ಬೆಂಗಳೂರು : ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ (Govt Employees Strike), ಶೇ. 17 ವೇತನ ಹೆಚ್ಚಳ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಏಪ್ರಿಲ್ 1 ರಿಂದ ಇದು ಜಾರಿಗೆ ಬರಲಿದೆ. ಇದಕ್ಕೆ ಹರ್ಷ ವ್ಯಕ್ತಪಡಿಸಿರುವ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್ ಷಡಾಕ್ಷರಿ ಹೋರಾಟ ಸಕ್ಸಸ್ ಆಗಿದೆ ಎಂದು ಹೇಳಿದ್ದಾರೆ.
ʻʻಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನಲೆಯಲ್ಲಿ, ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸಿರುತ್ತದೆʼʼ ಎಂದು ಆದೇಶದಲ್ಲಿ ಹೇಳಲಾಗಿದೆ.
ಸರ್ಕಾರ ಹೊರಡಿಸಿದ ಆದೇಶ ಇಲ್ಲಿದೆ
ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ
ಈ ವೇತನ ಹೆಚ್ಚಳದ ಕುರಿತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದರು. ಮುಷ್ಕರ ನಡೆಸುತ್ತಿರುವ ನೌಕರರ ಬೇಡಿಕೆಯಂತೆಯೇ ಸದ್ಯವೇ ಅದೇಶ ಹೊರಡಿಸಲಾಗುವುದು ಎಂದು ಅವರು ಹೇಳಿದ್ದರು. ಅಂತೆಯೇ ಈ ಆದೇಶ ಹೊರಬಿದ್ದಿದೆ.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿಯವರನ್ನು ಮಾತುಕತೆಗೆ ಆಹ್ವಾನಿಸಿದ್ದ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐಎಸ್‌ಎನ್ ಪ್ರಸಾದ್ ಅವರೊಂದಿಗೆ ಮಾತುಕತೆ ಅಂತ್ಯಗೊಳ್ಳುತ್ತಿದ್ದಂತೆಯೇ ಆದೇಶ ಪ್ರಕಟಗೊಂಡಿದೆ. ನಗುಮುಖದಿಂದಲೇ ಸಭೆಯಿಂದ ಹೊರ ಬಂದ ಷಡಾಕ್ಷರಿ ʻʻಹೋರಾಟ ಸಕ್ಸಸ್ ಆಗಿದೆ, ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ನಮ್ಮ ಮುಂದಿನ ತೀರ್ಮಾನ ಪ್ರಕಟಿಸುತ್ತೇವೆʼʼ ಎಂದರು. ಬಹುತೇಕವಾಗಿ ಮುಷ್ಕರವನ್ನು ಅಂತ್ಯಗೊಳಿಸವ ಕುರಿತು ಅವರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Govt Employees Strike: ಶೇ.17 ವೇತನ ಹೆಚ್ಚಳದಿಂದ ಯಾವ ನೌಕರರಿಗೆ ಎಷ್ಟು ವೇತನ ಸಿಗುತ್ತದೆ? ಇಲ್ಲಿದೆ ಲೆಕ್ಕಾಚಾರ