ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳು ಹಾಗೂ ಪೋಷಕರಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದೆ. ಇದೀಗ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕ್ಲಾಸ್ (Spoken English Classes) ಶುರು ಮಾಡಲು ತಯಾರಿ ನಡೆಸಿದೆ.
ಈಗಾಗಲೇ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶುರು ಮಾಡಿರುವುದು ಸಾಕಷ್ಟು ಸದ್ದು ಮಾಡಿತ್ತು. ಇದೀಗ ರಾಜ್ಯದಲ್ಲೂ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳ ಮಕ್ಕಳಿಗೆ ಇಂಗ್ಲಿಷ್ ಕಲಿಯುವ ಅವಕಾಶ ಕಲ್ಪಿಸಲು ಮುಂದಾಗಿದೆ.
ಇದನ್ನೂ ಓದಿ | 60 ವಿದ್ಯಾರ್ಥಿಗಳಿದ್ದ ಸರ್ಕಾರಿ ಶಾಲೆಯಲ್ಲೀಗ 430 ಮಕ್ಕಳು, ಗುಣಮಟ್ಟಕ್ಕೆ ಒತ್ತು; ಸಚಿವ ಅಶ್ವತ್ಥನಾರಾಯಣ
ಪ್ರಸಕ್ತ ವರ್ಷದಿಂದಲೇ ಸ್ಪೋಕನ್ ಕ್ಲಾಸ್ ಶುರುವಾಗಲಿದೆ. ಸರ್ಕಾರಿ ಶಾಲೆಗಳಲ್ಲಿರುವ ಇಂಗ್ಲಿಷ್ ಶಿಕ್ಷಕರಿಂದ ಸ್ಪೋಕನ್ ಇಂಗ್ಲಿಷ್ ಪಾಠ ಮಾಡಲಾಗುತ್ತದೆ. ಈ ಬಗ್ಗೆ ವಿಶೇಷ ತರಬೇತಿಯನ್ನು ನೀಡಿ, ಇದೇ ವರ್ಷದಿಂದಲೇ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ತರಗತಿ ಶುರು ಮಾಡಲಾಗುತ್ತಿದೆ.
ಇದನ್ನೂ ಓದಿ | ಸರ್ಕಾರಿ ಶಾಲಾ ಮಕ್ಕಳ ಕರೆತರಲು ಬರಲಿವೆ ಸ್ಕೂಲ್ ಬಸ್!