Site icon Vistara News

Govt. Employees strike : 17% ವೇತನ ಹೆಚ್ಚಳ ಯಾರ‍್ಯಾರಿಗೆ ಅನ್ವಯ, ಸರ್ಕಾರಿ ಆದೇಶದಲ್ಲಿ ಏನೇನಿದೆ?

Govt. employees strike

#image_title

ಬೆಂಗಳೂರು: ಸರ್ಕಾರಿ ನೌಕರರ ವೇತನವನ್ನು ಶೇ. 17ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದು ತಾತ್ಕಾಲಿಕ ಪರಿಹಾರವಾಗಿದ್ದು, ಏಪ್ರಿಲ್‌ 1ರಿಂದ ಜಾರಿಗೆ ಬರಲಿದೆ.

ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 2022ರ ನವೆಂಬರ್‌ 19ರಂದು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾಗಿತ್ತು. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನಲೆಯಲ್ಲಿ, ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ.

ಆದೇಶದಲ್ಲಿರುವ ಮುಖ್ಯಾಂಶಗಳು

1. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 01ನೇ ಏಪ್ರಿಲ್ 2023ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ. 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ.

2. ಮಧ್ಯಂತರ ಪರಿಹಾರದ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಆ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ,

(ಆ) 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ,

(ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ.

ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದಲ್ಲ.

4. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಏಪ್ರಿಲ್ 2023ರಿಂದ ಜಾರಿಗೆ ಬರುವಂತೆ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಶೇಕಡ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.

5. ಸರ್ಕಾರದ ಸ್ಥಳೀಯ ಸಂಸ್ಥೆಗಳ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶವು ಅನ್ವಯಿಸುತ್ತದೆ.

6. ಸ್ಥಳೀಯ ಸಂಸ್ಥೆಗಳ (ನಗರ ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯ) ನೌಕರರಿಗೆ ಸೌಲಭ್ಯವನ್ನು ಮಂಜೂರು ಮಾಡುವುದರಿಂದ ಉಂಟಾಗುವ ವೆಚ್ಚವನ್ನು ಅನ್ವಯಿಸುವ ಸ್ಥಳೀಯ ಸಂಸ್ಥೆಗಳೇ ಭರಿಸತಕ್ಕದ್ದು.

7. ಯುಜಿಸಿ/ಎಐಸಿಟಿಇ/ಐಸಿಎಆರ್/ಎನ್‌ಜೆಪಿಸಿ, ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ಪಿಂಚಣಿದಾರರಿಗೆ ಈ ಆದೇಶವು ಅನ್ವಯಿಸುವುದಿಲ್ಲ.

8. ತಾತ್ಕಾಲಿಕ ಪರಿಹಾರದ ಕಾರಣದಿಂದ ಸಂದಾಯ ಮಾಡಲು ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಶಗಳನ್ನು ಮುಂದಿನ ರೂಪಾಯಿಗೆ ಪೂರ್ಣಾಂಕಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು

9. ಈ ಆದೇಶದ ಮೂಲಕ ಮಂಜೂರಾದ ತಾತ್ಕಾಲಿಕ ಪರಿಹಾರದ ಮೊತ್ತವು ವಿಶಿಷ್ಟ ಸಂಭಾವನೆಯಾಗಿದ್ದು, ಇದು ನಿವೃತ್ತಿ ಸೌಲಭ್ಯ/ತುಟ್ಟಿ ಭತ್ಯೆಯನ್ನು ನಿರ್ಧರಿಸುವಾಗ ಅಥವಾ ಬೇರೆ ಯಾವುದೇ ಉದ್ದೇಶಗಳಿಗೆ ಪರಿಗಣಿಸತಕ್ಕದ್ದಲ್ಲ.

10. ಈ ತಾತ್ಕಾಲಿಕ ಪರಿಹಾರದ ವೆಚ್ಚವನ್ನು ವೇತನ ವೆಚ್ಚವನ್ನು ಭರಿಸುವ ಲೆಕ್ಕಶೀರ್ಷಿಕೆಯಿಂದಲೇ ಭರಿಸತಕ್ಕದ್ದು.

ಶೇ. 17 ವೇತನ ಹೆಚ್ಚಳದಿಂದ ಯಾರ‍್ಯಾರಿಗೆ ಎಷ್ಟು ವೇತನ ಹೆಚ್ಚಾಗಲಿದೆ?

ಇದನ್ನೂ ಓದಿ : Govt. Employees strike : ಸರ್ಕಾರಿ ನೌಕರರ ಮುಷ್ಕರ; ರಾಜ್ಯಾದ್ಯಂತ ಆಡಳಿತ ಯಂತ್ರ ಸಂಪೂರ್ಣ ಸ್ತಬ್ಧ

Exit mobile version