ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಅಭಿಷೇಕ್, ಚಿಕ್ಕಬಳ್ಳಾಪುರದಲ್ಲಿ (Chikkaballapur) ಬುಧವಾರ ನಡೆದ ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪಾಲ್ಗೊಂಡು ಉತ್ತಮ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ (National Level) ಆಯ್ಕೆಯಾಗಿದ್ದಾನೆ.
ಚಿಕ್ಕಜೇನಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕ ಮಹೇಶ್ ಎಚ್. ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿ ಅಭಿಷೇಕ್ ನಿರ್ಮಿಸಿದ್ದ ಸೋಲಾರ್ ಚಾಲಿತ ಗ್ರಾಸ್ ಕಟ್ಟಿಂಗ್ ಯಂತ್ರ ಪ್ರದರ್ಶನ ನೀಡಿ ಬಹುಮಾನ ಪಡೆದಿದ್ದಾನೆ.
ಇದನ್ನೂ ಓದಿ: Health Care Summit: ಭಾರತದಲ್ಲೇ ಮೊದಲ ಬಾರಿಗೆ ಮಣಿಪಾಲ್, ದಿಲ್ಲಿಯಲ್ಲಿ ಹೆಲ್ತ್ ಕೇರ್ ಶೃಂಗ
ವಿದ್ಯಾರ್ಥಿಯ ಈ ಸಾಧನೆಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು, ಹೊಸನಗರ ಬಿಇಒ ಎಚ್.ಆರ್. ಕೃಷ್ಣಮೂರ್ತಿ, ಚಿಕ್ಕಜೇನಿ ಗ್ರಾ.ಪಂ. ಅಧ್ಯಕ್ಷ ರಾಜು ಎನ್. ಪಿ. ಹಾಗೂ ಸದಸ್ಯರು, ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಉಮೇಶ್ ಕೆ. ಮತ್ತು ಸದಸ್ಯರು, ಶಾಲಾ ಮುಖ್ಯ ಶಿಕ್ಷಕ ಶಿವಾಜಿ ಟಿ .ಎಂ. ಮತ್ತು ಸಹ ಶಿಕ್ಷಕರು ಅಭಿನಂದಿಸಿದ್ದಾರೆ.
ರಾಜ್ಯಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಬಗ್ಗೆ ವಿದ್ಯಾರ್ಥಿ ಅಭಿಷೇಕ್ ಅತೀವ ಸಂತಸ ವ್ಯಕ್ತಪಡಿಸಿದ್ದಾನೆ.