Site icon Vistara News

MySugars factory: ಮಂಡ್ಯದ ಮೈ ಶುಗರ್ಸ್‌ಗೆ ಸಿಹಿ ಸುದ್ದಿ, 50 ಕೋಟಿ ರೂ. ಬಿಡುಗಡೆ ಮಾಡಿದ ಸಿದ್ದರಾಮಯ್ಯ

MySugar Factory

#image_title

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮೈ ಶುಗರ್ಸ್ (My Sugars Factory) ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಆರ್ಥಿಕ ಇಲಾಖೆ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇದರಿಂದ 37 ಸಾವಿರ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ.

ರಾಜ್ಯದಲ್ಲಿರುವ ಸರ್ಕಾರಿ ಸ್ವಾಮ್ಯದ ಏಕೈಕ ಸರ್ಕರೆ ಕಾರ್ಖಾನೆ ಮೈ ಶುಗರ್ಸ್ ಅನ್ನು ಪುನಶ್ಚೇತನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಈ ಹಿಂದೆ ಭರವಸೆ ನೀಡಿದ್ದರು. ಆ ಭರವಸೆಯಂತೆ ರೋಗಗ್ರಸ್ಥವಾಗಿದ್ದ ಕಾರ್ಖಾನೆಯ ಪುನಶ್ಚೇತನಕ್ಕೆ 15 ಕೋಟಿ ರೂ ಹಾಗೂ ಕಾರ್ಖಾನೆಯ ದುಡಿಯುವ ಬಂಡವಾಳಕ್ಕೆ 35 ಕೋಟಿ ರೂ ಬಿಡುಗಡೆಗೆ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿಗಳು ಕಳೆದ ವಾರ ಅನುಮೋದನೆ ನೀಡಿದ್ದರು. ಆ ಪ್ರಕಾರ ಇಂದು ಆರ್ಥಿಕ ಇಲಾಖೆ 50 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ನೇತೃತ್ವದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಶಾಸಕರ ಮತ್ತು ಜನಪ್ರತಿನಿಧಿಗಳ ನಿಯೋಗ ಮೈ ಶುಗರ್ಸ್ ಪುನಶ್ಚೇತನಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತ್ತು.‌ 37 ಸಾವಿರ ಕಬ್ಬು ಬೆಳೆಗಾರ ರೈತರಿಂದ 5 ಲಕ್ಷ ಟನ್ ಕಬ್ಬು ಸರಬರಾಜು ಮಾಡುವ ಒಪ್ಪಂದವಾಗಿತ್ತು. ಈ ಒಪ್ಪಂದದಂತೆ ರೈತರಿಗೆ ಸಕಾಲದಲ್ಲಿ ಹಣ ಒದಗಿಸುವ ಅಗತ್ಯವಿದೆ ಎಂದು ನಿಯೋಗ ಮನವಿ ಮಾಡಿತ್ತು.

ನಿಯೋಗದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಮತ್ತೊಮ್ಮೆ ನುಡಿದಂತೆ ನಡೆದಿದ್ದು , ಕೊಟ್ಟ ಮಾತಿನಂತೆ ತಕ್ಷಣಕ್ಕೆ 50 ಕೋಟಿ ರೂ ಬಿಡುಗಡೆ ಆಗಿದೆ. ನುಡಿದಂತೆ ನಡೆದ ಮುಖ್ಯಮಂತ್ರಿಗಳಿಗೆ ನಿಯೋಗ ಮತ್ತು ರೈತ ಸಮೂಹ ಅಭಿನಂದನೆ ಸಲ್ಲಿಸಿದೆ.

ಇದನ್ನೂ ಓದಿ: Congress Guarantee: ಅನ್ನಭಾಗ್ಯ ಅಕ್ಕಿಗೆ ಕೇಂದ್ರ ಸರ್ಕಾರದ ಕೊಕ್ಕೆ!: ಗ್ಯಾರಂಟಿ ಫೇಲ್‌ ಮಾಡಲು ಷಡ್ಯಂತ್ರ ಎಂದ ಸಿಎಂ ಸಿದ್ದರಾಮಯ್ಯ

Exit mobile version