ಕಾರವಾರ: ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಕರೆ ಕೊಟ್ಟಿರುವ ಮುಷ್ಕರಕ್ಕೆ (Govt Employees Strike) ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು. ಏಳನೇ ವೇತನ ಜಾರಿ ಹಾಗೂ ಹಳೇ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಗೆ ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕರು, ವೈದ್ಯರು, ನರ್ಸ್ ಸೇರಿದಂತೆ ಇತರೆ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಬೆಂಬಲ ಸೂಚಿಸಿದ್ದರು.
ಇದನ್ನೂ ಓದಿ: Govt Employees Strike: ಶೇ.17 ವೇತನ ಹೆಚ್ಚಳದಿಂದ ಯಾವ ನೌಕರರಿಗೆ ಎಷ್ಟು ವೇತನ ಸಿಗುತ್ತದೆ? ಇಲ್ಲಿದೆ ಲೆಕ್ಕಾಚಾರ
ಶಿರಸಿ ಹಾಗೂ ಕಾರವಾರ ಶೈಕ್ಷಣಿಕ ಜಿಲ್ಲೆಯ ಬಹುತೇಕ ಸರ್ಕಾರಿ ಶಾಲೆಗಳು ಬಂದಾಗಿದ್ದವು. ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಶಿರಸಿಯ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಮಕ್ಕಳು ಆಟದ ಮೈದಾನಕ್ಕಿಳಿದು ಆಟವಾಡುತ್ತಿರುವ ದೃಶ್ಯಗಳು ಕಂಡುಬಂತು. ಶಾಲೆಗಳಿಗೆ ರಜೆ ಘೋಷಣೆ ಮಾಹಿತಿ ಸಿಗದೇ ಮುಷ್ಕರದ ಬಗ್ಗೆಯೂ ಅರಿಯದ ಕೆಲ ಮಕ್ಕಳು ಶಾಲೆಗಳತ್ತ ಹೆಜ್ಜೆ ಹಾಕಿ ವಾಪಸ್ ತೆರಳಿದ್ದಾರೆ.
ಇದನ್ನೂ ಓದಿ: Ram Charan: ರಾಮ್ ಚರಣ್ ಭಾರತದ ಬ್ರಾಡ್ ಪಿಟ್! RRR ನಟ ಪ್ರತಿಕ್ರಿಯಿಸಿದ್ದೇನು?
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಸೇವೆ ಹೊರತುಪಡಿಸಿ ಒಪಿಡಿ ಸೇವೆಗಳು ಬಂದ್ ಆಗಿದ್ದವು. ಎಲ್ಲೆಡೆಯೂ ಇದೇ ಪರಿಸ್ಥಿತಿ ಉಂಟಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ಸಾರ್ವಜನಿಕರು ತೊಂದರೆಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸುಮಾರು 19 ಸಾವಿರ ಸರ್ಕಾರಿ ನೌಕರರು ಇದ್ದು ಪೊಲೀಸ್, ಅಗ್ನಿಶಾಮಕ, ಜೈಲು ಸಿಬ್ಬಂದಿ ಮಾತ್ರ ಮುಷ್ಕರದಿಂದ ಹೊರಗುಳಿದಿದ್ದರು.
ಇದನ್ನೂ ಓದಿ: Govt Employees Strike : ಶೇ.17 ರಷ್ಟು ವೇತನ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ; ಎನ್‌ಪಿಎಸ್ ರದ್ದು ತೀರ್ಮಾನಿಸಲು ಸಮಿತಿ ರಚನೆ