ಶಿವಮೊಗ್ಗ: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಯುಕ್ತ ಕಂದಾಯ ಸಚಿವ ಆರ್.ಅಶೋಕ್ ಶಿವಮೊಗ್ಗ ತಾಲೂಕಿನ ಹೊಳಲೂರಿನಲ್ಲಿ ಜ.28 ರಂದು ಗ್ರಾಮ ವಾಸ್ತವ್ಯ (Grama Vastavya) ಮಾಡಲಿದ್ದಾರೆ. ಸಂಬಂಧಿಸಿದ ಎಲ್ಲ ತಾಲೂಕು ಅಧಿಕಾರಿಗಳು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ತಹಸೀಲ್ದಾರ್ ಡಾ.ನಾಗರಾಜ್ ಸೂಚನೆ ನೀಡಿದ್ದಾರೆ.
ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಕುರಿತು ಪೂರ್ವಭಾವಿಯಾಗಿ ಚರ್ಚಿಸಲು ತಾಲೂಕು ಕಚೇರಿಯಲ್ಲಿ ಸೋಮವಾರ (ಜ.೧೬) ಕರೆಯಲಾಗಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದನ್ನೂ ಓದಿ | Viral Video | ಹಿಮದ ಮುಂದೆ ಘೋಡೆ ಪೇ ಸವಾರ್ ಹಾಡಿಗೆ ಡ್ಯಾನ್ಸ್; ವೈರಲ್ ಆಯ್ತು ಈ ಜೋಡಿಯ ನೃತ್ಯ
ತಾಲೂಕಿನ ಹೊಳಲೂರು ಗ್ರಾಮದ ಮಾರುತಿ ಪ್ರೌಢಶಾಲೆಯ ಆವರಣದಲ್ಲಿ ಜ.28 ರಂದು ಬೆಳಗ್ಗೆ 11 ರಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭವಾಗಲಿದೆ. ತಾಲೂಕು ಕಚೇರಿ ವ್ಯಾಪ್ತಿಯ 41 ಇಲಾಖೆಗಳಿಗೆ ಈಗಾಗಲೇ ಸಿದ್ಧತೆ ಕುರಿತು ಮಾಹಿತಿ ನೀಡಲಾಗಿದೆ. ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಫಲಾನುಭವಿಗಳ ಪಟ್ಟಿ ತಯಾರಿಸಿ, ಅವರಿಗೆ ಸೂಕ್ತ ಆಸನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಇದನ್ನೂ ಓದಿ | Viral news | ದಿನವೂ ಸಮುದ್ರತೀರದಲ್ಲಿ ಸ್ಫೂರ್ತಿದಾಯಕ ವಾಕ್ಯ ಬರೆಯಲು ಕೆಲಸ ಬಿಟ್ಟಳು!
ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅಧ್ಯಕ್ಷತೆಯಲ್ಲಿ ಜ. 11 ರಂದು ಪೂರ್ವಭಾವಿ ಸಭೆ ನಡೆದಿದ್ದು, ಎಲ್ಲ ಇಲಾಖೆಗಳು, ನಿಗಮಗಳು ತಮ್ಮ ತಮ್ಮ ವ್ಯಾಪ್ತಿಯ ಫಲಾನುಭವಿಗಳ ಪಟ್ಟಿ ತಯಾರಿಸಿ, ಕಾರ್ಯಕ್ರಮದ ಸಮರ್ಪಕ ಆಯೋಜನೆಗೆ ಸೂಕ್ತ ವ್ಯವಸ್ಥೆ ಮಾಡಲು ಸೂಚನೆ ನೀಡಿದ್ದಾರೆ. ಅಂದು ಇಲಾಖೆಗಳಿಂದ ಲಭ್ಯವಾಗುವ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿತೆ ಒದಗಿಸುವ ವಿವಿಧ 14 ಮಳಿಗೆಗಳನ್ನು ತೆರೆಯಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಆರಕ್ಷಕ ಇಲಾಖೆಯವರು ಪೂರ್ವಭಾವಿಯಾಗಿ ಸ್ಥಳ ಪರಿಶೀಲನೆ ನಡೆಸಿ, ವಾಹನಗಳ ಪಾರ್ಕಿಂಗ್, ಸುಗಮ ಸಂಚಾರ ಹಾಗೂ ಇತರೆ ಸುರಕ್ಷತಾ ವ್ಯವಸ್ಥೆಯ ಅಚ್ಚುಕಟ್ಟು ನಿರ್ವಹಣೆ ಕುರಿತು ಕ್ರಮ ಕೈಗೊಳ್ಳಬೇಕೆಂದರು.
ಸಭೆಯಲ್ಲಿ ಡಿವೈಎಸ್‍ಪಿ ಸುರೇಶ್, ಉಪ ತಹಸೀಲ್ದಾರ್ ಗಣೇಶ್, ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಇದನ್ನೂ ಓದಿ | Team India | ತಮ್ಮ ಶತಕದ ಸಾಧನೆಯ ಹಿಂದೆ ಕುಮಟಾದ ಪ್ರತಿಭೆಯ ಪಾತ್ರವಿದೆ ಎಂದ ವಿರಾಟ್ ಕೊಹ್ಲಿ; ಯಾರು ಅವರು?