Site icon Vistara News

Govt Employees Association: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸಲು ಕಾರ್ಯಕಾರಿ ಸಮಿತಿ ತೀರ್ಮಾನ

Govt Employees Association

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (Govt Employees Association) ಚುನಾವಣೆ ನಡೆಸಲು ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನ ಕೈಗೊಳ್ಳಲಾಗಿದೆ. 2024-2029ನೇ ಸಾಲಿನ ಅವಧಿಗೆ ಎಲ್ಲಾ ಹಂತದ ಚುನಾವಣಾ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸಂಘದ ಬೈಲಾ ನಿಯಮ 47ರ ರೀತ್ಯಾ ಕರಡು ಮತದಾರರ ಪಟ್ಟಿ ಹೊರತುಪಡಿಸಿ, ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಸೂಚನೆ ನೀಡಲಾಗಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಾಗ ಸಂಘದ ಬೈಲಾ ನಿಯಮದನ್ವಯ ಅರ್ಹರಿರುವ ಸಂಘದ ಸದಸ್ಯರ ಹೆಸರಗಳನ್ನೊಳಗೊಂಡ ಕರಡು ಮತದಾರರ ಪಟ್ಟಿಯನ್ನು ನಿಗದಿತ ದಿನಾಂಕದೊಳಗೆ ಸಿದ್ಧಪಡಿಸಿ ಹೊರಡಿಸಲಾದ ಮತದಾರರ ಪಟ್ಟಿಯನ್ನು ರಾಜ್ಯ ಸಂಘಕ್ಕೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಕರಡು ಮತದಾರರ ಪಟ್ಟಿಯನ್ನು ಹೊರಡಿಸಿದ ನಂತರ ಸಂಘದ ಸದಸ್ಯರಿಂದ ಮನವಿ, ಆಕ್ಷೇಪಣೆಗಳಿಗೆ ಮುಕ್ತ ಅವಕಾಶ ನೀಡಬೇಕು ಹಾಗೂ ಈ ಕುರಿತು ವ್ಯಾಪಕ ಪ್ರಚಾರ ಮಾಡಬೇಕು. ಯಾವುದೇ ಕಾರಣಕ್ಕೂ ನಿಗದಿತ ಅವಧಿಯ ವಿಸ್ತರಣೆಗೆ ಅವಕಾಶವಿರುವುದಿಲ್ಲ. ತಪ್ಪಿದಲ್ಲಿ ಸಂಬಂಧಿಸಿದ ಶಾಖೆಗಳೇ ಹೊಣೆ. ಈ ಸಂಬಂಧ ತಮ್ಮ ಶಾಖೆಗಳಲ್ಲಿ ಕಾರ್ಯಕಾರಿ ಸಮಿತಿ ಸಭೆಗಳನ್ನು ಸಂಘದ ಬೈಲಾ ರೀತ್ಯಾ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ | Old Students Association: ಸರ್ಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ, ವಾಟ್ಸ್‌ಆ್ಯಪ್‌ ಗ್ರೂಪ್ ರಚಿಸಲು ಆದೇಶ

ಮತದಾರರ ಪಟ್ಟಿ ಪರಿಷ್ಕರಣೆಗೆ ನೋಂದಣಿ

Exit mobile version