ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪ್‌ನಲ್ಲಿ ರಾಮ ನವಮಿ ದಿನದಂದು ಎರಡು ಕೋಮಿನ ಯುವಕರ ನಡುವೆ ಘರ್ಷಣೆ ನಡೆದು, ಇಬ್ಬರು ಹಿಂದು ಯುವಕರಿಗೆ ಚಾಕು ಇರಿದಿರುವ ಘಟನೆ (Group Clash) ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹನುಮಂತ, ಗೋಪಾಲ ಗಾಯಾಳುಗಳು. ಗಲಭೆಯಲ್ಲಿ ಅನ್ಯ ಕೋಮಿನ ಒಬ್ಬ ಯುವಕ ಗಾಯಗೊಂಡಿದ್ದಾನೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆಗೆ ಪಡೆಯುತ್ತಿದ್ದು, ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಲ್ಲೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ನಲ್ಲೂರು ಕ್ಯಾಂಪ್‌ನಲ್ಲಿ 2022ರಲ್ಲೂ ಎರಡು ಕೋಮುಗಳ ನಡುವೆ ಜಗಳ ಆಗಿತ್ತು. ಈ ಬಾರಿಯು ರಾಮನವಮಿ ದಿನದಂದು ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದೆ.
ಇದನ್ನೂ ಓದಿ | Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್ ಜಿಹಾದ್ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್
ಮೋದಿ ಹಾಡು ಬರೆದಿದ್ದಕ್ಕೆ ಯುವಕನಿಗೆ ಥಳಿತ; ಪಾಕ್ ಪರ ಘೋಷಣೆ ಕೂಗಲು ಒತ್ತಾಯ
ಮೈಸೂರು: ಪ್ರಧಾನಿ ಮೋದಿ ಕುರಿತ ಹಾಡು ಬಿಡುಗಡೆ ಮಾಡಿದ್ದಕ್ಕೆ ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಇದೇ ವೇಳೆ ಪಾಕ್ ಪರ ಮತ್ತು ಅಲ್ಲಾಹು ಅಕ್ಬರ್ ಎಂದು ಪರ ಘೋಷಣೆ (Pro Pak Slogan) ಕೂಗುವಂತೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಘಟನೆ ನಡೆದಿದ್ದು, ಈ ಬಗ್ಗೆ ನಗರದ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಯುವಕ ದೂರು ನೀಡಿದ್ದಾನೆ.
ಮೈಸೂರಿನ ರೋಹಿತ್ ಹಲ್ಲೆಗೊಳಗಾದ ಯುವಕ. ಮೋದಿ ಹಾಡು ರಿಲೀಸ್ ಮಾಡಿದ್ದೀಯ, ನಿನ್ನ ಸಾಯಿಸುತ್ತೇವೆ ಎಂದು ಅಪರಿಚಿತ ಮುಸ್ಲಿಂ ಯುವಕರ ಗುಂಪು, ಹಿಂದು ಯುವಕನ ಬಟ್ಟೆ ಹರಿದು ಹಲ್ಲೆ ನಡೆಸಿ ಪರಾರಿಯಾಗಿದೆ. ಹಲ್ಲೆ ವೇಳೆ ಪಾಕಿಸ್ತಾನ ಹಾಗೂ ಅಲ್ಲಾಹ್ ಪರ ಘೋಷಣೆ ಕೂಗುವಂತೆ ಯುವಕನಿಗೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ಯುವಕನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಗ್ಗೆ ವಿಡಿಯೊ ಮೂಲಕ ರೋಹಿತ್ ಮಾಹಿತಿ ನೀಡಿದ್ದಾನೆ.
ಇದನ್ನೂ ಓದಿ | Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ
ಘಟನೆ ಬಗ್ಗೆ ಗಾಯಳು ರೋಹಿತ್ ಪ್ರತಿಕ್ರಿಯಿಸಿ, ನಾನು ಕಳೆದ ವಾರ ಮೋದಿ ಸಾಂಗ್ ರಿಲೀಸ್ ಮಾಡಿದ್ದೆ. ಪರಿಚಯಸ್ಥರ ಬಳಿ ನಮ್ಮ ಯುಟ್ಯೂಟ್ ಚಾನೆಲ್ ಸಬ್‌ಸ್ಕ್ರೈಬ್ ಮಾಡಿಸುತ್ತಿದ್ದೆ. ಸರ್ಕಾರಿ ಗೆಸ್ಟ್ ಹೌಸ್ ಬಳಿ ಮುಸ್ಲಿಂ ವ್ಯಕ್ತಿಯೊಬ್ಬರು ಬಂದರು. ಅವರು ಮುಸ್ಲಿಂ ಎಂದು ನನಗೆ ಗೊತ್ತಿರಲಿಲ್ಲ. ನಂತರ ಆ ವ್ಯಕ್ತಿ ವಿಡಿಯೊ ನೋಡಿದ. ನಂತರ ನನ್ನನ್ನು ಒಳಗೆ ಕರೆದುಕೊಂಡು ಹೋಗಿ, ಮೋದಿ ಬಗ್ಗೆ ಸಾಂಗ್ ಮಾಡಿದ್ದೀಯಾ, ನಿನ್ನ ಇಲ್ಲೇ ಕೊಲ್ಲುತ್ತೇವೆ ಎಂದು ಸಹಚರರ ಜತೆ ಸೇರಿ ಹಲ್ಲೆ ಮಾಡಿದರು. ನನ್ನ ಕೈಯಲ್ಲಿ ಇದ್ದ ಶ್ರೀರಾಮನ ಫೋಟೊ, ಧ್ವಜವನ್ನು ಕಿತ್ತು ಬಿಸಾಡಿದರು. ನಂತರ ಅವಾಚ್ಯ ಶಬ್ದಗಳಿಂದ ಬೈಯ್ದು ನನ್ನ ಮೇಲೆ ಬಿಯರ್ ಎರಚಿ, ಮೂತ್ರ ವಿಸರ್ಜನೆ ಮಾಡಿ, ಸಿಗರೇಟ್‌ನಿಂದ ಸುಟ್ಟು ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.