Site icon Vistara News

SR Srinivas: ಅಧಿಕಾರಿಯನ್ನು ನೀನ್ಯಾವನೋ ಬೋ…ಮಗ ಎಂದು ಬೈದ ಗುಬ್ಬಿ ಶಾಸಕ; ವಿಡಿಯೊ ವೈರಲ್‌

GUBBI MLA

ತುಮಕೂರು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಸರ್ಕಾರಿ ಅಧಿಕಾರಿಯನ್ನು ಶಾಸಕ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೊ ವೈರಲ್ ಆಗಿದೆ. ಮಾ. 4ರಂದು ಗುಬ್ಬಿ ಪಟ್ಟಣದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನಡೆದ ಘಟನೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಗುಬ್ಬಿ ಸಿಡಿಪಿಒ ಮಹೇಶ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಶಾಸಕ ಎಸ್.ಆರ್.ಶ್ರೀನಿವಾಸ್, ನೀನ್ಯಾವನೋ ಬೋ…ಮಗ ಎಂದು ಬೈದಿರುವುದು ಕಂಡುಬಂದಿದೆ. ಸಿಡಿಪಿಒ ಮಹೇಶ್ ವಿರುದ್ಧ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಘಟಕದ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸ್ಥಳಕ್ಕೆ ಆಗಮಿಸಿದ್ದ ಶಾಸಕ, ಅಧಿಕಾರಿಯನ್ನು ತರಾಟೆ ತೆಗೆದುಕೊಂಡಿದ್ದರು.

ತಮ್ಮ ಕೆಲಸ ಕಿತ್ತುಕೊಂಡು ವೇತನ ನೀಡದೆ ಬೀದಿಪಾಲು ಮಾಡಿದ್ದಾರೆ ಎಂದು ಆರೋಪಿಸಿ ಸಿಡಿಪಿಒ ವಿರುದ್ಧ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿ, ಎಲ್ಲರ ಎದುರೇ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದ ಶಾಸಕ, ಒಂದು ಸಣ್ಣ ಹಲ್ಲುಕಡ್ಡಿ ಅಲ್ಲಾಡಿದರೂ ಪಿಡಿಒಗಳು, ಅಧಿಕಾರಿಗಳು ನನ್ನ ಗಮನಕ್ಕೆ ತರುತ್ತಾರೆ. ನಿನಗೇನಾಗಿತ್ತು ದೊಡ್ಡ ರೋಗ ಎಂದು ಅವಾಚ್ಯ ಶಬ್ದಗಳಿಂದ ಅಧಿಕಾರಿಯನ್ನು ನಿಂದಿಸಿದ್ದರು. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಇದನ್ನೂ ಓದಿ | Lok Sabha Election 2024: ಮನವೊಲಿಕೆ ಯತ್ನ ವಿಫಲ; ಪಕ್ಷೇತರ ಸ್ಪರ್ಧೆ, ಮೋದಿಗೆ ಬೆಂಬಲ ಎಂದ ಈಶ್ವರಪ್ಪ

ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್‌ಗೆ ಬೇಲ್ ವಿಳಂಬ; ಬಂಧನ ಭೀತಿ

Gubbi MLA SR Srinivas bail delayed Fear of arrest

ತುಮಕೂರು: ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ (SR Srinivas) ಅವರಿಗೆ ಹಲ್ಲೆ ಪ್ರಕರಣವೊಂದರಲ್ಲಿ ಈಗ ಬಂಧನ ಭೀತಿ ಎದುರಾಗಿದೆ. ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ, ಜಾಗತಿಕ ಲಿಂಗಾಯತ ವೇದಿಕೆ ರಾಜ್ಯ ಸಂಚಾಲಕ ರಾಯಸಂದ್ರ ರವಿಕುಮಾರ್ (Rayasandra Ravikumar) ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಘಟನೆ ನಡೆದು 48 ಗಂಟೆಗಳ ಬಳಿಕ ಎಫ್‌ಐಆರ್ ದಾಖಲಾಗಿತ್ತು. ಆದರೆ, ಈಗ ಈ ಪ್ರಕರಣದಲ್ಲಿ ಬೇಲ್‌ ಸಿಗಲು ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಶಾಸಕರಿಗೆ ಬಂಧನ ಭೀತಿ ಎದುರಾಗಿದೆ.

ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಇದರಲ್ಲಿ ಈಘ ಬಂಧನ ಭೀತಿ ಎದುರಾಗಿದೆ. ಐಪಿಸಿ ಸೆಕ್ಷನ್ 511, 506, 504, 143, 149, 323, 363 ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಇದರಲ್ಲಿ ಗುಂಪು ಗಲಭೆಯಲ್ಲಿ ಭಾಗಿಯಾಗಿರುವುದು, ತೀವ್ರ ಗಾಯ ಮಾಡಿರುವುದು ಹಾಗೂ ಅಪಹರಣ ಆರೋಪದ ಮೇಲೆ ಪ್ರಕರಣವನ್ನು ದಾಖಲು ಮಾಡಲಾಗಿದೆ.

ರಾಯಸಂದ್ರ ರವಿಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ವಿರುದ್ಧ ಎಫ್ಐಆರ್ ಅನ್ನು ಪೊಲೀಸರು ದಾಖಲು ಮಾಡಲಾಗಿತ್ತು. ಈ ಸಂಬಂಧ ಎಸ್.ಆರ್. ಶ್ರೀನಿವಾಸ್ ಅವರು ಜನಪ್ರತಿನಿಧಿಗಳ ಕೋರ್ಟ್‌ನಿಂದ ಬೇಲ್ ಪಡೆಯಬೇಕಿತ್ತು. ಆದರೆ, ಇಂದು ಭಾನುವಾರ ಆಗಿರುವ ಹಿನ್ನೆಲೆ ಬೇಲ್ ಸಿಗುವುದು ವಿಳಂಬವಾಗುತ್ತಿದೆ. ಬೇಲ್‌ಗಾಗಿ ಇನ್ನೂ ಕನಿಷ್ಠ 2 ದಿನ ಕಾಯಬೇಕಿರುವುದರಿಂದ ಎಸ್.ಆರ್. ಶ್ರೀನಿವಾಸ್‌ಗೆ ಈಗ ಬಂಧನ ಭೀತಿ ಎದುರಾಗಿದೆ.

ಟೆಂಡರ್‌ ಗಲಾಟೆಯೇ ಕಾರಣ

ತುಮಕೂರು ಜಿಲ್ಲೆಯ ಗುಬ್ಬಿ, ತಿಪಟೂರು ತಾಲೂಕುಗಳ ಗಣಿಬಾಧಿತ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ 2023ರ ಸೆಪ್ಟೆಂಬರ್‌ನಲ್ಲಿ ಟೆಂಡರ್‌ ಕರೆಯಲಾಗಿತ್ತು. ರಾಯಸಂದ್ರ ರವಿಕುಮಾರ್ ಅವರಿಗೆ ಟೆಂಡರ್‌ ಆಗಿತ್ತು. ಕೊನೆಯ ಕ್ಷಣದಲ್ಲಿ ದಾಖಲೆ ಸಹಿತ ಟೆಂಡರ್ ಕರಾರು ಮಾಡಿಕೊಳ್ಳಲು ಹೋದಾಗ ನಿಮ್ಮ ಟೆಂಡರ್‌ ರದ್ದಾಗಿದೆ ಎಂದು ರಾಯಸಂದ್ರ ರವಿಕುಮಾರ್ ಅವರಿಗೆ ಹೇಳಲಾಗಿದೆ ಎಂಬುದು ಆಕ್ರೋಶಕ್ಕೆ ಕಾರಣವಾಗಿತ್ತು. ಇದೇ ಕಾರಣಕ್ಕೆ ಅವರು ಕಾರ್ಯಪಾಲಕ ಎಂಜಿನಿಯರ್‌ ತಿಮ್ಮರಾಯಪ್ಪ ವಿರುದ್ಧ ತಡರಾತ್ರಿಯಲ್ಲಿ ಪಿಡಬ್ಲ್ಯುಡಿ ಇಲಾಖೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಲಾಗಿತ್ತು.

ಇದನ್ನೂ ಓದಿ: Lok Sabha Election 2024: 28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ದಿಗ್ವಿಜಯ; ಈ ಆತ್ಮವಿಶ್ವಾಸಕ್ಕೆ ಕಾರಣ ಬಿಚ್ಚಿಟ್ಟ ವಿಜಯೇಂದ್ರ

ಈ ವೇಳೆ ಗಲಾಟೆ ನಡೆದಿದ್ದರಿಂದ ಕಾಂಗ್ರೆಸ್‌ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ, ಜಾಗತಿಕ ಲಿಂಗಾಯತ ವೇದಿಕೆ ರಾಜ್ಯ ಸಂಚಾಲಕ ರಾಯಸಂದ್ರ ರವಿಕುಮಾರ್‌ ಮೇಲೆ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಎಸ್‌.ಆರ್‌. ಶ್ರೀನಿವಾಸ್‌ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಯಿತು. ಈ ಗಲಾಟೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರವಿಕುಮಾರ್‌ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಗುರುವಾರ ರಾತ್ರಿ ಜಿಲ್ಲಾಸ್ಪತ್ರೆಯಲ್ಲೇ ಪೊಲೀಸರು ರಾಯಸಂದ್ರ ರವಿಕುಮಾರ್ ಅವರ ಹೇಳಿಕೆ ದಾಖಲಿಸಿಕೊಂಡಿದ್ದರು. ಆದರೆ, ಶ್ರೀನಿವಾಸ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿರಲಿಲ್ಲ ಎನ್ನಲಾಗಿದೆ. ಇದರ ಜತೆಗೆ ರವಿಕುಮಾರ್‌ ಅವರ ಅಪಹರಣ ಯತ್ನವನ್ನೂ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈಗ ಈ ಕೇಸ್‌ನಲ್ಲಿ ಶ್ರೀನಿವಾಸ್‌ಗೆ ಬಂಧನ ಭೀತಿ ಎದುರಾಗಿದೆ.

Exit mobile version