Site icon Vistara News

Suicide case: ಅನಾರೋಗ್ಯದಿಂದ ನೊಂದ ಸರ್ಕಾರಿ ಡಾಕ್ಟರ್‌ ಬಾವಿಗೆ ಹಾರಿ ಆತ್ಮಹತ್ಯೆ

suicide case

ಗದಗ: ಸರ್ಕಾರಿ ವೈದ್ಯರೊಬ್ಬರು (Government doctor) ಬಾವಿಗೆ ಹಾರಿ ಆತ್ಮಹತ್ಯೆ (Suicide case) ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ. ಕುಮಾರ್ ಸ್ವಾಮಿ ಚಿದಾನಂದಯ್ಯ ಬರದೂರಮಠ (45) ಮೃತ ವೈದ್ಯ.ರು.

ಹಿರಿಯ ಆರೋಗ್ಯ ನಿರೀಕ್ಷಣಾ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದರು. ಮೀಟಿಂಗ್‌ ಇದೆ ಎಂದು ಹೇಳಿ ಹೋಗಿದ್ದ ಅವರು ಮರಳಿ ಬರಲೇ ಇಲ್ಲ. ಇದೀಗ ಅವರ ಶವ ಬಾವಿಯಲ್ಲಿ ಪತ್ತೆಯಾಗಿದೆ.

ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಅವರಿಗಾಗಿ ಎಲ್ಲ ಕಡೆ ಹುಡುಕಾಟ ನಡೆಯುತ್ತಿತ್ತು. ಪತ್ನಿ ನಾಪತ್ತೆ ಪ್ರಕರಣವನ್ನೂ ದಾಖಲಿಸಿದ್ದರು. ಭಾನುವಾರ ತಡರಾತ್ರಿ ತಮ್ಮ ಸ್ವಂತ ಜಮೀನಿನ ಬಾವಿಯಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ.

ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ.ರಾಗಿದ್ದ ಇವರು ಜನಾನುರಾಗಿದ್ದರು. ಆದರೆ, ಅವರು ಪಾರ್ಸಿ ರೋಗದಿಂದ ಬಳಲುತ್ತಿದ್ದರೆಂಬ ಮಾಹಿತಿ ಇದೆ. ಹೀಗಾಗಿ ಮಾನಸಿಕವಾಗಿ ನೊಂದು ಆತ್ಮ ಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ಇದೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ಹಳೆ ವೈಷಮ್ಯ ಹಿನ್ನೆಲೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು ಜಿಲ್ಲೆ ತಿ.ನರಸೀಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ತಾಲೂಕಿನ ಬನ್ನಳ್ಳಿಹುಂಡಿ ಗ್ರಾಮದ ನಿವಾಸಿಯಾಗಿರುವ ಚೇತನ್ (28) ಹಲ್ಲೆಗೊಳಗಾದ ಯುವಕ. ಪ್ರಭು, ಅರುಣ್, ಮನು, ಮಧು, ಬಾಲು ಎಂಬವರಿಂದ ಹಲ್ಲೆ ನಡೆದಿದೆ ಎಂದು ದೂರಲಾಗಿದೆ.

ಗಾಯಾಳು ಚೇತನ್

ಈ ಹಿಂದೆ ಪ್ರಭು ಹಾಗೂ ಚೇತನ್ ನಡುವೆ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ನಡೆದಿತ್ತು. ಇದೇ ವಿಚಾರಕ್ಕೆ ಮನಸ್ಸಿನಲ್ಲಿಟ್ಟುಕೊಂಡಿದ್ದ ಪ್ರಭು ತನ್ನ ಸ್ನೇಹಿತರ ಜತೆ ಸೇರಿ ಚೇತನ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಗೊಳಗಾದ ಯುವಕ ಚೇತನ್‌ ಅವರನ್ನು ತಿ. ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಹಲ್ಲೆಗೊಳಗಾದ ಯುವಕ ಚೇತನ್ ನೀಡಿರುವ ಹೇಳಿಕೆಯ ಮೇಲೆ ನರಸೀಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಇದನ್ನೂ ಓದಿ: Hit And Run: ಕುಡಿದ ಮತ್ತಲ್ಲಿ ಹಿಟ್‌ ಆ್ಯಂಡ್‌ ರನ್‌;‌ ಬೈಕ್‌ ಸವಾರ ಬಿದ್ದು ಸತ್ತರೂ ನೋಡದೆ ಹೋದ ಕಾರು ಚಾಲಕ

Exit mobile version