Site icon Vistara News

Gruha Lakshmi Scheme : ಗೃಹಲಕ್ಷ್ಮಿ ಯೋಜನೆ ನೋಂದಣಿ ಸ್ಥಗಿತ ಆಗಿಲ್ಲ, ಆಗಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌

gruha lakshmi scheme and Lakshmi Hebbalkar

ಬೆಂಗಳೂರು: ಕಾಂಗ್ರೆಸ್‌ ಗ್ಯಾರಂಟಿ ಯೋಜನೆಯಲ್ಲಿ (Congress Guarantee Scheme) ಒಂದಾದ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ (Gruha lakshmi scheme Registration Process) ಸ್ಥಗಿತವಿಲ್ಲ. ಯಾವುದೇ ಕಾರಣಕ್ಕೂ ನೋಂದಣಿ ನಿಲ್ಲುವುದಿಲ್ಲ. ನಿರಂತರವಾಗಿ ನೋಂದಣಿ ಪ್ರಕ್ರಿಯೆ ನಡೆಯಲಿದೆ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Women and Child Development Minister Laxmi Hebbalkar) ಸ್ಪಷ್ಟಪಡಿಸಿದ್ದಾರೆ.

“ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ. 2000 ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು, ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ನೋಂದಣಿ ಪುನರಾರಂಭಗೊಳ್ಳಲಿದೆ” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (Department of Women and Child Development) ಟ್ವೀಟ್‌ ಮಾಡಿತ್ತು. ಟ್ವೀಟ್‌ ಮಾಡುತ್ತಿದ್ದಂತೆ ಈ ವಿಷಯವು ಸೋಷಿಯಲ್‌ ಮೀಡಿಯಾದಲ್ಲಿ (Social Media) ವೈರಲ್‌ ಆಗಿತ್ತು. ಇದಾದ ಒಂದೂವರೆ ಗಂಟೆಯಲ್ಲಿ ಆ ಟ್ವೀಟ್‌ ಅನ್ನು ಡಿಲೀಟ್‌ ಮಾಡಲಾಗಿತ್ತು. ಈಗ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ ನೀಡಿದ್ದು, ನೋಂದಣಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Sanatan Dharma : ಬಳಸುವ ಪದಗಳ ಬಗ್ಗೆ ನಿಗಾ ಇರಲಿ; ಉದಯನಿಧಿ ಸ್ಟಾಲಿನ್‌ ಮೇಲೆ ನಿರ್ಮಲಾನಂದನಾಥ ಶ್ರೀ ಗುಡುಗು

ತಪ್ಪು ಮಾಹಿತಿ ಕೊಟ್ಟವರಿಗೆ ನೋಟಿಸ್

ಕೆಲವರ ಅಚಾತುರ್ಯದಿಂದ ಈ ರೀತಿ ಆಗಿದ್ದು, ಇದು ನಿರಂತರವಾಗಿ ನಡೆಯುವ ಯೋಜನೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡಿದವರಿಗೆ ನೋಟಿಸ್ ಜಾರಿ ಮಾಡುತ್ತೇವೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಈ ಕುರಿತು ಇಲಾಖೆಯ ಕಾರ್ಯದರ್ಶಿ, ನಿರ್ದೇಶಕರೊಂದಿಗೆ ಸಭೆ ನಡೆಸಿದ್ದು, ಸಂಬಂಧಿಸಿದವರ ಮೇಲೆ ಕ್ರಮಕ್ಕೆ ಸೂಚಿಸಲಾಗಿದೆ.‌ ಹೀಗಾಗಿ ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

63 ಲಕ್ಷ ಮಂದಿ ಖಾತೆಗೆ ಹಣ ಜಮಾ

ಇದುವರೆಗೂ ಸುಮಾರು 63 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗೆ 2000 ರೂಪಾಯಿ ಜಮಾ ಆಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಾಹಿತಿ ಹಂಚಿಕೊಂಡರು. ಗೃಹಲಕ್ಷ್ಮಿ ಯೋಜನೆಯ ಒಟ್ಟು 1.28 ಕೋಟಿ ಫಲಾನುಭವಿಗಳ ಪೈಕಿ 1.12 ಕೋಟಿ ಫಲಾನುಭವಿಗಳು ಇದುವರೆಗೂ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಈ ಪೈಕಿ 63 ಲಕ್ಷ ಮಹಿಳೆಯರಿಗೆ ಇದುವರೆಗೂ ಹಣ ಸಂದಾಯವಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಬ್ಯಾಂಕ್‌ಗಳಲ್ಲಿ ಹಣ ಸಂದಾಯವಾಗುವುದು ತಡವಾಗಿದೆ. ಇನ್ನೂ ನಾಲ್ಕೈದು ದಿನಗಳಲ್ಲಿ ಎಲ್ಲರಿಗೂ ಹಣ ವರ್ಗಾವಣೆ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಈ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: Gruha Lakshmi Scheme : ಗೃಹಲಕ್ಷ್ಮಿ ಯೋಜನೆ ನೋಂದಣಿ ತಾತ್ಕಾಲಿಕ ಸ್ಥಗಿತ!

ಗೃಹಲಕ್ಷ್ಮಿ ಯೋಜನೆ ಸ್ಥಗಿತ ಆಗಿದೆ ಎಂದು ಟ್ವೀಟ್ ಮಾಡಿರುವ ವಿಚಾರ ಕೇಳಿ ನನಗೆ ಆಶ್ಚರ್ಯ ಆಯಿತು. ನಮ್ಮ ಸೆಕ್ರೆಟರಿ, ಡೈರೆಕ್ಟರ್ ಅವರನ್ನು ಕರೆದು ಮಾತನಾಡಿದೆ. ಅದು ಯಾಕೆ ಹಾಗಾಯ್ತು ಅಂತ ಗೊತ್ತಾಗಲಿಲ್ಲ. ಈಗ ನಿಧಾನವಾಗಿ ನೋಂದಣಿ ಆಗುತ್ತಿದೆ. ಹಣ ಬಿಡುಗಡೆ ಪ್ರಕ್ರಿಯೆಯು ಬ್ಯಾಂಕ್‌ನಿಂದ ನಿಧಾನವಾಗಿದೆ. ನಮ್ಮಿಂದ ಹಣ ಈಗಾಗಲೇ ವರ್ಗಾವಣೆ ಆಗಿದೆ. ಸರ್ಕಾರದಿಂದ ಯಾವುದೇ ತೊಂದರೆ ಆಗಿಲ್ಲ. ಸರ್ಕಾರದ ಖಜಾನೆಯಲ್ಲಿ ಹಣ ಇದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

Exit mobile version