ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಪ್ರಥಮ ಬಾರಿಗೆ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ರಾಜ್ಯ ಸರ್ಕಾರಿ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿದ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಸೆಪ್ಟೆಂಬರ್ 6ರಂದು ಆಯೋಜಿಸಲಾಗಿದೆ.
30 ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ 2022 ನೇ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿರುವ ಈ ಎರಡೂ ಕಾರ್ಯಕ್ರಮಗಳನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಈಗಾಗಲೇ ಆಯ್ಕೆಯಾಗಿರುವ ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಡಳಿತ ಸುಧಾರಣಾ ವಿಭಾಗದ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ ತಿಳಿಸಿದ್ದಾರೆ.
ಇದನ್ನೂ ಓದಿ | ವಿಸ್ತಾರ Explainer | ಏನಿದು ಡಿಜಿಟಲ್ ರೇಪ್? ಶಿಕ್ಷೆಯಾದ ದೇಶದ ಮೊದಲ ಪ್ರಕರಣ ಯಾವುದು?
ಅಂದು ಬೆಳಗ್ಗೆ 11ಕ್ಕೆ ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿರುವ ಸಮಾರಂಭಕ್ಕೆ ಹಾಜರಾಗುವ ಸರ್ಕಾರಿ ನೌಕರರಿಗೆ ಅರ್ಧ ದಿನದ ವಿಶೇಷ ಸಾಂದರ್ಭಿಕ ರಜೆಯ ಸೌಲಭ್ಯವನ್ನೂ ಕಲ್ಪಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ರಾಜ್ಯ ಸಚಿವ ಸಂಪುಟದ ಸದಸ್ಯರು, ಸಂಸದರು, ಶಾಸಕರು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಒಳಗೊಂಡಂತೆ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸೇರಿ ಸಂಘದ ಪದಾಧಿಕಾರಿಗಳು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ ಈ ಕೆಳಕಂಡಂತಿದೆ.
ಇದನ್ನೂ ಓದಿ | ಸವಿಸ್ತಾರ ಅಂಕಣ | ಗಡಿಗಳ ಎಲ್ಲೆ ಮೀರಿ ಮನ್ನಣೆ ಗಳಿಸಿದ್ದ ಸಾವರ್ಕರ್! ಅವರ ಪರ ಹೋರಾಡಿದ್ದ ಮಾರ್ಕ್ಸ್ ಮೊಮ್ಮಗ!