ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದಲ್ಲಿ ಶಾಲೆಗೆ ತೆರಳಲು ವಿದ್ಯಾರ್ಥಿಗಳು ಕಷ್ಟಪಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಶಾಲೆಗೆ ಬರುವ ಮಕ್ಕಳನ್ನು ಕರೆತರುವ ಸಲುವಾಗಿ ಸರ್ಕಾರದಿಂದಲೇ ಶಾಲಾ ವಾಹನ ಖರೀದಿಗೆ ಅನುಮತಿ ನೀಡಿದೆ.
ಈ ಸಂಬಂಧ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಉಪ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಸಿದ್ದಾರೆ. ಇನ್ನು ಮುಂದೆ ಸರ್ಕಾರಿ ಶಾಲೆಗಳು ಶಾಲಾ ಮಕ್ಕಳನ್ನು ದೂರದ ಊರುಗಳಿಂದ ಕರೆದುಕೊಂಡು ಬರುವುದಕ್ಕೆ ವಾಹನ ವ್ಯವಸ್ಥೆಯನ್ನೂ ಕಲ್ಪಿಸಬಹುದಾಗಿದೆ.
ಇದನ್ನೂ ಓದಿ | ಶಿಕ್ಷಣ ಇಲಾಖೆಯ ಆದೇಶಕ್ಕೆ ಸರಕಾರಿ ಪ್ರೌಢಶಾಲಾ ಸಂಸ್ಕೃತ ಶಿಕ್ಷಕರು ಶಾಕ್
ಸರ್ಕಾರಿ ಶಾಲೆಗಳಿಗೆ ಮಾತ್ರ ಶಾಲಾ-ವಾಹನವನ್ನು ಖರೀಸಲು ಅವಕಾಶ ಇದ್ದು, ತಗಲುವ ವೆಚ್ಚವನ್ನು ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಭರಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಜತೆಗೆ ಶಾಲಾ ವಾಹನಕ್ಕೆ, ವಾಹನ ಚಾಲಕರ ವೇತನ ಹಾಗೂ ಪೆಟ್ರೋಲ್, ಡೀಸೆಲ್, ದುರಸ್ಥಿ ವೆಚ್ಚಗಳನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು ( SDMC) ಇತರೆ ಅನುದಾನದಡಿ ವೆಚ್ಚ ಭರಿಸುವಂತೆ ಷರತ್ತು ವಿಧಿಸಲಾಗಿದೆ.
ಇದನ್ನೂ ಓದಿ | ಶಾಲೆಯಲ್ಲಿ ನೀರಿಲ್ಲದ ಕಾರಣ, ನಾಲೆಗೆ ಇಳಿದು ತಟ್ಟೆ ತೊಳೆದ ಶಾಲಾ ಮಕ್ಕಳು