Site icon Vistara News

Govt. Employees strike : 17% ವೇತನ ಹೆಚ್ಚಿಸಿದ ಸಿಎಂ ಬೊಮ್ಮಾಯಿಗೆ ನೌಕರರ ಸಂಘದಿಂದ ಅಭಿನಂದನೆ

Govt. Employees protest

#image_title

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಶೇ. 17ರಷ್ಟು ಮಧ್ಯಂತರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನೌಕರರ ಸಂಘದ ವತಿಯಿಂದ ಗುರುವಾರ ಅಭಿನಂದಿಸಲಾಯಿತು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ನೌಕರರ ಸಂಘದ ಮಾಜಿ ಅಧ್ಯಕ್ಷ ಬೈರಪ್ಪ ಅವರ ನೇತೃತ್ವದಲ್ಲಿ ನೌಕರರ ಸಂಘದ ಪದಾಧಿಕಾರಿಗಳು ಸಿಎಂ ಅವರ ಆರ್‌.ಟಿ. ನಗರದ ನಿವಾಸಕ್ಕೆ ತೆರಳಿದ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.

ಸರ್ಕಾರಿ ನೌಕರರ ಸಂಘಟನೆ ವತಿಯಿಂದ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.

ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಸರ್ಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಬೇಕು, ಈಗಲೇ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ ಮಾರ್ಚ್‌ 1ರಂದು ರಾಜ್ಯ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿದ್ದರು. ಈ ನಡುವೆ, ಮುಖ್ಯಮಂತ್ರಿ ಬೊಮ್ಮಾಯಿ ಅವರು ಮುಂದಿನ ಏಪ್ರಿಲ್‌ 1ರಿಂದ ಜಾರಿಗೆ ಬರುವಂತೆ ಶೇ. 17ರಷ್ಟು ವೇತನ ಹೆಚ್ಚಳ ಘೋಷಿಸಿದರು. ಜತೆಗೆ ಹಳೆ ಪಿಂಚಣಿ ಪದ್ಧತಿ ಜಾರಿಗೆ ಸಂಬಂಧಿಸಿ ಅಧ್ಯಯನ ನಡೆಸಲು ಸಮಿತಿಯನ್ನು ರಚನೆಯನ್ನು ಪ್ರಕಟಿಸಿದರು. ಈ ಭರವಸೆಗಳ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ತಮ್ಮ ಮುಷ್ಕರವನ್ನು ಕೈಬಿಟ್ಟಿದ್ದರು.

ಸರ್ಕಾರಿ ನೌಕರರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ ಮತ್ತು ಮುಖ್ಯಮಂತ್ರಿಗಳನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಅಭಿನಂದನೆ ಸಲ್ಲಿಸಿದೆ. ಅದರ ಭಾಗವಾಗಿ ಮುಖ್ಯಮಂತ್ರಿಗಳನ್ನು ಸನ್ಮಾನದ ಮೂಲಕ ಗೌರವಿಸಿದೆ.

ಇದನ್ನೂ ಓದಿ : Govt Employees Strike : ಸರ್ಕಾರದಿಂದ ವೇತನ ಹೆಚ್ಚಳದ ಆದೇಶ; ಮುಷ್ಕರ ಹಿಂದಕ್ಕೆ ಪಡೆದ ಸರ್ಕಾರಿ ನೌಕರರು

Exit mobile version