ಉಡುಪಿ
Karnataka Election 2023: ಬೈಂದೂರಿನಲ್ಲಿ ಗುರುರಾಜ ಗಂಟಿಹೊಳೆಗೆ ಗೆಲುವು ನಿಶ್ಚಿತ; ಯಡಿಯೂರಪ್ಪ ಅಭಯ
Assembly Election: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಪರವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಬ್ಬರದ ಪ್ರಚಾರ ನಡೆಸಿದ್ದಾರೆ. ಅಲ್ಲದೆ, ಅವರನ್ನು ಸೋಲಿಸುವುದಾಗಿ ಹೇಳಿಕೆ ನೀಡಿರುವವರಿಗೆ ತಿರುಗೇಟು ನೀಡಿದ್ದು, ಗುರುರಾಜ್ ಅವರ ಗೆಲುವು ನಿಶ್ಚಿತ ಎಂದು ಹೇಳಿದ್ದಾರೆ.
ಬೈಂದೂರು: ಯಾರೋ ಒಂದಿಬ್ಬರು ನಮ್ಮ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರನ್ನು ಸೋಲಿಸುತ್ತೇವೆ ಎಂದು ಮಾತನಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಅದಕ್ಕೆ ನೀವು ಯಾರೂ ಕಿವಿಕೊಡುವ ಅಗತ್ಯವಿಲ್ಲ. ನಿಮ್ಮ ಯಡಿಯೂರಪ್ಪ ನಾನಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ (Karnataka Election 2023) ನೂರಕ್ಕೆ ನೂರರಷ್ಟು ನಮ್ಮ ಅಭ್ಯರ್ಥಿ ಗುರುರಾಜ ಗಂಟಿಹೊಳೆ (Gururaja Gantihole) ಅವರು ಗೆಲ್ಲುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಸ್ಪಷ್ಟವಾಗಿ ಹೇಳಿದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ನಾನು ಹಾಗೂ ಸಂಸದ ಬಿ.ವೈ. ರಾಘವೇಂದ್ರ ಎಲ್ಲರೂ ಗುರುರಾಜ ಗಂಟಿಹೊಳೆ ಜತೆಗಿದ್ದೇವೆ. ನಾವೆಲ್ಲರೂ ಸೇರಿ ಅವರ ಪರ ಕೆಲಸ ಮಾಡುತ್ತೇವೆ. ನಾವೆಲ್ಲರೂ ಅವರ ಪರವಾಗಿ ಇದ್ದ ಮೇಲೆ ಯಾವುದೇ ಭಯ, ಆತಂಕ ಬೇಡ. ಯಾರೋ ಒಂದಿಬ್ಬರು ಇಡೀ ಚುನಾವಣೆಯನ್ನು ನಿರ್ಧಾರ ಮಾಡಲು ಆಗುವುದಿಲ್ಲ ಎಂದು ಗುಡುಗಿದರು.
ತನಗೆ ಎಲ್ಲವೂ ಬೇಕು. ಆದರೆ, ತನಗೆ ಸಿಗದೇ ಬೇರೆಯವರಿಗೆ ಸಿಕ್ಕರೆ ಅದನ್ನು ನಾನು ವಿರೋಧ ಮಾಡುತ್ತೇನೆ ಎಂಬ ಪ್ರವೃತ್ತಿ ಸರಿಯಲ್ಲ. ಇಂತಹ ಪ್ರವೃತ್ತಿಯನ್ನು ಯಾವುದೇ ಕಾರಣಕ್ಕೂ ಪ್ರೋತ್ಸಾಹ ಮಾಡಬಾರದು. ಮತದಾರರಾದ ನೀವೆಲ್ಲರೂ ಸೇರಿ ಅದನ್ನು ಖಂಡಿಸಬೇಕು ಎಂದು ಬಿ.ಎಸ್. ಯಡಿಯೂರಪ್ಪ ಕರೆ ನೀಡಿದರು.
ಅಪ ಪ್ರಚಾರ ಮಾಡಿದವರಿಗೆ ಬಿ.ಎಸ್. ಯಡಿಯೂರಪ್ಪ ಹೇಳಿದ್ದೇನು?
ಗಂಟಿಹೊಳೆಗಿದೆ ದೊಡ್ಡ ಯುವ ಅಭಿಮಾನಿ ಬಳಗ
ಬಿಜೆಪಿಯಲ್ಲಿ ಈ ಬಾರಿ ಹೊಸ ಬೆಳವಣಿಗೆಯಾಗಿದ್ದು, ಹಾಲಿ ಶಾಸಕ ಸುಕುಮಾರ ಶೆಟ್ಟಿ ಅವರಿಗೆ ಟಿಕೆಟ್ ನೀಡದೆ ಸಾಮಾನ್ಯ ಕಾರ್ಯಕರ್ತರಾದ, ಬರಿಗಾಲ ಸೇವಕ, ಪದವೀಧರ ಗುರುರಾಜ ಶೆಟ್ಟಿ ಗಂಟಿಹೊಳೆ ಅವರಿಗೆ ಟಿಕೆಟ್ ನೀಡಲಾಗಿದೆ. ಸಂಘದ ಶಾಖೆಯಲ್ಲಿ ಪಳಗಿದ ಗುರುರಾಜ ಗಂಟಿಹೊಳೆ ಅವರಿಗೆ ಕ್ಷೇತ್ರದಲ್ಲಿ ದೊಡ್ಡ ಯುವ ಅಭಿಮಾನಿ ಬಳಗವಿದೆ. ಸರಳ ಜೀವನಕ್ಕೆ ಹೆಸರುವಾಸಿಯಾಗಿರುವ ಗುರುರಾಜ ಗಂಟಿಹೊಳೆಯವರ ನಡೆಯು ಗ್ರಾಮೀಣ ಜನರ ಮನಸ್ಸನ್ನು ಸೆಳೆಯುತ್ತಿದೆ. ಇಂಥ ಆದರ್ಶ, ಪ್ರಾಮಾಣಿಕ ವ್ಯಕ್ತಿ ಗೆಲ್ಲಬೇಕು ಎಂಬ ಮಾತು ಕ್ಷೇತ್ರಾದ್ಯಂತ ಕೇಳಿ ಬರುತ್ತಿದೆ. ಬಿಜೆಪಿ ಮತ್ತು ಸಂಘ ಪರಿವಾರದ ಹಿರಿಯರೂ ಗಂಟಿಹೊಳೆ ಪರವಾಗಿ ಚುರುಕಿನಿಂದ ಪ್ರಚಾರ ಮಾಡುತ್ತಿದ್ದಾರೆ.
ಇದನ್ನೂ ಓದಿ: Karnataka Election: ಮೇ 7ರಂದು ಆಯನೂರಿನಲ್ಲಿ ಮೋದಿ ಚುನಾವಣಾ ಪ್ರಚಾರ; 3 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ ನಿರೀಕ್ಷೆ
ಗುರುರಾಜ ಶೆಟ್ಟಿ ಗಂಟಿಹೊಳೆ ಸಮಾಜ ಸೇವೆ
ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಉಪ್ಪುಂದದ ಬಳಿಯ ಗಂಟಿಹೊಳೆಯಲ್ಲಿ ಜನಿಸಿದರು. ಪತ್ರಿಕೋದ್ಯಮದಲ್ಲಿ ಉನ್ನತ ಶಿಕ್ಷಣ ಪೂರೈಸಿದ ಬಳಿಕ ಆರ್‌ಎಸ್‌ಎಸ್‌ನ ಪೂರ್ಣಾವಧಿ ಪ್ರಚಾರಕರಾದರು. ಈ ರೀತಿ ಹತ್ತು ವರ್ಷ ಪ್ರಚಾರಕರಾಗಿದ್ದ ನಂತರ ತಮ್ಮೂರಿಗೆ ವಾಪಸಾದರು. ಆನಂತರ ಉಡುಪಿ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿಯಾಗಿ ಹೊಣೆ ನಿರ್ವಹಿಸಿದರು. ಈ ನಡುವೆ ಉದ್ಯಮವನ್ನು ಆರಂಭಿಸಿ ನೂರು ಜನರಿಗೆ ಕೆಲಸ ಕೊಟ್ಟರು. ಉದ್ಯಮ ವಿಸ್ತರಣೆ ಸಂದರ್ಭದಲ್ಲಿ ಹಿನ್ನಡೆಯಾಗಿ ಅಲ್ಲಿಂದ ಹೊರಬಂದರು. ಜತೆಗೆ ಸಂಪೂರ್ಣ ಸಮಾಜ ಸೇವೆಯಲ್ಲೇ ತೊಡಗಿಸಿಕೊಂಡು, ಈಶಾನ್ಯ ರಾಜ್ಯಗಳ ಮಕ್ಕಳ ಶಿಕ್ಷಣದತ್ತ ಗಮನಹರಿಸಿದರು. ಹೀಗೆ ಬೈಂದೂರಿನಲ್ಲಿಯೂ ಅನೇಕ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರು ಈ ಬಾರಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದಾರೆ.
ಉಡುಪಿ
Weather Report: ಬಿಪರ್‌ಜಾಯ್ ಸೈಕ್ಲೋನ್ ಎಫೆಕ್ಟ್; ರಾಜ್ಯಾದ್ಯಂತ ಇನ್ನೂ 4 ದಿನ ಜಡಿ ಮಳೆ
Weather Report: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಎದ್ದಿದ್ದು, ಇದರ ಪ್ರಭಾವದಿಂದಾಗಿ ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.
ಬೆಂಗಳೂರು: ಬಿಪರ್‌ಜಾಯ್ ಸೈಕ್ಲೋನ್ (Cyclone Biporjoy) ಎಫೆಕ್ಟ್‌ನಿಂದಾಗಿ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಮಳೆಯ ಅಬ್ಬರ (Weather Report) ಇರಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಗದಗ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಬಾಗಲಕೋಟೆ, ಧಾರವಾಡ, ಹಾವೇರಿಯಲ್ಲಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಲ್ಲೂ ಮಳೆಯ ಅಬ್ಬರ ಇರಲಿದೆ. ವಿಜಯನಗರ, ದಾವಣಗೆರೆಯಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ.
ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ತಾಪಮಾನ ಏರಿಕೆ ಮುನ್ಸೂಚನೆ
ಮಳೆ ಎಚ್ಚರಿಕೆಯ ನಡುವೆಯೂ ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಹೆಚ್ಚಾಗುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ಯಿಂದ 60 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣ ಇರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇದನ್ನೂ ಓದಿ: Cyclone Biparjoy: ಬಿಪರ್‌ಜಾಯ್ ಚಂಡಮಾರುತ ಭೀತಿ; ಈ ಪದದ ಅರ್ಥ ಏನು? ಮೊದಲು ಎಲ್ಲಿ ಬಳಕೆ?
ಮಂಗಳವಾರ (ಜೂ.6) ಶಿವಮೊಗ್ಗದ ಹೊಳೆಹೊನ್ನೂರು, ಹಾಸನದ ಚನ್ನರಾಯಪಟ್ಟಣದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಕಲಬುರಗಿಯ ಮಹಾಗಾವ್, ಯಾದಗಿರಿಯ ಶೋರಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಗರಿಷ್ಠ ಉಷ್ಣಾಂಶ 39.9 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Text Book: ಋಣ ತೀರಿಸಲು ಪಠ್ಯದಲ್ಲಿ ಗುಲಾಮಿ ಚಿಂತನೆ ತುರುಕುತ್ತಿರುವ ಸಿದ್ದರಾಮಯ್ಯ: ಸುನಿಲ್ ಕುಮಾರ್ ಕೆಂಡ
V Sunil Kumar: ಪಠ್ಯಪುಸ್ತಕ ಬದಲಾವಣೆ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮಾಜಿ ಸಚಿವ ವಿ. ಸುನಿಲ್ ಕುಮಾರ್ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಅಲ್ಲದೆ, ಶಿಕ್ಷಣದಲ್ಲಿ ಗುಲಾಮಿ ಪದ್ಧತಿಯನ್ನು ಹೇರಲು ಹೊರಟಿದ್ದಾರೆಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಉಡುಪಿ: ರಾಜ್ಯದಲ್ಲೀಗ ಗ್ಯಾರಂಟಿಗಳ ಹೊರತಾಗಿ “ಶಿಕ್ಷಣ” ಕ್ಷೇತ್ರವೂ ಭಾರಿ ಸುದ್ದಿಯಲ್ಲಿದೆ. ಪಠ್ಯ ಪುಸ್ತಕದಲ್ಲಿ (Text Book) ಕೆಲವು ಬದಲಾವಣೆಗಳನ್ನು ತರುವುದಾಗಿ ನೀಡಿರುವ ಹೇಳಿಕೆಗೆ ಬಿಜೆಪಿ ಕೆಂಡವಾಗಿದೆ. ಈ ಬಗ್ಗೆ ಮಾಜಿ ಸಚಿವ ವಿ. ಸುನಿಲ್ ಕುಮಾರ್ (V Sunil Kumar) ತೀವ್ರ ಆಕ್ರೋಶವನ್ನು ಹೊರಹಾಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ವಿರುದ್ಧ ಕಿಡಿಕಾರಿದ್ದಾರೆ.
ಆರ್‌ಎಸ್‌ಎಸ್ ಸಂಸ್ಥಾಪಕ ಡಾ. ಕೇಶವ ಬಲಿರಾಮ್ ಹೆಡ್ಗೇವಾರ್, ಚಕ್ರವರ್ತಿ ಸೂಲಿಬೆಲೆ ವಿರಚಿತ “ತಾಯಿ ಭಾರತಿ” ಹಾಗೂ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರ ಪಠ್ಯವನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿರುವ ಬಗ್ಗೆ ಮಾಜಿ ಸಚಿವ ಸುನಿಲ್ ಕುಮಾರ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ನಿಮ್ಮನ್ನು ಎರಡನೇ ಬಾರಿಗೆ ಮುಖ್ಯಮಂತ್ರಿ
ಮಾಡಿದ್ದಾರೆಂಬ ಋಣ ತೀರಿಸಿಕೊಳ್ಳುವುದಕ್ಕಾದರೂ ಗುಲಾಮಿ ಚಿಂತನೆಯನ್ನು ಶಿಕ್ಷಣದಲ್ಲಿ ತುರುಕುತ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ: Liquor Price Hike : ಕಿಕ್ ಪ್ರಿಯರಿಗೆ ಶಾಕ್; ಮದ್ಯದ ದರ ಹೆಚ್ಚಳ, ಇದು ʼಗ್ಯಾರಂಟಿʼ ಎಫೆಕ್ಟ್!
ಈ ಕುರಿತು ಮಾಜಿ ಸಚಿವ ಸುನೀಲ್ ಕುಮಾರ್ ಸರಣಿ ಟ್ವೀಟ್ ಮಾಡಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಟ್ವೀಟ್ ಹೀಗಿದೆ.
- ಅಧಿಕಾರಕ್ಕೆ ಬಂದು ತಿಂಗಳು ಕಳೆಯುವಷ್ಟರಲ್ಲೇ ಸಿದ್ದರಾಮಯ್ಯ ಸರ್ಕಾರ ಪಠ್ಯಪುಸ್ತಕ ಪರಿಷ್ಕರಣೆಗೆ ಕೈ ಹಾಕಿದೆ. ಪಠ್ಯದಲ್ಲಿ ಭಾರತೀಯತೆ, ಸಂಸ್ಕೃತಿ ಹಾಗೂ ಇತಿಹಾಸದ ನೈಜ ಸತ್ಯಗಳೇನು ಎಂಬುದು ವಿದ್ಯಾರ್ಥಿಗಳಿಗೆ ತಿಳಿಯದಂತೆ ಮುಚ್ಚಿಡುವುದು ಸರ್ಕಾರದ ಉದ್ದೇಶವೇ? ಶಾಲೆಗಳಿಗೆ ಪಠ್ಯ- ಪುಸ್ತಕ ಪೂರೈಕೆಯಾದ ನಂತರ
ಪರಿಷ್ಕರಣೆಯ ಹಠವೇಕೆ? - ಮಾನ್ಯ ಸಿದ್ದರಾಮಯ್ಯನವರೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಇಲಾಖೆಯ ಇತರೆ ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುವುದಕ್ಕಾದರೂ ಅವಕಾಶ ಕೊಡಿ. ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಕಲಿಸುವ ಪಾಠ ಯಾವುದೆಂದು ನಿರ್ಧರಿಸಿ ಎಂದು ನೀವು ಪಾಠ ಮಾಡಬೇಡಿ
- ನಾನು ಮೇಷ್ಟ್ರಾಗಿದ್ದೆ ಕಣ್ರಿ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡುವುದಕ್ಕೆ ಮುನ್ನ ವಿದ್ಯಾರ್ಥಿ ಹಾಗೂ ಶಿಕ್ಷಕರ ಸಮಸ್ಯೆ ಮೊದಲು ಅರ್ಥ ಮಾಡಿಕೊಳ್ಳಿ. ಪಠ್ಯ ಪರಿಷ್ಕರಣೆ ಬಗ್ಗೆ ನಿಮಗಿರುವ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು ನಿಯಂತ್ರಿಸುತ್ತಿರುವ ಅನುಮಾನ ಬರುತ್ತಿದೆ.
- ಸಿದ್ದರಾಮಯ್ಯನವರೇ ನಿಮಗೆ ಶ್ರೇಷ್ಠ ಭಾರತೀಯ ಚಿಂತನೆಗಳು, ನಿಜವಾದ ಆದರ್ಶ ಪುರುಷ ಯಾರಾಗಬೇಕು ? ತಾಯಿ ಭಾರತೀಯ ಅಮರಪುತ್ರರು ಎಂಬ ವಿಚಾರಗಳು ಹೇಗೆ ಇಷ್ಟವಾಗುತ್ತದೆ ಹೇಳಿ? ನಿಮ್ಮ ದೃಷ್ಟಿಯಲ್ಲಿ ಶಾಲಾ ಪಠ್ಯದಲ್ಲಿ ನಕಲಿ ಗಾಂಧಿ ಕುಟುಂಬದ ಚರಿತ್ರೆ, ವಿದೇಶಿ ದಾಳಿಯ ವಿಕೃತಿಗಳು ಮಾತ್ರ ತುಂಬಿರಬೇಕಲ್ಲವೇ ?
- ನಿಮ್ಮನ್ನು ಎರಡನೇ ಬಾರಿಗೆ ಮುಖ್ಯಮಂತ್ರಿ ಮಾಡಿದ್ದಾರೆಂಬ ಋಣ ತೀರಿಸಿಕೊಳ್ಳುವುದಕ್ಕಾಗಿ ಗುಲಾಮಿ ಚಿಂತನೆಯನ್ನು ಶಿಕ್ಷಣದಲ್ಲಿ ತುರುಕುತ್ತೀರಾ?
ಇದನ್ನೂ ಓದಿ: Murder Case: ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಪತ್ನಿಯ ಕೊಂದ; ತಾನೂ ನೇಣಿಗೆ ಕೊರಳೊಡ್ಡಿದ
ಪಠ್ಯ ಪುಸ್ತಕದಿಂದ ಕೆಲವು ಪಠ್ಯವನ್ನು ಕೈಬಿಡುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸುನಿಲ್ ಕುಮಾರ್, ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು ನಿಯಂತ್ರಣ ಮಾಡುತ್ತಿದ್ದಾರೆಯೇ ಎಂಬ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಗಾಂಧಿ ಕುಟುಂಬದ ಬಗ್ಗೆ ಮಾತ್ರ ಪಠ್ಯದಲ್ಲಿರಬೇಕೇ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದಾರೆ.
ಉಡುಪಿ
Weather Report: ಮತ್ತೆ ಸೈಕ್ಲೋನ್ ಎಫೆಕ್ಟ್; ರಾಜ್ಯಾದ್ಯಂತ ಇನ್ನೂ 5 ದಿನ ಭಾರಿ ಮಳೆ
Weather Report: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ 5 ದಿನಗಳು ಭಾರಿ ಮಳೆಯಾಗುವ ಎಚ್ಚರಿಕೆಯನ್ನು (Rain alert) ಹವಾಮಾನ ಇಲಾಖೆ (Weather Update) ನೀಡಿದೆ. ಈ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ.
ಬೆಂಗಳೂರು: ರಾಜ್ಯಾದ್ಯಂತ ಮೇ 11ರವರೆಗೆ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈಗ ಪ್ರಭಾವ ತೀವ್ರಗೊಂಡಿದೆ. ಮುಂದಿನ 12 ಗಂಟೆಯಲ್ಲಿ ಚಂಡಮಾರುತವಾಗಿ ಪರಿವರ್ತನೆ ಆಗಲಿದೆ. ಇದರ ಪ್ರಭಾವದಿಂದಾಗಿ ರಾಜ್ಯದಲ್ಲಿ ಮುಂದಿನ ಐದು ದಿನಗಳು ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಸೈಕ್ಲೋನ್ ಎಫೆಕ್ಟ್‌ನಿಂದಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬಳ್ಳಾರಿ, ಕೊಡಗು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರಕ್ಕೆ ಯಾವುದೇ ಅಲರ್ಟ್ ನೀಡಿಲ್ಲವಾದರೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ಗುಡುಗು, ಮಿಂಚಿನ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಸಮಯಲ್ಲಿ ಗಾಳಿಯ ವೇಗವು 50 ಕಿ.ಮೀ ದಾಟುವ ಸಾಧ್ಯತೆ ಇದೆ.
ಮೈಸೂರು ಮತ್ತು ಮಂಡ್ಯ, ಹಾವೇರಿ ಮತ್ತು ಧಾರವಾಡ, ವಿಜಯನಗರ, ಬೆಳಗಾವಿ ಮತ್ತು ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಇರಲಿದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Dog Lovers: ಮನೆಯಲ್ಲಿ ನಾಯಿ ಇದೆಯೇ ಎಚ್ಚರ! ನಿಮ್ಮ ಹೊಟ್ಟೆಯಲ್ಲಿ ಬೆಳೆಯಲಿದೆ ವೈರಾಣುಗಡ್ಡೆ
ಉಡುಪಿಯಲ್ಲಿ ಹೈ ಅಲರ್ಟ್
ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಮತ್ತು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರಿಗೆ ಕೆಲವು ಸೂಚನೆಯನ್ನು ನೀಡಿದೆ.
ಮೀನುಗಾರರು, ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಸಮುದ್ರ, ನದಿ ತೀರ ಪ್ರದೇಶಗಳಲ್ಲಿ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನೆರೆ ಪೀಡಿತ, ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ ನೀಡಲಾಗಿದೆ. ಇನ್ನು ಸಹಾಯವಾಣಿಯನ್ನು ತೆರೆದಿದ್ದು, 0820-2574802 ಅಥವಾ ಟೋಲ್ ಫ್ರೀ ನಂಬರ್ 1077 ಕರೆ ಮಾಡಬಹುದಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather report : ಉಡುಪಿ, ದಕ್ಷಿಣ ಕನ್ನಡದಲ್ಲಿ ಗುಡುಗಲಿರುವ ವರುಣ; ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ?
Weather report: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಮಂಗಳವಾರ ಬೀದರ್, ಕಲಬುರಗಿ ಜಿಲ್ಲೆಗಳಿಗೆ ಮಳೆ ಅಲರ್ಟ್ (Rain alert) ನೀಡಲಾಗಿದೆ. ಈ ಕುರಿತ ಹವಾಮಾನ ವರದಿ (weather updates) ಇಲ್ಲಿದೆ.
ಬೆಂಗಳೂರು: ಬೀದರ್‌ನಲ್ಲಿ ಬಿರುಗಾಳಿ ಬೀಸಿದರೆ, ಕಲಬುರಗಿಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಎಚ್ಚರಿಕೆಯನ್ನು (rain News) ಹವಾಮಾನ ಇಲಾಖೆ (Weather Report) ನೀಡಿದೆ. ಮೇ 6, 7 ರಂದು ಬಹುತೇಕ ದಕ್ಷಿಣ ಹಾಗೂ ಉತ್ತರ ಒಳನಾಡು ಸೇರಿದಂತೆ ಕರಾವಳಿಯಲ್ಲಿ ಮಳೆಯ ಅಬ್ಬರ ಇರಲಿದೆ.
ಮಳೆಯ ಜತೆಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀನಷ್ಟು ಇರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಹಾವೇರಿ, ಧಾರವಾಡ ಮತ್ತು ಬೆಳಗಾವಿಯ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ಬಳ್ಳಾರಿ, ಗದಗ, ಕೊಪ್ಪಳ ಮತ್ತು ಬಾಗಲಕೋಟೆಯಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ತುಮಕೂರು ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾತ್ರಿ ಸುರಿದ ಮಳೆಗೆ ಕೆರೆಯಂತಾದ ಅಂಡರ್‌ಪಾಸ್
ಸೋಮವಾರ ರಾತ್ರಿ ಸುರಿದ ಸಾಧಾರಣ ಮಳೆಗೆ ತುಮಕೂರು ನಗರದ ಅಂತರಸನಹಳ್ಳಿ ಮಾರುಕಟ್ಟೆ ಬಳಿಯ ಅಂಡರ್‌ಪಾಸ್ ಕೆರೆಯಂತಾಗಿದೆ. ಅಂಡರ್‌ಪಾಸ್‌ನಲ್ಲಿ ನೀರು ತುಂಬಿದ್ದರಿಂದ ಸಾರ್ವಜನಿಕರ ಓಡಾಟಕ್ಕೆ ಪರದಾಡಬೇಕಾಯಿತು. ಈಗಾಗಲೇ ರಾಜ್ಯ ಸರ್ಕಾರ ಯಾವುದೇ ರೀತಿಯ ಮಳೆ ಅವಘಡಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಲು ಆಯಾ ಜಿಲ್ಲಾಡಳಿತಗಳಿಗೆ ಸೂಕ್ತ ನಿರ್ದೇಶನ ನೀಡಿದೆ. ಆದರೆ ಜಿಲ್ಲಾಡಳಿತ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಇದನ್ನೂ ಓದಿ: Monsoon Driving: ಮಳೆಗಾಲದಲ್ಲಿ ಕಾರು ಪ್ರಯಾಣಕ್ಕೆ ಹೊರಡುವಾಗ ಈ ಟಿಪ್ಸ್ ಗಮನದಲ್ಲಿರಲಿ
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 42 ಡಿ.ಸೆ – 25 ಡಿ.ಸೆ
ಗದಗ: 36 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 35 ಡಿ.ಸೆ – 22 ಡಿ.ಸೆ
ಕಾರವಾರ: 36 ಡಿ.ಸೆ – 27 ಡಿ.ಸೆ
ಮಂಗಳೂರು: 35 ಡಿ.ಸೆ – 26 ಡಿ.ಸೆ
ಹೊನ್ನಾವರ: 33 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 32 ಡಿ.ಸೆ – 22 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ಸುವಚನ17 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ12 hours ago
EPF e-passbook : UMANG ಆ್ಯಪ್ನಲ್ಲಿ ನಿಮ್ಮ ಪಿಎಫ್ ಪಾಸ್ಬುಕ್ ಸುಲಭವಾಗಿ ಪರಿಶೀಲಿಸಿ
-
ಪ್ರಮುಖ ಸುದ್ದಿ14 hours ago
Apply for ration card : ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದು ಹೇಗೆ?
-
ಉತ್ತರ ಕನ್ನಡ22 hours ago
Karwar News: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಇಬ್ಬರು ಅಧಿಕಾರಿಗಳಿಗೆ 2 ವರ್ಷ ಜೈಲು
-
ಪ್ರಮುಖ ಸುದ್ದಿ17 hours ago
Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!
-
ಉತ್ತರ ಕನ್ನಡ23 hours ago
Karwar Accident: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು
-
ಪ್ರಮುಖ ಸುದ್ದಿ23 hours ago
ವಿಸ್ತಾರ ಸಂಪಾದಕೀಯ: ಶಾಲಾ ಬಾಲಕಿಯರಿಗೆ ವಿಷ: ಅಫಘಾನಿಸ್ತಾನದಲ್ಲಿ ಮನುಷ್ಯತ್ವ ಮರುಕಳಿಸುವುದು ಯಾವಾಗ?
-
ಕರ್ನಾಟಕ8 hours ago
Monsoon Season: ಮಂಗಳೂರು ವಿವಿ ಕಾಲೇಜಲ್ಲಿ ಕೈ ತೊಳೆಯೋಕೂ ನೀರಿಲ್ಲ; ರಜೆ ಕೊಟ್ಟ ಆಡಳಿತ ಮಂಡಳಿ!