Old Pension Scheme: ರಾಜ್ಯ ಸರ್ಕಾರಿ ನೌಕರರಿಗೆ ಎನ್‌ಪಿಎಸ್‌ನಿಂದ ಒಪಿಎಸ್‌ಗೆ ಶಿಫ್ಟ್ ಆಗಲು ಅವಕಾಶ - Vistara News

ಕರ್ನಾಟಕ

Old Pension Scheme: ರಾಜ್ಯ ಸರ್ಕಾರಿ ನೌಕರರಿಗೆ ಎನ್‌ಪಿಎಸ್‌ನಿಂದ ಒಪಿಎಸ್‌ಗೆ ಶಿಫ್ಟ್ ಆಗಲು ಅವಕಾಶ

Old Pension Scheme: 2006ರ ಏಪ್ರಿಲ್ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆಯಾದ ನೌಕರರು, NPS ವ್ಯಾಪ್ತಿಯಿಂದ OPSಗೆ ಬದಲಾಗಲು ಅವಕಾಶ ನೀಡಲಾಗಿದೆ.

VISTARANEWS.COM


on

Two days special casual leave for state government employees
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. 2006ರ ಏಪ್ರಿಲ್ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆಯಾದ ನೌಕರರು, ರಾಷ್ಟ್ರೀಯ ಪಿಂಚಣಿ ಯೋಜನೆ (National pension scheme-NPS) ವ್ಯಾಪ್ತಿಯಿಂದ ಹಳೆಯ ಪಿಂಚಣಿ ಯೋಜನೆಗೆ (Old Pension Scheme-OPS) ಬದಲಾಗಲು ಅವಕಾಶ ಮಾಡಿಕೊಟ್ಟಿದೆ.

ಈ ಬಗ್ಗೆ ಆಡಳಿತ ಮತ್ತು ಸಮನ್ವಯ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಗೆ ಒಳಪಡಲು 6 ಷರತ್ತುಗಳನ್ನು ರಾಜ್ಯ ಸರ್ಕಾರ ವಿಧಿಸಿದೆ.

ಹಳೆಯ ಪಿಂಚಣಿ ಸೇವೆಗೆ ಒಳಪಡಲು ಸರ್ಕಾರಿ ನೌಕರರು ತಾವೇ ಒಪ್ಪಿಗೆ ಸೂಚಿಸಬೇಕು. 2006ರ ಏಪ್ರಿಲ್‌ಗಿಂತ ಮೊದಲು ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆ ಹೊಂದಿದವರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಹಳೆಯ ಪಿಂಚಣಿ ಸೇವೆಗೆ ಒಳಪಟ್ಟರೆ, ಬದಲಾವಣೆಗೆ ಮತ್ತೆ ಅವಕಾಶವಿರುವುದಿಲ್ಲ. ಇನ್ನು ಒಪಿಎಸ್‌ಗೆ ಒಳಪಡದೆ ಹೋದರೆ ಅಂತಹ ನೌಕರರು ಎನ್‌ಪಿಎಸ್‌ನಲ್ಲೇ ಮುಂದುವರಿಯುತ್ತಾರೆ.

ಇದನ್ನೂ ಓದಿ | PSI Recruitment: ಶೀಘ್ರದಲ್ಲೇ 660 ಪಿಎಸ್‌ಐ ಹುದ್ದೆ ನೇಮಕಾತಿಗೆ ಅಧಿಸೂಚನೆ: ಡಾ.ಜಿ. ಪರಮೇಶ್ವರ್

ಒಪಿಎಸ್‌ಗೆ ಅರ್ಜಿ ಸಲ್ಲಿಸಲು 2024ರ ಜೂನ್ 30ವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಅವಕಾಶ ಎಲ್ಲಾ ಸರ್ಕಾರಿ ನೌಕರರಿಗೂ ಸಂಬಂಧಪಟ್ಟಿರುವುದಿಲ್ಲ. ಕೇವಲ ಏಪ್ರಿಲ್ 2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆ ಹೊಂದಿದವರಿಗೆ ಮಾತ್ರ ಅನ್ವಯವಾಗಲಿದ್ದು, ಹಳೆಯ ಪಿಂಚಣಿ ಸೇವೆಗೆ ಒಳಪಟ್ಟರೆ, ಬದಲಾವಣೆಗೆ ಮತ್ತೆ ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೇಂದ್ರ ಸರ್ಕಾರವು ತನ್ನ ನೌಕರರಿಗೆ 22-12-2003ರ ಮೊದಲು ನೇಮಕಾತಿ ಅಧಿಸೂಚನೆಯಲ್ಲಿ ನೇಮಕವಾಗಿ 01-01-2004ರಂದು ಅಥವಾ ತದನಂತರ ಸೇವೆಗೆ ಸೇರಿದ ನೌಕರರಿಗೆ ಹಳೆಯ ಪಿಂಚಣಿ ಯೋಜನೆಗೆ ಒಳಪಡಿಸಲು ಒಂದು ಬಾರಿಯ ಆಯ್ಕೆಯ ಅವಕಾಶವನ್ನು ಕಲ್ಪಿಸಿ 31-08-2023 ರೊಳಗೆ ಆಯ್ಕೆ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿತ್ತು. ಅದೇ ರೀತಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಅನ್ವಯಿಸಲು ತೀರ್ಮಾನಿಸಿದ ರಾಜ್ಯ ಸರ್ಕಾರವು, 2006ರ ಏ.1 ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ, ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಒಪಿಎಸ್‌ ವ್ಯಾಪ್ತಿಗೆ ಒಳಪಡಿಸಲು ತೀರ್ಮಾನಿಸಿದೆ.

ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಳೆಯ ಪಿಂಚಣಿ ಯೋಜನೆ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಲಾಗಿದೆ.

ಇದನ್ನೂ ಓದಿ | Job Alert: ಸಿಆರ್‌ಪಿಎಫ್‌ ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಆಹ್ವಾನ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

ಒಪಿಎಸ್‌ಗೆ ಒಳಪಡಲು ವಿಧಿಸಿರುವ 6 ಷರತ್ತುಗಳು

1. ದಿನಾಂಕ: 01-04-2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಒಪಿಎಸ್‌ಗೆ ಒಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ಜೂನ್‌ 30ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.

2.ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.

3.ಮೇಲಿನ 1 ರಂತೆ ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗದಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರಿಯುತ್ತಾರೆ.

4.ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ (ಒಪಿಎಸ್‌) ಒಳಪಡಲು ನಿಗದಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ಜುಲೈ 31ರೊಳಗಾಗಿ ಅಂತಹ ನೌಕರರನ್ನು ಒಪಿಎಸ್‌ಗೆ ಒಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು.

5.ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ಆಗಸ್ಟ್ 31. ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು.

6. ದಿನಾಂಕ: 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ(ಒಪಿಎಸ್‌) ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ಜೂನ್‌ 30 ರೊಳಗಾಗಿ ಸಲ್ಲಿಸತಕ್ಕದ್ದು. ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಬೇಕು.

ರಾಜ್ಯ ಸರ್ಕಾರಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಧನ್ಯವಾದ

ಸುಮಾರು 13 ಸಾವಿರ ಸರ್ಕಾರಿ ನೌಕರರನ್ನು ಎನ್‌ಪಿಎಸ್‌ನಿಂದ ಒಪಿಎಸ್‌ ವ್ಯಾಪ್ತಿಗೆ ಬದಲಾಗಲು ಅವಕಾಶ ನೀಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ಇಂದು ಅಬ್ಬರಿಸಲಿದೆ ಗುಡುಗು ಸಹಿತ ಭಾರಿ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು , ಐಎಂಡಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆ ಇದೆ (Karnataka Weather Forecast) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗಲಿದೆ. ಉಳಿದೆಡೆ ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಸುತ್ತಮುತ್ತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಕೆಲವೊಮ್ಮೆ ಗುಡುಗು ಸಾಥ್‌ ನೀಡಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಮತ್ತು 22 ಡಿ.ಸೆ ಇರಲಿದೆ.

ಯೆಲ್ಲೋ ಅಲರ್ಟ್‌

ಗುಡುಗು, ಮಿಂಚು, ಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಬೆಳಗಾವಿ, ಧಾರವಾಡ, ಗದಗ,ಕೊಪ್ಪಳ, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ , ದಾವಣಗೆರೆ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ ಬರಲಿದೆ.

VISTARANEWS.COM


on

By

Action Prince Dhruva Sarja much awaited film Martin to hit the screens on October 11
Koo

ಬೆಂಗಳೂರು: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ನಟನೆಯ ಬಹುನಿರೀಕ್ಷಿತ, ಪ್ಯಾನ್‌ ವರ್ಲ್ಡ್‌ ಸಿನಿಮಾ ಮಾರ್ಟಿನ್‌ ರಿಲೀಸ್‌ಗೆ ಕೌಂಟ್‌ ಡೌನ್‌ ಶುರುವಾಗಿದೆ. ಅಕ್ಟೋಬರ್ 11 ರಂದು ಭಾರತದಾದ್ಯಂತ 3 ಸಾವಿರ ಥಿಯೇಟರ್‌ನಲ್ಲಿ ರಿಲೀಸ್ ಆಗುತ್ತಿದೆ. ಈಗಾಗಲೇ ಮಾರ್ಟಿನ್‌ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ.

Action Prince Dhruva Sarjas much-awaited film 'Martin' to hit the screens on October 11
Action Prince Dhruva Sarja much awaited film Martin to hit the screens on October 11

ಭರ್ಜರಿ ಬರ್ತ್‌ ಡೇ ಸೆಲೆಬ್ರೆಷನ್‌ಗೆ ಫ್ಯಾನ್ಸ್‌ ಸಜ್ಜು

ಮಾರ್ಟಿನ್‌ ಸಿನಿಮಾಗೂ ಮೊದಲೇ ಧ್ರುವ ಸರ್ಜಾರ ಬರ್ತ್ ಡೇ ಸೆಲೆಬ್ರೆಷನ್‌‌ಗೆ ಫ್ಯಾನ್ಸ್ ಭರ್ಜರಿಯಾಗಿ ಸಜ್ಜಾಗಿದ್ದಾರೆ. ಸ್ಯಾಂಡಲ್‌ವುಡ್‌ನ ಆಟಂ ಬಾಂಬ್ ಧ್ರುವ ಸರ್ಜಾ ನಟನೆಯಲ್ಲಿ ರಿಲೀಸ್ ಆಗಿರುವುದುದು ನಾಲ್ಕೇ ಸಿನಿಮಾವಾದರೂ, 40 ಸಿನಿಮಾ ಮಾಡಿರುವಷ್ಟು ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಅಭಿಮಾನಿಗಳನ್ನು ವಿಐಪಿ ಅಂತೇಳು ಧ್ರುವ, ಅವರಿಗಾಗಿಯೇ ಒಂದು ದಿನ ಮೀಸಲಿಟ್ಟಿದ್ದಾರೆ. ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿಯಾಗುವ ಬಹದ್ಧೂರ್, ಈ ಬಾರಿ ಹುಟ್ಟುಹಬ್ಬಕ್ಕೆ ಫ್ಯಾನ್ಸ್ ಇರುವ ಜಾಗಕ್ಕೆ ಭೇಟಿ ಕೊಡುತ್ತಿದ್ದಾರೆ. ಕಳೆದ ಭಾನುವಾರ ಬೆಂಗಳೂರಿನ ಕೆ.ಆರ್ ರಸ್ತೆಯಲ್ಲಿರುವ ಧ್ರುವ ಮನೆಯ ರಸ್ತೆಯು, ಅಭಿಮಾನಿಗಳಿಂದ ತುಂಬಿ ಹೋಗಿತ್ತು.

Action Prince Dhruva Sarjas much-awaited film 'Martin' to hit the screens on October 11
Action Prince Dhruva Sarja much awaited film Martin to hit the screens on October 11

ಧ್ರುವ ಹುಟ್ಟುಹಬ್ಬಕ್ಕೂ ಮೊದಲು ಮಾರ್ಟಿನ್ ಚಿತ್ರತಂಡ ಅಕ್ಟೋಬರ್ 4ರಂದು ಹೈದರಾಬಾದ್‌ನಲ್ಲಿ ಧ್ರುವ ಅವರ ಇಂಟ್ರೋಡಕ್ಷನ್ ಸಾಂಗ್ ರಿಲೀಸ್ ಮಾಡುತ್ತಿದೆ. ಅಕ್ಟೋಬರ್ 5ರಂದು ಹುಬ್ಬಳಿಯಲ್ಲಿ ಧ್ರುವ ತಮ್ಮ ಫ್ಯಾನ್ಸ್‌ನ ಮೀಟ್ ಮಾಡಲಿದ್ದಾರೆ. ತಮ್ಮ ಹುಟ್ಟುಹಬ್ಬದಂದು ದಾವಣಗೆರೆಯಲ್ಲಿ ಮಾರ್ಟಿನ್ ಪ್ರೀ ರಿಲೀಸ್ ಇವೆಂಟ್ ಹಮ್ಮಿಕೊಂಡಿದ್ದಾರೆ. ಒಟ್ಟಾರೆ ಉತ್ತರ ಕರ್ನಾಟಕ ಜನರ ಜತೆ ಧ್ರುವ ಈ ಬಾರಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದಾರೆ.

ಮುಂಬೈನಲ್ಲಿ ಸಾಂಗ್‌ ರಿಲೀಸ್‌

ಹುಟ್ಟುಹಬ್ಬದ ನಂತರ ಅಕ್ಟೋಬರ್ 8ರಂದು ಮುಂಬೈನಲ್ಲಿ ಮಾರ್ಟಿನ್ ಚಿತ್ರದ ಮತ್ತೊಂದು ಸಾಂಗ್ ರಿಲೀಸ್ ಆಗುತ್ತಿದೆ. ಅಂದ‌ ಹಾಗೆ ಮಾರ್ಟಿನ್ ಒಂದಲ್ಲ ಒಂದು ಕಾರಣಕ್ಕೆ ಸೆನ್ಸೇಶನ್ ಕ್ರಿಯೇಟ್ ಮಾಡಿದೆ.ಇದೇ ತಿಂಗಳ 11ರಂದು ಮಾರ್ಟಿನ್ ಆಲ್ ಓವರ್ ಇಂಡಿಯಾ 3 ಸಾವಿರ ಥಿಯೇಟರ್‌ನಲ್ಲಿ ರಿಲೀಸ್ ಆಗುತ್ತಿದೆ. ಕನ್ನಡದ ಅತಿ ಹೆಚ್ಚು ಬಜೆಟ್‌ನ ಮಾರ್ಟಿನ್‌, ಶೇಖಡಾ 80ರಷ್ಟು ಚಿತ್ರವನ್ನು ಸೆಟ್‌ನಲ್ಲಿಯೇ ಚಿತ್ರೀಕರಣಗೊಂಡಿದೆ. ಹಾಲಿವುಡ್‌ನ ಫಾಸ್ಟ್ ಆ್ಯಂಡ್ ಪ್ಯೂರಿಯಸ್ ಚಿತ್ರ ನೋಡಿದ ಅನುಭವ ಆಗುತ್ತೆ ಎನ್ನುವ ಮಾತನ್ನು ಸಿನಿಮಾ ತಂಡ ಹೇಳಿಕೊಂಡಿದೆ.

Action Prince Dhruva Sarjas much-awaited film 'Martin' to hit the screens on October 11
Action Prince Dhruva Sarja much awaited film Martin to hit the screens on October 11

ಮಾರ್ಟಿನ್ ತಂಡದಿಂದ ನಿರ್ದೇಶಕರೇ ಔಟ್!

ಮಾರ್ಟಿನ್ ಗೆಲ್ಲುತ್ತೆ ಎಂಬ ಭರವಸೆ ಕೂಡ ಗಾಂಧಿನಗರಕ್ಕಿದೆ. ಆದರೆ ಈ ಸಮಯದಲ್ಲಿ ಜತೆಯಾಗಿರಬೇಕಿದ್ದ ತಂಡದಲ್ಲಿ ಬಿರುಕು ಮೂಡಿದೆ. ಚಿತ್ರದ ಪ್ರಚಾರದಿಂದ ನಿರ್ದೇಶಕ ಎಪಿ ಅರ್ಜುನ್ ಅವರನ್ನು ದೂರ ಇಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಮಾರ್ಟಿನ್‌ಗೆ ದ್ರೋಹದ ವಿಚಾರ ಜಗಜ್ಜಾಹೀರಾಗಿತ್ತು. ಚಿತ್ರದ ಹೆಸರಿನಲ್ಲಿ ನಿರ್ಮಾಪಕ ಉದಯ್ ಮೆಹ್ತಾಗೆ ನಿರ್ದೇಶಕ ಎ.ಪಿ.ಅರ್ಜುನ್ ಅವರಿಂದ ಮೋಸವಾಗಿದೆ. ಕೇವಲ ಸಿಜಿ ಮತ್ತು ವಿಎಫ್‌ಎಕ್ಸ್ ಒಂದರಲ್ಲೇ 73 ಲಕ್ಷ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕೆ ಉದಯ್ ಮೆಹ್ತಾ ಮತ್ತು ಎಪಿ ಅರ್ಜುನ್ ನಡುವೆ ಸಂಬಂಧ ಹಳಸಿದೆ. ತಮ್ಮದೇ ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಎಪಿ ಅರ್ಜುನ್ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಆ ಅರ್ಜಿ ವಜಾ ಆಗಿದೆ ಎಂದು ಹೊಸ ಬಾಂಬ್ ಕೂಡ ಉದಯ್ ಮೆಹ್ತಾ ಸಿಡಿಸಿದ್ದಾರೆ.

Action Prince Dhruva Sarja  much awaited film Martin to hit the screens on October 11
Action Prince Dhruva Sarja much awaited film Martin to hit the screens on October 11

ಮಾರ್ಟಿನ್ ಚಿತ್ರದ ಕಥೆ ಚಿತ್ರಕಥೆಯನ್ನು ಆ್ಯಕ್ಷನ್ ಹೀರೋ ಅರ್ಜುನ್ ಸರ್ಜಾ ಬರೆದಿದ್ದಾರೆ. ಹೀಗಿರುವಾಗ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರಿಸಬೇಕಿದ್ದ ”ಮಾರ್ಟಿನ್‌” ಚಿತ್ರತಂಡದಲ್ಲಿ, ಸಿನಿಮಾ ರಿಲೀಸ್‌ಗೂ ಮೊದಲೇ ಬಿರುಕು ಮೂಡಿದೆ. ಇವೆಲ್ಲದರ ನಡುವೆ ಅಕ್ಟೋಬರ್ 6 ರಂದು ಧ್ರುವ ಸರ್ಜಾ ಬರ್ತ್ ಡೇ ಸೆಲೆಬ್ರೇಶನ್ ಮಾಡಿ ಮತ್ತೊಂದು ಮೆಗಾ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ (Actor Darshan) ರಾಜಾತಿಥ್ಯ ಕೇಸ್ ಸಂಬಂಧ ತನಿಖೆಯು ಕ್ಲೈ ಮ್ಯಾಕ್ಸ್ ಹಂತದಲ್ಲಿದ್ದು, ಇದೀಗ ಜೈಲಿನೊಳಗಿನ ಅಂದರ್ ಕಿ ದರ್ಬಾರ್ ಬೆಳಕಿಗೆ ಬಂದಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ನಟ ದರ್ಶನ್ (Actor Darshan) ಇದ್ದ ವೇಳೆ ಸಿಕ್ಕ ರಾಜಾತಿಥ್ಯದ ತನಿಖೆ ಕೊನೆಗೂ ಮುಕ್ತಾಯದ ಹಂತ ತಲುಪಿದೆ. ವಿಶೇಷ ಸವಲತ್ತುಗಳ ಜಾಡು ಹಿಡಿದ ಖಾಕಿಗೆ ರಾಜಾತಿಥ್ಯದ ಪಿನ್ ಟು ಪಿನ್ ಸಾಕ್ಷಿ ದೊರೆತಿದ್ದು, ಇದರ ಹೊರತಾಗಿ ಜೈಲಿನಲ್ಲಿ ಸಿಗುವ ಮದ್ಯದ ಬಾಟೆಲ್‌ಗಳ ಮತ್ತೊಂದು ಕಹಾನಿ ಬೆಳಕಿಗೆ ಬಂದಿದೆ.

ಜೈಲಿನೊಳಗೆ ದರ್ಶನ್‌ಗೆ ಸಿಕ್ಕ ರಾಜಾತಿಥ್ಯದ ಸಂಬಂಧ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳ ತನಿಖೆ ಬಹುತೇಕ ಪೂರ್ಣಗೊಂಡಿದೆ. ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು ನಡೆಸಿದ ತನಿಖೆ ವೇಳೆ ರಾಜಾತಿಥ್ಯದ ಮಹತ್ವದ ಸಾಕ್ಷಿಗಳು ಲಭ್ಯವಾಗಿವೆ. ಜತೆಗೆ ಇದಕ್ಕೆ ಕಾರಾಗೃಹದ ಸಿಬ್ಬಂದಿ ಸಹಕರಿಸಿರುವ ಸಂಗತಿ ಸಹ ಬಯಲಾಗಿದೆ. ಸದ್ಯ ಈ ಎಲ್ಲಾ ಮಾಹಿತಿಗಳನ್ನು ಆರೋಪ ಪಟ್ಟಿಯಲ್ಲಿ ಸೇರಿಸಿರುವ ಪೊಲೀಸರು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸುವ ತಯಾರಿಯಲ್ಲಿದ್ದಾರೆ.

ಜೈಲಿನ ಒಳಗಡೆ ದರ್ಶನ್ ರೌಂಡ್ ಟೇಬಲ್‌ನಲ್ಲಿ ಟೀ ಪಾರ್ಟಿ ಮಾಡಿದ್ದು, ಜೈಲಿನೊಳಗೆ ಹೊರಗಿನ ವ್ಯಕ್ತಿ ಜತೆ ವಿಡಿಯೊ ಕಾಲ್ ಸಂಭಾಷಣೆ ನಡೆಸಿದ್ದ ಈ ಎರಡು ಪ್ರಕರಣ ಸಂಬಂಧ ತನಿಖೆ ಕೈಗೊಂಡ ಪೊಲೀಸರು ವಿಸ್ತೃತ ಆರೋಪ ಪಟ್ಟಿ ತಯಾರಿಸಿದ್ದಾರೆ. ಸದ್ಯ ಈ ಆರೋಪ ಪಟ್ಟಿ ಅಂತಿಮ ಹಂತದ ತಯಾರಿಯಲ್ಲಿದ್ದು, ಪೊಲೀಸರು ಅಂತಿಮ ಪರಾಮರ್ಶೆಗೆಂದು ಕಾನೂನು ತಜ್ಞರ ಮೊರೆ ಹೋಗಿದ್ದಾರೆ. ಈ ಮೂಲಕ ಕಾನೂನು ತಜ್ಞರ ಅಭಿಪ್ರಾಯ ಪಡೆದು ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.

ಜೈಲಿನಲ್ಲಿರುವ ರೌಡಿಗಳಿಗೆ ಸಪ್ಲೈ ಆಗುತ್ತಿದೆಯಾ ಕಾಸ್ಟ್ಲಿ ಡ್ರಿಂಕ್ಸ್

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಸಿಕ್ಕಿದ್ದ ರಾಜಾತಿಥ್ಯ ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಈಗ ಹೊಸದಂದು ಸಂಗತಿ ಕೇಳಿ ಬಂದಿದೆ. ಜೈಲಿನಲ್ಲಿರುವ ಕೆಲ ರೌಡಿಗಳಿಗೆ ಕಾಸ್ಟ್ಲಿ ಡ್ರಿಂಕ್ಸ್ ಸರಬರಾಜು ಆಗುತ್ತಿದೆ ಎನ್ನಲಾಗಿದೆ. ಅದು ಮೂರು ಹಂತಗಳಲ್ಲಿ ಹೊರಗಿನಿಂದ ಜೈಲಿನೊಳಗೆ ಮದ್ಯ ತಲುಪುತ್ತಿದೆ ಎನ್ನಲಾಗಿದೆ. ಇನ್ನು ಮದ್ಯದ ಬಾಟಲ್‌ನ ಅಸಲಿ ಬೆಲೆ 2 ಸಾವಿರ ಇದ್ದರೆ ಅದನ್ನು ಜೈಲಿನೊಳಗೆ ಕೊಡಲು 25 ಸಾವಿರ ನೀಡಲಾಗುತ್ತಿದೆ ಎನ್ನಲಾಗಿದೆ.

ಬಾಟಲ್‌ನ ಓರ್ವ ಹೊರಗಡೆಯಿಂದ ತಂದರೆ, ಅದನ್ನು ಜೈಲಿನ ಒಳಗೆ ತೆಗೆದುಕೊಂಡು ಹೋಗುವವನು ಮತ್ತೊಬ್ಬನಂತೆ.. ಬಳಿಕ ಅದನ್ನು ರೌಡಿಗೆ ತಲುಪಿಸುವವನು ಮತ್ತೋಬ್ಬ.. ಇನ್ನು ಈ ಸರಬರಾಜು ಪ್ರಕ್ರಿಯೆಯಲ್ಲಿ ಜೈಲಿನ ಕೆಲ ಸಿಬ್ಬಂದಿ ಹಾಗೂ ಕೆಲ ಸಜಾ ಬಂಧಿಗಳು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಹೀಗೆ ಒಳಗೆ ಸಪ್ಲೈ ಮಾಡಿ ಎಣ್ಣೆಗೆ ಹಣ ಹೊರಗಡೆಯೇ ಪಡೆಯಲಾಗುತ್ತಿದೆ. ಯಾರ್ಯಾರು ಎಣ್ಣೆ ತಂದು ಕೊಡುತ್ತಿದ್ದರು ಎಂಬ ಬಗ್ಗೆ ತನಿಖೆ ಆರಂಭಿಸಿರುವ ಆಗ್ನೇಯ ವಿಭಾಗದ ಪೊಲೀಸರು ಕೆಲವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲು ಮುಂದಾಗಿದ್ದಾರೆ.

ಇದೆಲ್ಲದರ ನಡುವೆ ನಗರ ಪೊಲೀಸ್ ಆಯುಕ್ತರು ಜೈಲಿನ ರಾಜಾತಿಥ್ಯದ ಬಗ್ಗೆ ವರದಿ ನೀಡುವಂತೆ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾರಿಮಾಗೆ ಸೂಚಿಸಿದ್ದರು. ಅದರಂತೆ ತನಿಖೆ ವೇಳೆ ಕಂಡು ಬಂದ ಅಂಶಗಳ ಸಹಿತ ರಾಜಾತಿಥ್ಯದ ವರದಿ ನಗರ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದ್ದಾರೆ. ಸದ್ಯ ರಾಜಾತಿಥ್ಯದ ತನಿಖೆ ಕೈಗೊಂಡಿದ್ದ ಪೊಲೀಸರು ಬಹುತೇಕ ತನಿಖೆ ಮುಕ್ತಾಯಗೊಳಿಸಿದ್ದು, ಶೀಘ್ರದಲ್ಲೇ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಆ ಬಳಿಕ ಜೈಲಿನ ಅಕ್ರಮ ಚಟುವಟಿಕೆಗಳ ಮತ್ತಷ್ಟು ಸಂಗತಿ ಬಯಲಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನವಾಗಿದೆ. ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬವನ್ನು ಪೀಣ್ಯ ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

VISTARANEWS.COM


on

By

Bengaluru News
Koo

ಬೆಂಗಳೂರು: ಬೆಂಗಳೂರಿನ ಪೀಣ್ಯದಲ್ಲಿದ್ದ (Bengaluru News) ಒಂದೇ ಕುಟುಂಬದ ಮೂವರು ಪಾಕ್ ಪ್ರಜೆಗಳನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. ತಾರಿಖ್ ಸಯೀದ್(ಪತಿ), ಅನಿಲ ಸಯೀದ್ (ಪತ್ನಿ), ಇಶ್ರತ್ ಸಯೀದ್ (ಮಗಳು) ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಕುಟುಂಬ ಮೆಹದಿ ಫೌಂಡೇಶನ್‌ಗೆ ಸೇರಿದ್ದರು. ಪಾಕಿಸ್ತಾನದಿಂದ ಬಾಂಗ್ಲಾಗೆ ಸುಮಾರು ಹದಿನೈದಕ್ಕೂ ಹೆಚ್ಚು ಮಂದಿ ಬಂದಿದ್ದರು, ಅದರಲ್ಲಿ ಈ ಪಾಕ್ ಕುಟುಂಬವಿತ್ತು. ಅಲ್ಲಿಂದ ದೆಹಲಿಗೆ ಅಕ್ರಮವಾಗಿ ಪ್ರವೇಶಿಸಿ, ಭಾರತ ದೇಶದ ನಕಲಿ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್ ಪೋರ್ಟ್ ಮಾಡಿಕೊಂಡಿದ್ದರು. ಅಲ್ಲಿಂದ ನೇರ ಕೇರಳಕ್ಕೆ ಹೋಗಿದ್ದರು. ಕೇರಳದಿಂದ ದಾವಣಗೆರೆಗೆ ಬಂದಿದ್ದ ಪಾಕ್ ಕುಟುಂಬ, ದಾವಣಗೆರೆಯಲ್ಲಿ ಒಂದು ವರ್ಷಗಳ ಕಾಲ ವಾಸ ಮಾಡುತ್ತಿತ್ತು.

ಇದನ್ನೂ ಓದಿ:Jigani Police: ಉಲ್ಫಾ ಉಗ್ರ ಬಂಧನ ಬೆನ್ನಲ್ಲೆ ನಾಲ್ವರು ವಿದೇಶಿಗರು ಸೇರಿ ‌ಓರ್ವ ಪಾಕಿಸ್ತಾನ ಪ್ರಜೆ ಬಂಧನ

ಕಳೆದ ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನ ಪೀಣ್ಯಗೆ ಆಗಮಿಸಿದ್ದರು. ಪೀಣ್ಯದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಕುಟುಂಬ ಮೆಹದಿ ಫೌಂಡೇಶನ್‌ನ ಧರ್ಮ ಮತ್ತು ಧರ್ಮ ಗುರುಗಳ ಪ್ರಚಾರಕರಾಗಿ ಕೆಲಸ ಮಾಡುತ್ತಿದ್ದರು. ಜಿಗಣಿಯಲ್ಲಿ ಪಾಕ್ ಪ್ರಜೆ ರಷೀದ್ ಫ್ಯಾಮಿಲಿ ಬಂಧನವಾಗಿದ್ದರು. ರಷೀದ್ ತನಿಖೆಯ ವೇಳೆ ಪೀಣ್ಯದಲ್ಲಿ ಮತ್ತೊಂದು ಪಾಕ್ ಫ್ಯಾಮಿಲಿ ಇರುವುದಾಗಿ ಬಾಯಿಬಿಟ್ಟಿದ್ದರು. ಹೀಗಾಗಿ ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ರಾತ್ರಿ ಪೀಣ್ಯದಿಂದ ಬಂಧನ ಮಾಡಿ ಕರೆತಂದಿದ್ದ ಪೊಲೀಸರು ಮೂವರಿಗೂ ಮೆಡಿಕಲ್ ಚೆಕಪ್ ಮಾಡಿಸಿದ್ದಾರೆ. ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ ಮೆಡಿಕಲ್ ಚೆಕಪ್ ಮುಗಿಸಿ ಮತ್ತೆ ಪೊಲೀಸ್ ಠಾಣೆಗೆ ಕರೆದೊಯ್ದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Continue Reading
Advertisement
karnataka Weather Forecast
ಮಳೆ2 ಗಂಟೆಗಳು ago

Karnataka Weather : ಇಂದು ಅಬ್ಬರಿಸಲಿದೆ ಗುಡುಗು ಸಹಿತ ಭಾರಿ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ2 ಗಂಟೆಗಳು ago

Dina Bhavishya : ಈ ರಾಶಿಯವರಿಗೆ ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ

Action Prince Dhruva Sarja much awaited film Martin to hit the screens on October 11
ಸಿನಿಮಾ11 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Actor Darshan
ಬೆಂಗಳೂರು12 ಗಂಟೆಗಳು ago

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Bengaluru News
ಬೆಂಗಳೂರು15 ಗಂಟೆಗಳು ago

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

HD kumaraswamy And Vijayetata
ಬೆಂಗಳೂರು15 ಗಂಟೆಗಳು ago

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Karnataka weather Forecast
ಪ್ರಮುಖ ಸುದ್ದಿ16 ಗಂಟೆಗಳು ago

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಹೈರಾಣಾದ ವಾಹನ ಸವಾರರು

MLA Muniratna
ಬೆಂಗಳೂರು16 ಗಂಟೆಗಳು ago

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

Power cut off due to a technical problem in the transformer Bengaluru faces water crisis today
ಬೆಂಗಳೂರು18 ಗಂಟೆಗಳು ago

Water supply: ಟ್ರಾನ್ಸಫಾರ್ಮರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಿದ್ಯುತ್‌ ಸಂಪರ್ಕ ಕಡಿತ; ಬೆಂಗಳೂರಿಗೆ ಇಂದು ನೀರಿನ ಸಮಸ್ಯೆ

Gandhi Jayanti 2024
ಬೆಂಗಳೂರು19 ಗಂಟೆಗಳು ago

Gandhi Jayanti 2024: ಗಾಂಧಿ ಜಯಂತಿ ಹಿನ್ನೆಲೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸಿದ ಎನ್‌ಸಿಸಿ ಕೆಡೆಟ್‌ಗಳು

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ11 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌