Site icon Vistara News

Government Employees Sports: ಆ.17ರಿಂದ 19ರವರೆಗೆ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

Government Employees Sports

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆ. 17ರಿಂದ 19ರವರೆಗೆ ಬೆಂಗಳೂರಿನಲ್ಲಿ 2023-24ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ (Government Employees Sports) ಆಯೋಜಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ಕ್ರೀಡಾಕೂಟ ಆಯೋಜನೆಗೆ ಸಿದ್ಧತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೂಚನೆ ನೀಡಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಜೂನ್ 3ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಶಿವಮೊಗ್ಗದಲ್ಲಿ ಕ್ರೀಡಾಕೂಟವನ್ನು ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಇದೀಗ ಕ್ರೀಡಾಕೂಟವನ್ನು ಬೆಂಗಳೂರು ನಗರದಲ್ಲಿ ಆ.17ರಿಂದ 19ರವರೆಗೆ (ಮೂರು ದಿನ) ನಡೆಸಲು ಸಂಘವು ತೀರ್ಮಾನಿಸಿದೆ. ಅದರಂತೆ ಕ್ರೀಡಾಕೂಟವನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ಆಯೋಜಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ.

ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಯಮಾವಳಿ

  1. ಕ್ರೀಡಾಕೂಟದಲ್ಲಿ ರಾಜ್ಯ ಸರ್ಕಾರದ ಎಲ್ಲಾ ಕಾಯಂ ನೌಕರರು ಭಾಗವಹಿಸಲು ಅರ್ಹರಾಗಿರುತ್ತಾರೆ.
  2. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿನ ತರಬೇತುದಾರರು. ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕರು, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕ್ರೀಡಾಕೋಟಾದಡಿ ನೇಮಕಗೊಂಡ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.
  3. ಎಲ್ಲಾ ಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ರೀಡೆಯಲ್ಲಿ ಭಾಗವಹಿಸಲು ನೀಡಿರುವ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
  4. ಸಂಗೀತ, ನೃತ್ಯ ಮತ್ತು ಕಲಾ ಶಿಕ್ಷಕರು, ಸಂಗೀತ, ನೃತ್ಯ ಮತ್ತು ಕರಕುಶಲ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ.
  5. ದಿನಗೂಲಿ ನೌಕರರು, ಅರೆಕಾಲಿಕ ನೌಕರರು, ಕ್ಷೇಮಾಭಿವೃದ್ಧಿ ನೌಕರರು, ಗುತ್ತಿಗೆ ನೌಕರರು, ನಿಗಮ/ಮಂಡಳಿ ನೌಕಕರು ಮತ್ತು ಇತರೇ ಕಾಯಂ ಅಲ್ಲದ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.
  6. ಪೊಲೀಸ್ ಇಲಾಖೆ, ಅರಣ್ಯ ಇಲಾಖೆಗಳಲ್ಲಿ ಸಮವಸ್ತ್ರ ವೃಂದಕ್ಕೆ ಪ್ರತ್ಯೇಕ ಕ್ರೀಡಾಕೂಟಗಳಿರುವುದರಿಂದ ಈ ಎರಡೂ ಇಲಾಖೆಗಳ ಕಛೇರಿ ಹಾಗೂ ಲಿಪಿಕ ನೌಕರರು/ಕಚೇರಿ ಸಿಬ್ಬಂದಿ ಮಾತ್ರ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿದೆ.
  7. ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಅಬಕಾರಿ, ಅರಣ್ಯ, ಅಗ್ನಿಶಾಮಕ ಇಲಾಖೆಗಳ ಕ್ರೀಡಾ ಕೋಟಾದಡಿ ನೇಮಕವಾದ ನೌಕರರು ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
  8. 1 ಟ್ರಾಕ್ ಮತ್ತು 2 ಫೀಲ್ಡ್ ಅಥವಾ 2 ಟ್ರ್ಯಾಕ್ ಮತ್ತು 1 ಫೀಲ್ಡ್ ಸೇರಿ ಒಟ್ಟು ಮೂರು ಆಟಗಳಲ್ಲಿ ಮಾತ್ರ ಭಾಗವಹಿಸತಕ್ಕದ್ದು
  9. 45 ವರ್ಷ ಮೇಲ್ಪಟ್ಟ ಸ್ಪರ್ಧಿಗಳು 45 ವರ್ಷಕ್ಕೊಳಪಟ್ಟವರಿಗೆ ಇರುವ ಸ್ಪರ್ಧೆಗಳಲ್ಲಿ, ಸ್ವಂತ ಜವಾಬ್ದಾರಿ ಮೇಲೆ ಭಾಗವಹಿಸಬಹುದು. 45 ವರ್ಷಕ್ಕೊಳಪಟ್ಟವರು 45 ವರ್ಷ ಮೇಲ್ಪಟ್ಟವರ ಜೊತೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
  10. ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ, ತಕರಾರಿಗೆ ಅವಕಾಶವಿರುವುದಿಲ್ಲ.
  11. ಏಕಕಾಲದಲ್ಲಿ ಸ್ಪರ್ಧೆಗಳನ್ನು ನಡೆಸಲಿದ್ದು, ಯಾವುದೇ ಕಾರಣಕ್ಕೂ ಸ್ಪರ್ಧಿಗಳನ್ನು ಕಾಯುವುದಿಲ್ಲ.
  12. ಕರಕುಶಲ ವಸ್ತು ಪ್ರದರ್ಶನದಲ್ಲಿ ಸಿದ್ಧವಿರುವ ವಸ್ತುಗಳ ಪ್ರದರ್ಶನಕ್ಕೆ ಅವಕಾಶವಿರುವುದಿಲ್ಲ. ಸ್ಥಳದಲ್ಲಿ ತಯಾರಾಗಿ (ಮೊದಲನೇ ದಿನ) ಇಡಬೇಕು. 2ನೇ ದಿನ ತೀರ್ಪುಗಾರರಿಂದ ಪರಿಶೀಲಿಸಲಾಗುವುದು.
  13. ಸ್ಪರ್ಧೆ ನಡೆಯದ ಕ್ರೀಡೆಗಳಲ್ಲಿ ಆಯ್ಕೆಯಾದ ಕ್ರೀಡಾಪಟುಗಳಿಗೆ ಕ್ರೀಡಾ ಪ್ರಶಸ್ತಿ ಪತ್ರ ಹಾಗೂ ಬಹುಮಾನವನ್ನು ನೀಡಲಾಗುವುದಿಲ್ಲ.
  14. ಸಂಘಟಕರೊಡನೆ ಅಥವಾ ತೀರ್ಪುಗಾರರೊಡನೆ ಅಸಭ್ಯವಾಗಿ ವರ್ತಿಸುವ ಕ್ರೀಡಾಪಟುಗಳನ್ನು ಕ್ರೀಡಾ ಸ್ಪರ್ಧೆಯಿಂದ ಹೊರಹಾಕುವುದಲ್ಲದೆ, ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಗಮನಕ್ಕೆ ತಂದು ತಪ್ಪಿತಸ್ಯ ಕ್ರೀಡಾಪಟುವಿನ ಮೇಲೆ ಸೇವಾ ನಿಯಮಗಳ ರೀತ್ಯಾ ಶಿಸ್ತಿನ ಕ್ರಮ ಜರುಗಿಸಲು ಶಿಫಾರಸು ಮಾಡಲಾಗುವುದು.
  15. ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸ್ಪರ್ಧೆ ಪ್ರಾರಂಭವಾಗುವ ನಿಗದಿತ ಸಮಯಕ್ಕೆ ಕನಿಷ್ಠ 1 ಗಂಟೆ ಮುಂಚಿತವಾಗಿ ಹಾಜರಿದ್ದು, ಕ್ರೀಡಾ ಸಂಘಟಕನಾಧಿಕಾರಿಗಳಲ್ಲಿ ವರದಿ ಮಾಡಿಕೊಳ್ಳತಕ್ಕದ್ದು.
  16. ಕ್ರೀಡಾ ಸ್ಪರ್ಧೆಗಳಲ್ಲಿ ಸಂಗೀತ, ನೃತ್ಯ ಹಾಗೂ ನಾಟಕಗಳಲ್ಲಿ ಭಾಗವಹಿಸುವ ಸ್ಪರ್ಧಿಗಳು ತಮ್ಮದೇ ಆದ ಸಲಕರಣೆಗಳನ್ನು ತರತಕ್ಕದ್ದು
  17. ಸಂಗೀತ ಮತ್ತು ನೃತ್ಯ ಸ್ಪರ್ಧೆಗಳಲ್ಲಿ ಚಲನಚಿತ್ರ ಗೀತೆಯ ತುಣುಕು ಇತ್ಯಾದಿಗಳಿಗೆ ಅವಕಾಶವಿಲ್ಲ
  18. ಸಂಗೀತ, ನೃತ್ಯ, ಚೆಸ್ ಮತ್ತು ನಾಟಕ ಸ್ಪರ್ಧೆಗಳಲ್ಲಿ ಪ್ರತ್ಯೇಕವಾಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಸ್ಪರ್ಧೆಗಳು ಇರುವುದಿಲ್ಲ.
  19. ಸ್ಪರ್ಧಿಗಳು ಉದ್ಘಾಟನಾ ಸಮಾರಂಭದ ಪಥ ಸಂಚಲನದಲ್ಲಿ ಆಯಾ ಜಿಲ್ಲೆಯ ಬಾವುಟದೊಂದಿಗೆ ಭಾಗವಹಿಸುವುದು ಕಡ್ಡಾಯವಾಗಿದೆ. ಉದ್ಘಾಟನಾ ಸಮಾರಂಭಕ್ಕೆ ಮೊದಲು ನೋಂದಾವಣೆ ಮಾಡಿಕೊಳ್ಳುವ ಕ್ರೀಡಾಪಟುಗಳಿಗೆ ಮಾತ್ರ ಹಾಜರಾತಿ ನೀಡಲಾಗುವುದು.
  20. ಸರ್ಕಾರಿ ಆದೇಶ ಸಂ:ಎಫ್‌ಡಿಎ/ಎಸ್‌ಆರ್‌ಎಸ್/2002, ಬೆಂಗಳೂರು, ದಿನಾಂಕ:27-11-2002ರಂ ರಾಜ್ಯ ಸರ್ಕಾರದ ವತಿಯಿಂದ ನಡೆಸುವ ರಾಜ್ಯಮಟ್ಟದ ಮತ್ತು ಜಿಲ್ಲಾಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮತ್ತು ಪ್ರಯಾಣ ಭತ್ಯೆ ಸೌಲಭ್ಯಗಳನ್ನು ಷರತ್ತಿಗೊಳಪಟ್ಟು ಮಂಜೂರಾತಿ ನೀಡಿದೆ.
  21. ಒಬ್ಬ ಸರ್ಕಾರಿ ನೌಕರನು ಹಲವು ಕ್ರೀಡೆಗಳಲ್ಲಿ ಭಾಗವಹಿಸಲು ನೋಂದಾಯಿಸಿದ್ದರು ಸಹ ಒಂದು ಜೊತೆ ಕ್ರೀಡಾ ಸಮವಸ್ತ್ರ/ಟ್ರ್ಯಾಕ್ ಸೂಟ್ ನೀಡಲು ಕ್ರಮವಹಿಸುವುದು.
  22. ಯಾವ ಸ್ಪರ್ಧೆಗಳಲ್ಲಿ ಕ್ರೀಡಾಪಟುಗಳು ಭಾಗವಹಿಸಿರುವುದಿಲ್ಲವೋ ಅಂತಹ ಸ್ಪರ್ಧೆಗಳಿಗೆ ಕ್ರೀಡಾಪಟುವಲ್ಲದ ನೌಕರರನ್ನು ಸೇರ್ಪಡೆಗೊಳಿಸುವ ಕ್ರಮವನ್ನು ಕೈಬಿಡುವುದು. ಒಂದು ವೇಳೆ ತಪ್ಪು ಮಾಹಿತಿ ನೀಡಿರುವುದು ಕಂಡುಬಂದಲ್ಲಿ ಅಂತಹ ಸಹಾಯಕ ನಿರ್ದೇಶಕರು ಹಾಗೂ ನೌಕರರ ವಿರುದ್ಧ ಶಿಸ್ತು ಕ್ರಮ ಅನಿವಾರ್ಯವಾಗಲಿದೆ ಎಂಬ ಅಂಶವನ್ನು ಸ್ಪಷ್ಟಪಡಿಸುವುದು.

ಇದನ್ನೂ ಓದಿ | Part Time Lecturers: ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನದಲ್ಲಿ ಭಾರಿ ಹೆಚ್ಚಳ

Exit mobile version