Site icon Vistara News

Gold Rate Today: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಯಥಾಸ್ಥಿತಿ; ಗ್ರಾಂ ಚಿನ್ನಕ್ಕೆ ಇಷ್ಟಿದೆ ದರ

Jahnavi Kapoor

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಭಾನುವಾರ (ನವೆಂಬರ್‌ 5) ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ನಗರದಲ್ಲಿ ಇಂದೂ ಕೂಡ ಶನಿವಾರದಂತೆ 22 ಕ್ಯಾರಟ್‌ನ ಒಂದು ಗ್ರಾಂಗೆ 5,650 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಬಂಗಾರಕ್ಕೆ 6,164 ರೂ. ಇದೆ. ಶನಿವಾರ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 10 ರೂ. ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 11 ರೂ. ಕಡಿಮೆಯಾಗಿತ್ತು. ಆದರೆ, ಭಾನುವಾರ ಚಿನ್ನದ ಬೆಲೆ ಯಥಾಸ್ಥಿತಿ ಇದೆ.

ಕಳೆದ 10 ದಿನಗಳಲ್ಲಿ ಚಿನ್ನದ ಬೆಲೆಯು ತೀರಾ ಏರುಪೇರಾಗಿಲ್ಲ. ಎರಡು ದಿನ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ನಾಲ್ಕು ದಿನ ಬೆಲೆ ಏರಿಕೆಯಾದರೆ, ನಾಲ್ಕು ಇಳಿಕೆಯಾಗಿದೆ. ಗ್ರಾಹಕರ ಜೇಬಿಗೆ ಹೊರೆ ಆಗದಷ್ಟು ಬೆಲೆಯೇರಿಕೆ ಏನೂ ಆಗಿಲ್ಲ. ಆದರೆ, ದೀಪಾವಳಿ ಸಮೀಪಿಸುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಚಿನ್ನದ ಬೆಲೆಯ ಮೇಲೆ ಪರಿಣಾಮ ಬೀರುವ ಕೆಲವು ಅಂಶಗಳು ಇಲ್ಲಿವೆ

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: Money Guide: ಹಬ್ಬಕ್ಕೆ ಚಿನ್ನ ಖರೀದಿಸುತ್ತಿದ್ದೀರಾ? ಈ ಸಂಗತಿಗಳು ಗೊತ್ತಿರಲಿ

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version