಪಿಸಿದರು. ಅದಕ್ಕೆ ಆರ್.‌ ಅಶೋಕ್‌, ಆಯ್ತು ಅಂತ ಹೇಳಿ ಸುಮ್ಮನಾದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ಯಾದಗಿರಿಯಲ್ಲಿ ‘ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್’ ಕಾರ್ಯಕ್ರಮಕ್ಕೆ ಚಾಲನೆ

Yadgiri News: ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ -2023 ರ ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯ ಸಾಧಕ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಯಾದಗಿರಿಯ ಶಾಸ್ತ್ರಿ ವೃತ್ತದ ಸಮೀಪದ ಎನ್.ವಿ.ಎಂ. ರೆಸಿಡೆನ್ಸಿ ಸಭಾಂಗಣದಲ್ಲಿ ನಡೆಯಿತು.

VISTARANEWS.COM


on

Vistara News Best Teacher Award -2023 programme inauguration by Yadgiri DC Sushila B. at Yadgiri
ಯಾದಗಿರಿಯ ಶಾಸ್ತ್ರಿ ವೃತ್ತದ ಸಮೀಪದ ಎನ್.ವಿ.ಎಂ. ರೆಸಿಡೆನ್ಸಿ ಸಭಾಂಗಣದಲ್ಲಿ ನಡೆದ ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ -2023 ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಉದ್ಘಾಟಿಸಿದರು.
Koo

ಯಾದಗಿರಿ: ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ -2023 (Vistara News Best Teacher Award -2023) ರ ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯ ಸಾಧಕ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಯಾದಗಿರಿಯ ಶಾಸ್ತ್ರಿ ವೃತ್ತದ ಸಮೀಪದ ಎನ್.ವಿ.ಎಂ. ರೆಸಿಡೆನ್ಸಿ ಸಭಾಂಗಣದಲ್ಲಿ ಸೋಮವಾರ ಸಂಜೆ ನಡೆಯಿತು.

ಶಶಿ ಸೂಪರ್ ಬಜಾರ್, ಎನ್.ವಿ.ಎಂ ರೆಸಿಡೆನ್ಸಿ, ಪಾಟೀಲ್‌ ಡಿಜಿಟಲ್ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳ ಬದುಕು ರೂಪಿಸುವ ಹೆಮ್ಮೆಯ ಶಿಕ್ಷಕರಿಗೆ ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ ನೀಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಸಾಧಕ ಶಿಕ್ಷಕರನ್ನು ಗುರುತಿಸಿ, ಅವರಿಗೆ ಪ್ರಶಸ್ತಿ ನೀಡುತ್ತಿರುವುದರಿಂದ ಶಿಕ್ಷಕರ ಜವಾಬ್ದಾರಿ ಹೆಚ್ಚಿಸಿದೆ ಎಂದು ತಿಳಿಸಿದರು.

ಉತ್ತಮ ಸಮಾಜ ನಿರ್ಮಾಣ ಮಾಡಲು ಶಿಕ್ಷಕರ ಪಾತ್ರ ಮುಖ್ಯವಾಗಿದೆ‌. ಮಕ್ಕಳು ಶಾಲೆ ಬಿಟ್ಟರೆ ಶಿಕ್ಷಕರು ಮಕ್ಕಳ ಕಾಳಜಿ ವಹಿಸಿ ಅಂತಹ ಮಕ್ಕಳ ಮನೆಗೆ ತೆರಳಿ ಮುಖ್ಯವಾಹಿನಿಗೆ ತರುವ ಕಾರ್ಯ ನಿರಂತರವಾಗಿ ಮಾಡುವ ಜವಾಬ್ದಾರಿ ಹೊಂದಬೇಕು. ಯಾದಗಿರಿ ಜಿಲ್ಲೆಯು ಶೈಕ್ಷಣಿಕ ಮಟ್ಟದಲ್ಲಿ ಹಿಂದುಳಿದಿದ್ದು, ಶಿಕ್ಷಣ ಮಟ್ಟ ಅಭಿವೃದ್ಧಿ ಪಡಿಸಲು ಶಿಕ್ಷಕರು ಹೆಚ್ಚು ಶ್ರಮವಹಿಸಿ ಶಿಕ್ಷಣ ನೀಡಬೇಕಿದೆ ಎಂದ ಅವರು, ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಯಲ್ಲಿ ಶಿಕ್ಷಕರು ಶ್ರಮವಹಿಸಿ ಈ ಬಾರಿ ಉತ್ತಮ ಫಲಿತಾಂಶ ಬರುವ ಕಾರ್ಯ ಮಾಡಬೇಕು ಎಂದರು.

ಇದನ್ನೂ ಓದಿ: Teachers Recruitment: ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರ ನೇಮಕ; ಒಟ್ಟು ಎಷ್ಟು ಹುದ್ದೆ ನಿರೀಕ್ಷೆ?

ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡಿದ್ದ ಬಿಜೆಪಿ ಮುಖಂಡ ಮಹೇಶ್ ರೆಡ್ಡಿ ಮುದ್ನಾಳ ಮಾತನಾಡಿ, ವಿಸ್ತಾರ ನ್ಯೂಸ್ ಹಲವು ವಿಭಿನ್ನ ಕಾರ್ಯಕ್ರಮ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಕೃಷಿ, ಆರೋಗ್ಯ, ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರದ ಕಾರ್ಯಕ್ರಮ ಮೂಲಕ ಎಲ್ಲಾ ವರ್ಗದವರ ಕಾಳಜಿ ತೊರುತ್ತಿದೆ.

ಎಲೆಮರೆ ಕಾಯಿಯಂತೆ ಜ್ಞಾನ ದಾಸೋಹ ಮಾಡುತ್ತಿರುವ ಶಿಕ್ಷಕರನ್ನು ಗುರುತಿಸಿ ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ ಪ್ರದಾನ ಮಾಡುವ ಕಾರ್ಯ ಉತ್ತಮವಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಜಿಲ್ಲಾ ಲೀಡ್ ಕಾಲೇಜು ಪ್ರಾಂಶುಪಾಲ ಡಾ‌.ಸುಭಾಶ್ಚಂದ್ರ ಕೌಲಗಿ ಮಾತನಾಡಿ, ವಿಸ್ತಾರ ನ್ಯೂಸ್ ನಿರೀಕ್ಷೆಗೂ ಮೀರಿ ಜನರಿಗೆ ತಲುಪುವ ಕೆಲಸ ಮಾಡುತ್ತಿದೆ ಎಂದರು.

ಇದನ್ನೂ ಓದಿ: Weight Loss Tips: ದೇಹ ತೂಕ ಇಳಿಸಲು ಸಹಕಾರಿ ಈ ಈರುಳ್ಳಿ ಹೂವು!

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಬಿ.ಆರ್.ಸಿ ಮಲ್ಲಿಕಾರ್ಜುನ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ 2023 ಪ್ರಶಸ್ತಿ ಪುರಸ್ಕೃತ ಶಿಕ್ಷಕರು

ಪ್ರಶಸ್ತಿ ಪುರಸ್ಕೃತ ಶಿಕ್ಷಕರು

ಕಾರ್ಯಕ್ರಮದಲ್ಲಿ ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ ಗೆ ಆಯ್ಕೆಯಾದ ಕಂದಕೂರು ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕಿ ಮಧುಮತಿ ಎಚ್.ಸಿಂಗೆ, ಬಿಳ್ಹಾರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಕೊಟ್ರಬಸಪ್ಪ ಕಡ್ಲಿ, ತೀರ್ಥ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವೀರಣ್ಣಗೌಡ ಬಿ. ಪಾಟೀಲ, ಯಾದಗಿರಿಯ ನವನಂದಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಜ್ಯೋತಿ ಎಚ್.ಪಾಟೀಲ್, ಯಾದಗಿರಿಯ ನವನಂದಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುರೇಖಾ ಜಿ.ಶೆಕ್ ಸಿಂದೆ, ರಾಮಸಮುದ್ರ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ನಿಂಗಣ್ಣ ಟಿ.ವಡಗೇರಿ, ಕಲಬುರಗಿಯ ದಿಶಾ ಪಿಯು ಕಾಲೇಜಿನ ಉಪನ್ಯಾಸಕರಾದ ಸಂತೋಷ ಜಾಕಾಪುರೆ, ಅಂಬರೀಶ್ ಜಿಡಗಿ, ಕಲಬುರಗಿಯ ಸರ್ವಜ್ಞ ಪಿಯು ಕಾಲೇಜುನ ಉಪನ್ಯಾಸಕ ಅಶೋಕ್ ಎಚ್.ಕಾಬಾ, ಯಾದಗಿರಿಯ ಶಾಂತಿ ಸದನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ರೇಣುಕಾ ಎಂ.ಹೊಸಮನಿ ಅವರಿಗೆ ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ -2023 ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಲಾಯಿತು.

ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ 2023 ಪ್ರಶಸ್ತಿ ಪುರಸ್ಕೃತ ಶಿಕ್ಷಕರು

ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ, ಪ್ರೌಢ ಶಾಲೆ ಸಹ ಶಿಕ್ಷಕರ ಸಂಘ ಜಿಲ್ಲಾ ಘಟಕ, ಪ್ರಾಥಮಿಕ ಶಿಕ್ಷಕರ ಸಂಘ ಜಿಲ್ಲಾ ಘಟಕ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತನಾರತಿ ಸಾಂಸ್ಕೃತಿಕ ಪ್ರತಿಷ್ಠಾನ, ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಜಿಲ್ಲಾ ಘಟಕ ಇವರ ಸಹಕಾರದಲ್ಲಿ ಕಾರ್ಯಕ್ರಮವು ಅದ್ಭುತವಾಗಿ ಮೂಡಿಬಂತು.

ಕಾರ್ಯಕ್ರಮದಲ್ಲಿ ವಿಸ್ತಾರ ನ್ಯೂಸ್‌ನ ಬಳ್ಳಾರಿ ಬ್ಯೂರೋ ಮುಖ್ಯಸ್ಥ ಶಶಿಧರ ಮೇಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಯಡಿಯೂರ ಶ್ರೀ ಸಂಗೀತ ಪಾಠ ಶಾಲೆಯ ಸಂಗೀತ ಕಲಾವಿದರಾದ ಶರಣಕುಮಾರ ವಠಾರ, ನಾಗರಾಜ್ ಶಹಾಪುರ, ಮಹೇಶ್ ಶಿರವಾಳ, ಶರಣು ಕೊಲಕುಂದಾ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು . ಸುರಪುರದ ಶ್ರೀ ಖಾಸ್ಗತೇಶ್ವರ ನೃತ್ಯ ಕಲಾ ಸಂಸ್ಥೆಯ ತರಬೇತಿದಾರ ಅನೀಲ್‌ ಕುಮಾರ್ ಕಟ್ಟಿಮನಿ ಅವರ ಕಲಾ ತಂಡದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

ಇದನ್ನೂ ಓದಿ: Money Guide: ಆನ್‌ಲೈನ್‌ ಸಾಲದ ವಂಚನೆಯ ಕೂಪಕ್ಕೆ ಬೀಳದಿರಲು ಏನು ಮಾಡಬೇಕು?

ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಗುರುನಾಥ, ರಾಜನಕೊಳ್ಳೂರು ಪ್ರಥಮ ದರ್ಜೆ ಗುತ್ತಿಗೆದಾರ ಬಿ‌.ಎಂ.ಅಳ್ಳಿಕೋಟೆ, ಶಶಿ ಸೂಪರ್‌ ಬಜಾರ್‌ನ ಮಾಲೀಕ ಮಲ್ಲಿಕಾರ್ಜುನ ಶಿರಗೋಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸುಲೈಮಾನ್ ನದಾಫ್, ವಿಸ್ತಾರ ನ್ಯೂಸ್ ಜಿಲ್ಲಾ ವರದಿಗಾರ ನಾಗಪ್ಪ ಮಾಲಿಪಾಟೀಲ, ರಾಜುಕುಂಬಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಅಮರಯ್ಯ ಜಾಲಿಬೆಂಚಿ ನಿರೂಪಿಸಿ, ವಂದಿಸಿದರು.

Continue Reading

ಕರ್ನಾಟಕ

HD Kumaraswamy: ವೈಯಕ್ತಿಕವಾಗಿ ಕೆಣಕಿದರೆ ನಾನು ಸುಮ್ಮನಿರಲ್ಲ ಎಂದ ಎಚ್‌ಡಿಕೆ

HD Kumaraswamy:

VISTARANEWS.COM


on

HD Kumaraswamy
Koo

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆಗಳು ಸೇರಿ ರಾಜ್ಯ ಎದುರಿಸುತ್ತಿರುವ ತೀವ್ರ ಬರದ ಬಗ್ಗೆ ಕಲಾಪದಲ್ಲಿ ಚರ್ಚೆ ಮಾಡುವುದು ನನ್ನ ಉದ್ದೇಶ. ಆದರೆ, ನನ್ನನ್ನು ವೈಯಕ್ತಿಕವಾಗಿ ಕೆಣಕಿದರೆ ನಾನು ಸುಮ್ಮನಿರುವ ಪ್ರಶ್ನೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಸುವರ್ಣಸೌಧದಲ್ಲಿ ಕಲಾಪದಲ್ಲಿ ಭಾಗಿಯಾಗುವ ಮುನ್ನ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ನನ್ನ ಆದ್ಯತೆ. ಬರ, ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ನನ್ನ ಮಹತ್ವ ಇರುತ್ತದೆ. ಈ ಚಳಿಗಾಲ ಅಧಿವೇಶನದಲ್ಲಿ ಆ ಬಗ್ಗೆ ಚರ್ಚೆ ಮಾಡುತ್ತೇ‌ನೆ. ಈ ಭಾಗದ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದರು.

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ನಾವು ಮತ್ತು ಬಿಜೆಪಿ ಜಂಟಿಯಾಗಿ ಹೋರಾಟ ಮಾಡುತ್ತೇವೆ. ಬಿಜೆಪಿ ಅಧಿಕೃತವಾದ ವಿರೋಧ ಪಕ್ಷ. ಜನವರಿಯಲ್ಲಿ ಜಂಟಿ ಅಧಿವೇಶನ ನಡೆಯಲಿದೆ, ಅಲ್ಲಿ ಬೇರೆ ಬೇರೆ ವಿಚಾರಗಳ‌ ಬಗ್ಗೆ ಮಾತನಾಡುತ್ತೇನೆ. ವರ್ಗಾವಣೆ ದಂಧೆ ಸೇರಿದಂತೆ ಬೇರೆ ಬೇರೆ ವಿಚಾರಗಳ ಬಗ್ಗೆ ಅವತ್ತು ಮಾತನಾಡುತ್ತೇನೆ, ಒಂದು ವೇಳೆ ಏನಾದರೂ ವೈಯಕ್ತಿಕವಾಗಿ ಕೆಣಕಿದರೆ ನಾನು ಸುಮ್ಮನೆ ಇರಲ್ಲ ಎಂದು ಅವರು ತಿಳಿಸಿದರು.

ಇದನ್ನೂ ಓದಿ | Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

ಈ ಸರ್ಕಾರ ಬಂದು ಆರು ತಿಂಗಳು ಆಗಿದೆ. ಇನ್ನು ನಾಲ್ಕೂವರೆ ವರ್ಷ ಸರ್ಕಾರ ಇರುತ್ತದೆ. ಹಂತ ಹಂತವಾಗಿ ಎಲ್ಲ ವಿಚಾರದ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು.

ಸಿಎಂ ಓಲೈಕೆ ರಾಜಕಾರಣ ಸರಿ ಅಲ್ಲ

ನಿರ್ದಿಷ್ಟ ಒಂದು ಸಮುದಾಯವನ್ನು ಓಲೈಸುವ ನಿಟ್ಟಿನಲ್ಲಿ ಸಿದ್ದರಾಮಯ್ಯನವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಸಿಎಂ ಹೇಳಿಕೆ ಮುಸ್ಲಿಂ ಓಲೈಕೆ ಅಲ್ಲದೇ ಮತ್ತೇನು? ಒಂದು ಸಮುದಾಯವನ್ನು ಓಲೈಕೆ ಮಾಡಲು ಸರ್ಕಾರ ಇರೋದಲ್ಲ. ಎಲ್ಲರನ್ನೂ ಸಮಾನವಾಗಿ ನೋಡಬೇಕು. ಅಧಿವೇಶನದಲ್ಲಿ ಬಿಜೆಪಿ ಜತೆ ಜಂಟಿಯಾಗಿ ಹೋರಾಟ ಮಾಡುತ್ತೇನೆ, ಜನಪರ ವಿಚಾರಗಳ ಬಗ್ಗೆ ಸದನದಲ್ಲಿ ಚರ್ಚೆ ಮಾಡಲಾಗುವುದು. ರಾಜ್ಯಪಾಲರಿಗೆ ದೂರು ಕೊಟ್ಟ ವಿಚಾರದ ಬಗ್ಗೆ ಮುಂದೆ ಹೇಳುತ್ತೇನೆ. ಮುಂದೆ ಎಲ್ಲವೂ ನಿಮಗೇ ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು.

ಇದನ್ನೂ ಓದಿ | 5 ಕೋಟಿ ವೆಚ್ಚದಲ್ಲಿ‌ ಇಟಗಿ-ಸಾಸಲವಾಡ ಏತ ನೀರಾವರಿ ಯೋಜನೆ ಪೂರ್ಣ: ಸಚಿವ ರಾಮಲಿಂಗಾ ರೆಡ್ಡಿ

ಇದೇ ವೇಳೆ ದೆಹಲಿ ಪ್ರವಾಸ ಮತ್ತು ಪಂಚರಾಜ್ಯ ಚುನಾವಣೆ ಬಗ್ಗೆ ಕುಮಾರಸ್ವಾಮಿ ಮಾತನಾಡಿದ್ದು, ಮೂರು ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳ ಆಯ್ಕೆಯಲ್ಲಿ ವರಿಷ್ಠರು ತೊಡಗಿದ್ದಾರೆ. ಅದಾದ ಬಳಿಕ ದೆಹಲಿಗೆ ತೆರಳುವ ಬಗ್ಗೆ ಯೋಚನೆ ಮಾಡುತ್ತೇನೆ. ಮುಂದಿನ ಲೋಕಸಭಾ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿಯಾಗಿದೆ‌. ಅನೇಕರು ಈ ಬಗ್ಗೆ ಹೇಳಿದ್ದಾರೆ. ಬಲಿಷ್ಠ ನಾಯಕತ್ವ ಬೇಕು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದರು.

Continue Reading
Advertisement
Elephant Arjuna
ಕರ್ನಾಟಕ4 hours ago

Elephant Arjuna: ಮೈಸೂರು, ಹಾಸನದಲ್ಲಿ ಅರ್ಜುನ ಆನೆಯ ಸ್ಮಾರಕ ನಿರ್ಮಾಣ: ಈಶ್ವರ ಖಂಡ್ರೆ

Kabaddi news
ಕ್ರೀಡೆ5 hours ago

Pro Kabaddi : ಮುಂಬಾ ವಿರುದ್ಧ ಜಯಂಟ್ಸ್​​ಗೆ 39-37 ಅಂಕಗಳ ಜಯ

Belagavi Winter Session
ಕರ್ನಾಟಕ5 hours ago

Belagavi Winter Session: ವೇತನ ಆಯೋಗದ ವರದಿ ಬಗ್ಗೆ ಅತೃಪ್ತಿ; ಸಭಾತ್ಯಾಗ ಮಾಡಿದ ಕಮಲ, ದಳ ಸದಸ್ಯರು

our former mlas they did not get even 50 votes in Madhya Pradesh Says Congress
ದೇಶ5 hours ago

ಮಾಜಿ ಎಮ್ಮೆಲ್ಲೆಗಳಿಗೆ ಅವರ ಊರಲ್ಲೇ 50 ವೋಟು ಬಿದ್ದಿಲ್ಲ! ಕಾಂಗ್ರೆಸ್ ನಾಯಕ

Team India1
ಟಾಪ್ 10 ನ್ಯೂಸ್5 hours ago

VISTARA TOP 10 NEWS : ಸಿದ್ದು ಮುಸ್ಲಿಂ ಓಲೈಕೆ ಜಟಾಪಟಿ, ʼಅರ್ಜುನʼನಿಗೆ ಕಂಬನಿಯ ವಿದಾಯ ಇತ್ಯಾದಿ ಪ್ರಮುಖ ಸುದ್ದಿಗಳು

Vistara News Best Teacher Award -2023 programme inauguration by Yadgiri DC Sushila B. at Yadgiri
ಕರ್ನಾಟಕ5 hours ago

ಯಾದಗಿರಿಯಲ್ಲಿ ‘ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್’ ಕಾರ್ಯಕ್ರಮಕ್ಕೆ ಚಾಲನೆ

BJP knew the result two days earlier vote count Says Congress
ದೇಶ6 hours ago

ಬಿಜೆಪಿಗೆ ರಿಸಲ್ಟ್ ಎರಡು ದಿನ ಮೊದ್ಲೇ ಗೊತ್ತಿತ್ತು! ಕಾಂಗ್ರೆಸ್ ಹೊಸ ವರಾತ್

HD Kumaraswamy
ಕರ್ನಾಟಕ6 hours ago

HD Kumaraswamy: ವೈಯಕ್ತಿಕವಾಗಿ ಕೆಣಕಿದರೆ ನಾನು ಸುಮ್ಮನಿರಲ್ಲ ಎಂದ ಎಚ್‌ಡಿಕೆ

Rahul Dravid
ಕ್ರಿಕೆಟ್6 hours ago

Rahul Dravid : ರಿಚ್ಮಂಡ್​ ಸರ್ಕಲ್ ಫ್ಲೈಓವರ್​ ಕೆಳಗಡೆ ಕ್ರಿಕೆಟ್​ ಅಡಿದ ದ್ರಾವಿಡ್​, ಕುಂಬ್ಳೆ, ಶ್ರೀನಾಥ್​…

Minister Ramalinga Reddy statement
ಕರ್ನಾಟಕ7 hours ago

5 ಕೋಟಿ ವೆಚ್ಚದಲ್ಲಿ‌ ಇಟಗಿ-ಸಾಸಲವಾಡ ಏತ ನೀರಾವರಿ ಯೋಜನೆ ಪೂರ್ಣ: ಸಚಿವ ರಾಮಲಿಂಗಾ ರೆಡ್ಡಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

CM Siddaramaiah and Black magic
ಕರ್ನಾಟಕ7 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ8 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ8 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ23 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ3 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ5 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

ಟ್ರೆಂಡಿಂಗ್‌