Site icon Vistara News

Karnataka Election 2023: ಗುಬ್ಬಿ ಸಂಭಾವ್ಯ ಕೈ ಅಭ್ಯರ್ಥಿ ಎಸ್.ಆರ್. ಶ್ರೀನಿವಾಸ್‌ಗೆ ಜೆಡಿಎಸ್‌ ಪ.ಪಂ ಸದಸ್ಯರ ಬೆಂಬಲ; ದಳಕ್ಕೆ ಆಘಾತ

Gubbi likely Congress candidate SR Srinivas gets support from JDS town panchayat members Karnataka Election 2023 updates

ತುಮಕೂರು: ವಿಧಾನಸಭಾ ಚುನಾವಣೆ (Karnataka Election 2023) ಹೊಸ್ತಿಲಲ್ಲಿ ಮಾಜಿ ಶಾಸಕ ಎಸ್.ಆರ್. ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಅವರ ಬೆಂಬಲಕ್ಕೆ ಪಟ್ಟಣ ಪಂಚಾಯಿತಿ ಸದಸ್ಯರು ನಿಂತಿದ್ದು ಆ ಪಕ್ಷಕ್ಕೆ ಈಗ ತಲೆನೋವಾಗಿ ಪರಿಣಮಿಸಿದೆ.

ಜೆಡಿಎಸ್‌ನಲ್ಲಿದ್ದುಕೊಂಡೇ ಎಸ್.ಆರ್. ಶ್ರೀನಿವಾಸ್ ಬಾಹ್ಯ ಬೆಂಬಲಕ್ಕೆ ನಿಂತಿದ್ದಾರೆ. ಗುಬ್ಬಿ ಪಟ್ಟಣ ಪಂಚಾಯ್ತಿಯ ಜೆಡಿಎಸ್ ಪಕ್ಷದ 9 ಸದಸ್ಯರು ಕಾಂಗ್ರೆಸ್‌ಗೆ ಬಾಹ್ಯ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡದೆ, ಜೆಡಿಎಸ್‌ನಲ್ಲಿ ಇದ್ದುಕೊಂಡು ಬೆಂಬಲ ನೀಡುವುದಾಗಿ ಹೇಳಿಕೊಂಡಿದ್ದಾರೆ.

ಗುಬ್ಬಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿರುದ್ಧ ಇವರು ಅಸಮಾಧಾನ ಹೊರಹಾಕಿದ್ದಾರೆ. ನಮಗೆ ಜೆಡಿಎಸ್ ಪಕ್ಷದ ಮೇಲೆ ಅಸಮಾಧಾನ ಇಲ್ಲ. ನಮಗೆ ಕೇವಲ ಗುಬ್ಬಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ನಾಗರಾಜ್ ಮೇಲೆ ಮುನಿಸಿದೆ. ಪಟ್ಟಣ ಪಂಚಾಯಿತಿ ಸದಸ್ಯರನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಗುಬ್ಬಿ ಕ್ಷೇತ್ರದಲ್ಲಿ ನಡೆದ ಜೆಡಿಎಸ್ ಪಂಚರತ್ನ ಯಾತ್ರೆ ವೇಳೆ ನಮ್ಮನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Kichcha Sudeepa: ʻಕಿಚ್ಚ 46ʼ ಟ್ರೆಂಡ್‌, ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ನಟ ಸುದೀಪ್‌! 3 ಸಿನಿಮಾಕ್ಕೆ ಸಿದ್ಧತೆ

ವಿವಿಧ ಸಭೆ, ಸಮಾರಂಭ ಕಾರ್ಯಕ್ರಮಗಳಿಗೆ ಆಹ್ವಾನ ನೀಡದೇ ಪಟ್ಟಣ ಪಂಚಾಯಿತಿ ಸದಸ್ಯರನ್ನು ನಿರ್ಲಕ್ಷ್ಯ ಮಾಡುತ್ತಾ ಬರುತ್ತಿದ್ದಾರೆ. ಶ್ರೀನಿವಾಸ್‌ ಜೆಡಿಎಸ್ ಬಿಟ್ಟ ಮೇಲೆ ನಮ್ಮನ್ನು ಕಡೆಗಣಿಸಲಾಗಿದೆ. ಇದಕ್ಕಾಗಿ ನಾವು ಜೆಡಿಎಸ್‌ನಲ್ಲಿ ಇದ್ದುಕೊಂಡೇ ಬಾಹ್ಯ ಬೆಂಬಲವನ್ನು ಕೊಡುತ್ತೇವೆ ಎಂದು ಹೇಳಿದ್ದಾರೆ.

ಅಲ್ಲದೆ, ಪಕ್ಷೇತರವಾಗಿ ಗೆದ್ದು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾಗಿದ್ದ ಮಹಾಲಕ್ಷ್ಮಿ ಕೂಡ ವಾಸಣ್ಣ ಅವರಿಗೆ ಸಪೋರ್ಟ್ ಮಾಡುವುದಾಗಿ ತಿಳಿಸಿದ್ದಾರೆ. ಇನ್ನುಳಿದಂತೆ ರೇಣುಕಾಪ್ರಸಾದ್, ಮೋಹನ್ ಕುಮಾರ್‌, ಮಂಗಳಮ್ಮ, ಶ್ವೇತಾ ಸೇರಿದಂತೆ ಒಟ್ಟು 10 ಸದಸ್ಯರು ಜಂಟಿ ಸುದ್ದಿಗೋಷ್ಠಿ ನಡೆಸಿ ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈಗಾಗಲೇ ನಾವು ಗುಬ್ಬಿ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಗೆ ಮನವಿ ಮಾಡಿದ್ದೇವೆ ಎಂದೂ ಹೇಳಿದ್ದಾರೆ.

ಗುಬ್ಬಿ ಜೆಡಿಎಸ್‌ ಶಾಸಕ ಶ್ರೀನಿವಾಸ್ ರಾಜೀನಾಮೆ ಅಂಗೀಕಾರ

ಬೆಂಗಳೂರು: ಗುಬ್ಬಿ ಜೆಡಿಎಸ್‌ ಶಾಸಕ ಎಸ್‌.ಆರ್. ಶ್ರೀನಿವಾಸ್ ಅವರು ನೀಡಿರುವ ರಾಜೀನಾಮೆ ಅಂಗೀಕಾರವಾಗಿತ್ತು. 15ನೇ ವಿಧಾನಸಭೆಗೆ (Karnataka Election) ಆಯ್ಕೆಯಾಗಿದ್ದ ಎಸ್‌.ಆರ್‌. ಶ್ರೀನಿವಾಸ್‌ ಅವರ ರಾಜೀನಾಮೆಯನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಂಗೀಕರಿಸಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ. ಸೋಮವಾರ (ಮಾ. 27) ಬೆಳಗ್ಗೆ ಶಾಸಕ ಶ್ರೀನಿವಾಸ್ ರಾಜೀನಾಮೆ ಪತ್ರವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡಿದ್ದರು. ಇದಕ್ಕೆ ಸ್ಪೀಕರ್‌ ಅಂಗೀಕಾರ ನೀಡಿದ್ದಾರೆ. ಗುಬ್ಬಿ ಶ್ರೀನಿವಾಸ್ ರಾಜೀನಾಮೆಯಿಂದ ತೆರವಾಗಿರುವ ಒಂದು ಸ್ಥಾನದ ಬಗ್ಗೆ ಮುಖ್ಯ ಚುನಾವಣಾಧಿಕಾರಿಗೆ ಎಂ.ಕೆ.ವಿಶಾಲಾಕ್ಷಿ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: UPI Transaction : ಮಾರ್ಚ್‌ನಲ್ಲಿ ಯುಪಿಐ ಮೂಲಕ ಹೊಸ ದಾಖಲೆಯ 14 ಲಕ್ಷ ಕೋಟಿ ರೂ. ವರ್ಗಾವಣೆ

ಉಚ್ಚಾಟನೆ ಮಾಡಲಾಗಿತ್ತು

ಕಳೆದ ವರ್ಷ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ವಿಪ್‌ ಉಲ್ಲಂಘಿಸಿ ಕಾಂಗ್ರೆಸ್‌ ಕಡೆಗೆ ವಾಲಿದ್ದ ಗುಬ್ಬಿ ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ಶಾಸಕ ಸ್ಥಾನಕ್ಕೆ ಸೋಮವಾರ ಬೆಳಗ್ಗೆ ರಾಜೀನಾಮೆ ನೀಡಿದ್ದರು. ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರವನ್ನು ಶ್ರೀನಿವಾಸ್‌ ಸಲ್ಲಿಸಿದ್ದರು. 2022ರ ಜೂನ್‌ನಲ್ಲಿ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ವಿಪ್‌ ಉಲ್ಲಂಘನೆ ಮಾಡಿದ ನಂತರ ಎಚ್‌.ಡಿ. ಕುಮಾರಸ್ವಾಮಿ ಸೇರಿ ಅನೇಕರ ಕುರಿತು ಶ್ರೀನಿವಾಸ್‌ ವಾಗ್ದಾಳಿ ನಡೆಸಿದ್ದರು. ಬಳಿಕ ಶ್ರೀನಿವಾಸ್‌ ಆಪ್ತರನ್ನು ಜೆಡಿಎಸ್‌ ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಅದಾದ ನಂತರ ಪಕ್ಷಕ್ಕೆ ಆಹ್ವಾನಿಸುವ ಪ್ರಯತ್ನವನ್ನು ರಾಜ್ಯ ಜೆಡಿಎಸ್‌ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ನಡೆಸಿದ್ದರಾದರೂ ಸಫಲವಾಗಿರಲಿಲ್ಲ.‌

ರಾಜೀನಾಮೆ ನೀಡುವುದಕ್ಕೂ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಜಮೀರ್ ಅಹಮದ್, ಕಾಂತರಾಜು, ಪಾವಗಡ ಅಭ್ಯರ್ಥಿ ವೆಂಕಟೇಶ್ ಉಪಸ್ಥಿತರಿದ್ದರು. ನಂತರ ಮಾತನಾಡಿದ್ದ ಶ್ರೀನಿವಾಸ್‌, ನಮ್ಮ ತಾಲೂಕಿನಲ್ಲಿರುವ ಎಲ್ಲ ಮುಖಂಡರ ಜೊತೆ ಮಾತನಾಡಿ ಇದೇ ತಿಂಗಳ 30 ರಂದು ಕಾಂಗ್ರೆಸ್‌ ಸೇರುತ್ತೇನೆ ಎಂದು ಮಾಹಿತಿ ನೀಡಿದ್ದರು.

ಇದನ್ನೂ ಓದಿ: Audio Viral: ಸ್ಥಳೀಯ ಮುಖಂಡನಿಗೆ ಬೆದರಿಕೆ ಹಾಕಿದರೇ ಬಿಜೆಪಿ ಶಾಸಕ?: ಆಡಿಯೊ ವೈರಲ್

ಕಳೆದ 20 ವರ್ಷಗಳಿಂದ ನನಗೆ ಜನತಾದಳದಲ್ಲಿ ಕೆಲಸ ಮಾಡುವುದಕ್ಕೆ ಅವಕಾಶ ಕೊಟ್ಟಿದ್ದಕ್ಕೆ ದೇವೇಗೌಡರಿಗೆ, ಕುಮಾರಸ್ವಾಮಿ, ರೇವಣ್ಣ ಪಕ್ಷದ ಎಲ್ಲರಿಗೂ ಧನ್ಯವಾದಗಳು. 20 ವರ್ಷಗಳಿಂದ ಭಾವನಾತ್ಮಕ ಸಂಬಂಧವನ್ನು ಇಟ್ಟುಕೊಂಡಿದ್ದೇನೆ. ಎಲ್ಲ ಶಾಸಕರು ಪಕ್ಷದಲ್ಲೇ ಉಳಿದುಕೋ ಅಂತ ಒತ್ತಾಯ ಮಾಡ್ತಿದ್ದಾರೆ. ಆದರೆ, ನಾನು ಹಲವು ಕಾರಣಗಳಿಂದ ಪಕ್ಷ ಬಿಡಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದರು.

Exit mobile version