Site icon Vistara News

Govt Employees Conference: ಬೆಂಗಳೂರಿನಲ್ಲಿ ಇಂದು ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ

Employees Conference

Government Employees Conference In Bengaluru Today

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ವತಿಯಿಂದ ಇಂದು (ಫೆಬ್ರವರಿ 27) ಬೆಳಗ್ಗೆ 10.30ಕ್ಕೆ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾಸ್ನೇಹಿ ಕಾರ್ಯಾಗಾರವನ್ನು (Govt Employees Conference) ನಗರದ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ (ಗೇಟ್‌ ನಂ.1) ಆಯೋಜಿಸಲಾಗಿದೆ. ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಆಶಯ ನುಡಿಗಳನ್ನಾಡಲಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಚಿವರಾದ ಡಾ. ಜಿ. ಪರಮೇಶ್ವರ, ಎಂ.ಬಿ. ಪಾಟೀಲ, ಎಚ್.ಕೆ. ಪಾಟೀಲ, ದಿನೇಶ್ ಗುಂಡೂರಾವ್, ಸತೀಶ್‌ ಜಾರಕಿಹೊಳಿ, ಡಾ. ಎಚ್.ಸಿ. ಮಹದೇವಪ್ಪ, ಕೃಷ್ಣ ಬೈರೇಗೌಡ, ಕೆ.ಎನ್. ರಾಜಣ್ಣ, ಪ್ರಿಯಾಂಕ್ ಖರ್ಗೆ, ಕೆ.ಎಚ್. ಮುನಿಯಪ್ಪ, ಎಸ್. ಮಧುಬಂಗಾರಪ್ಪ, ಬೈರತಿ ಸುರೇಶ್‌, ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್‌, ಈಶ್ವರ್‌ ಖಂಡ್ರೆ, ಶಿವಾನಂದ ಎಸ್. ಪಾಟೀಲ, ಬಿ. ನಾಗೇಂದ್ರ, ಡಾ. ಎಂ.ಸಿ. ಸುಧಾಕರ್, ಶರಣಬಸಪ್ಪ ದರ್ಶನಾಪುರ, ಎನ್. ಚಲುವರಾಯಸ್ವಾಮಿ, ಶಿವರಾಜ ಎಸ್. ತಂಗಡಗಿ, ಲಕ್ಷ್ಮೀ ಆರ್. ಹೆಬ್ಬಾಳಕರ್, ರಹೀಂ ಖಾನ್, ಡಾ. ಶರಣಪ್ರಕಾಶ ಆ‌ರ್. ಪಾಟೀಲ, ಆರ್.ಬಿ. ತಿಮ್ಮಾಪೂರ, ಎನ್.ಎಸ್. ಭೋಸರಾಜು, ಎಸ್.ಎಸ್. ಮಲ್ಲಿಕಾರ್ಜುನ್, ಕೆ. ವೆಂಕಟೇಶ್, ಡಿ. ಸುಧಾಕರ್, ಸಂತೋಷ್ ಎಸ್. ಲಾಡ್, ಬಿ.ಝಡ್. ಜಮೀರ್ ಅಹ್ಮದ್ ಖಾನ್, ಮಂಕಾಳ ಎಸ್. ವೈದ್ಯ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಭಾಗವಹಿಸಲಿದ್ದಾರೆ.

Govt Employees

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಸೇರಿ ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

ಪ್ರಮುಖ ಬೇಡಿಕೆಗಳು

ಹಳೇ ಪಿಂಚಣಿ ಯೋಜನೆ (ಒಪಿಎಸ್‌) ಮರು ಜಾರಿ, 7ನೇ ವೇತನ ಆಯೋಗದ ವರದಿಯ ಅನುಷ್ಠಾನ ಹಾಗೂ ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆ ಮಾಡುವುದು ರಾಜ್ಯ ಸರ್ಕಾರಿ ನೌಕರರ ಸಂಘದ ಬೇಡಿಕೆಗಳಾಗಿವೆ.

ಪ್ರಜಾಸ್ನೇಹಿ ಕಾರ್ಯಾಗಾರ

ಸಮ್ಮೇಳನದ ಭಾಗವಾಗಿ ಬೆಳಗ್ಗೆ 10.30ಕ್ಕೆ ʼಪ್ರಜಾಸ್ನೇಹಿ ಕಾರ್ಯಾಗಾರʼ ಹಮ್ಮಿಕೊಳ್ಳಲಾಗಿದೆ. ಹೈಕೋರ್ಟ್‌ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ಕಾರ್ಯಾಗಾರಕ್ಕೆ ಚಾಲನೆ ನೀಡಿ, ʼನೌಕರರ ಸೇವೆ ಹಾಗೂ ಕಾರ್ಯದಕ್ಷತೆʼ ವಿಷಯದ ಕುರಿತು ಮಾತನಾಡಲಿದ್ದಾರೆ. ಖ್ಯಾತ ಹೃದ್ರೋಗ ತಜ್ಞ ಡಾ. ಸಿ.ಎನ್. ಮಂಜುನಾಥ್ ಅವರು ನೌಕರರ ಆರೋಗ್ಯ ಮತ್ತು ಒತ್ತಡ ನಿರ್ವಹಣೆ ಬಗ್ಗೆ ಮಾತನಾಡಲಿದ್ದಾರೆ. ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ | Old Pension Scheme: ಹಳೇ ಪಿಂಚಣಿಗೆ ಅರ್ಜಿ ಸಲ್ಲಿಸಿಲ್ಲವೇ? ಹಾಗಿದ್ದರೆ ಹೀಗೆ ಮಾಡಿ

ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ತಿಮ್ಮೇಗೌಡ, ರಾಜ್ಯ ಖಜಾಂಜಿ ಡಾ. ಎಸ್. ಸಿದ್ದರಾಮಣ್ಣ, ಕಾರ್ಯಾಧ್ಯಕ್ಷ ಬಿ. ಮಲ್ಲಿಕಾರ್ಜುನ ಬಿ., ಗೌರವಾಧ್ಯಕ್ಷ ಬಿ.ಎಚ್.ವೆಂಕಟೇಶಯ್ಯ ಹಿರಿಯ ಉಪಾಧ್ಯಕ್ಷ ಎಂ.ವಿ. ರುದ್ರಪ್ಪ, ಹಿರಿಯ ಉಪಾಧ್ಯಕ್ಷ ಎಸ್. ಬಸವರಾಜು, ರಾಜ್ಯ ಕಾರ್ಯದರ್ಶಿ ನೆಲ್ಕುದ್ರಿ ಸದಾನಂದಪ್ಪ ಸೇರಿ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಘಟಕಗಳ ಪದಾಧಿಕಾರಿಗಳು ಹಾಗೂ ಬೆಂಗಳೂರು ನಗರದ ರಾಜ್ಯ ಪರಿಷತ್ ಸದಸ್ಯರು, ರಾಜ್ಯದ ಎಲ್ಲಾ ಇಲಾಖೆಯ ವೃಂದ ಸಂಘಗಳ ಅಧ್ಯಕ್ಷರು – ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version